Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿ ಕಚ್ಚಿದ್ದಕ್ಕೆ ಮಹಿಳೆಯಿಂದ ದೂರು, ಕೋಪದಲ್ಲಿ ಆಕೆಯ ವಾಹನಗಳಿಗೆ ಬೆಂಕಿ ಹಚ್ಚಿದ ಶ್ವಾನ ಮಾಲೀಕ

ಶ್ವಾನವೊಂದು ತನ್ನ ಮೇಲೆ ದಾಳಿ ಮಾಡಿದೆ ಎಂದು ಮಹಿಳೆಯೊಬ್ಬರು ನಾಯಿಯ ಮಾಲೀಕರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಇದರಿಂದ ಕೋಪಗೊಂಡ ಮಾಲೀಕರು ದೂರ ನೀಡಿದ ಮಹಿಳೆ ಮತ್ತು ಆಕೆಯ ಮಗನ ಎರಡು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ಘಟನೆ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಾಯಿ ಕಚ್ಚಿದ್ದಕ್ಕೆ ಮಹಿಳೆಯಿಂದ ದೂರು, ಕೋಪದಲ್ಲಿ ಆಕೆಯ ವಾಹನಗಳಿಗೆ ಬೆಂಕಿ ಹಚ್ಚಿದ ಶ್ವಾನ ಮಾಲೀಕ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on: Oct 25, 2023 | 3:33 PM

ಬೆಂಗಳೂರು, ಅ.25: ಶ್ವಾನವೊಂದು ತನ್ನ ಮೇಲೆ ದಾಳಿ ಮಾಡಿದೆ ಎಂದು ಮಹಿಳೆಯೊಬ್ಬರು ನಾಯಿಯ ಮಾಲೀಕರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಇದರಿಂದ ಕೋಪಗೊಂಡ ಮಾಲೀಕರು ದೂರ ನೀಡಿದ ಮಹಿಳೆ ಮತ್ತು ಆಕೆಯ ಮಗನ ಎರಡು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ಘಟನೆ ಬೆಂಗಳೂರಿನ (bengaluru) ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪುಷ್ಪಾ ಎಂಬ ಮಹಿಳೆ ಮತ್ತು ಆಕೆ ಮಗನಿಗೆ ಸೇರಿದ ವಾಹನಕ್ಕೆ ಬೆಂಕಿ ಹಾಕಿದ್ದಾರೆ. ಇನ್ನು ಈ ಬೆಂಕಿ ಹಾಕಿದರು ಕೊತ್ತನೂರಿನಲ್ಲಿ ರೆಸ್ಟೋರೆಂಟ್ ನಡೆಸುತ್ತಿರುವ ಎಚ್‌ಎಂಟಿ ರಾಜಣ್ಣ ಮತ್ತು ಅವರ ಪುತ್ರಿ ಗಾಯತ್ರಿ ಕಾವ್ಯ ಹಾಗೂ ಮಗ ಬಾಬು ಎಂದು ಗುರುತಿಸಲಾಗಿದೆ.

ಜೂನ್ 13 ರಂದು ಪುಷ್ಪಾ ಅವರು ಕೆಲಸಕ್ಕೊಂದು ದಾರಿಯಲ್ಲಿ ಹೋಗಬೇಕಾದರೆ ಎಚ್‌ಎಂಟಿ ರಾಜಣ್ಣ ಅವರ ಸಾಕು ನಾಯಿ ಪುಷ್ಪಾ ಅವರ ಮೇಲೆ ಹಲವು ಬಾರಿ ದಾಳಿ ಮಾಡಿದೆ. ಇದನ್ನು ಕಣ್ಣಾರೆ ಕಂಡ ಬಾಬು ಮತ್ತು ಗಾಯತ್ರಿ, ಪುಷ್ಪಾ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿದ್ದಾರೆ. ಇನ್ನು ಈ ಬಗ್ಗೆ ಪೊಲೀಸರಿಗೆ ದೂರು ನೀಡದಂತೆ ಪುಷ್ಪಾ ಮತ್ತು ಅವರ ಮಗನನ್ನು ಬಾಬು ಮತ್ತು ಗಾಯತ್ರಿ ಒತ್ತಾಯಿಸಿದ್ದಾರೆ. ಇನ್ನು ಎಚ್‌ಎಂಟಿ ರಾಜಣ್ಣ ಮತ್ತು ಅವರ ಪತ್ನಿ ಗೌರಮ್ಮ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ನಾವೇ ಭರಿಸುವುದಾಗಿ ಹೇಳಿದ್ದಾರೆ. ಇದರ ಜತೆಗೆ ಪುಷ್ಪ ಅವರು ಗುಣಮುಖವಾಗಿ ಕೆಲಸಕ್ಕೆ ಹೋಗುವವರೆಗೆ ಅವರಿಗೆ ಹಣ ನೀಡುತ್ತೇವೆ ಎಂದು ಹೇಳಿದ್ದಾರೆ.

ಆದರೆ ಈ ಯಾವ ಭರವಸೆಯನ್ನು ಅವರು ಈಡೇರಿಸಲಿಲ್ಲ ಎಂದು ಪುಷ್ಪ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಒಂದು ತಿಂಗಳಾದರೂ ಚಿಕಿತ್ಸೆ ವೆಚ್ಚವನ್ನು ಕೂಡ ಭರಿಸಿಲ್ಲ, ಇನ್ನು ಚಿಕಿತ್ಸೆ ನೀಡಲು ನನ್ನಲ್ಲಿ ಹಣವಿಲ್ಲ. ಚಿಟ್ ಫಂಡ್‌ನಿಂದ ಹಣದಿಂದ ಚಿಕಿತ್ಸೆ ಮತ್ತು ಆಸ್ಪತ್ರೆಯ ಬಿಲ್​​ ಪಾವತಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ಈ ಕಾರಣಕ್ಕಾಗಿ ನಾನು ಪೊಲೀಸರಿಗೆ​​ ಜುಲೈನಲ್ಲಿ ದೂರು ನೀಡಿದ್ದೇನೆ ಎಂದು ಹೇಳಿದ್ದಾರೆ. ಇನ್ನು ಈ ಚಿಟ್ ಫಂಡ್​​ನ್ನು ಎಚ್‌ಎಂಟಿ ರಾಜಣ್ಣ ಕುಟುಂಬದ ಸದಸ್ಯರು ನಡೆಸುತ್ತಿದ್ದರು ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾಯಿ ಕಚ್ಚಿದ್ದಕ್ಕೆ 29 ನಾಯಿಗಳನ್ನು ಗುಂಡಿಕ್ಕಿ ಕೊಂದರು; ಕತಾರ್​​ನಲ್ಲಿನ ಕ್ರೂರ ಕೃತ್ಯಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ

ಈ ಘಟನೆಯ ನಂತರ ಎಚ್‌ಎಂಟಿ ರಾಜಣ್ಣ ಅವರ ಮಗ ಬಾಬು ನನ್ನ ಮನೆ ಬಳಿ ಬಂದು ಚಿಟ್ ಫಂಡ್ ಹಣ ವಾಪಸ್ಸು ಮಾಡುವಂತೆ ಕಿರುಕುಳ ನೀಡಿದ್ದಾನೆ. ಹಣ ಮರುಪಾವತಿ ಮಾಡಲು ಸ್ವಲ್ಪ ಸಮಯಬೇಕು ಎಂದು ಕೇಳಿದ್ದೇನೆ. ಆದರೆ ಆತನ ನನಗೆ ಮತ್ತು ನನ್ನ ಮಗನಿಗೆ ಬೆದರಿಕೆ ಹಾಕಿ, ಕೆಟ್ಟ ಮಾತಿನಿಂದ ನಿಂದಿಸಿದ್ದಾನೆ. ನಂತರ ಅಂದರೆ ಮರುದಿನ ಮಂಗಳವಾರ ಮುಂಜಾನೆ 3 ಗಂಟೆಗೆ ನಮ್ಮ ವಾಹನದ ಸೈರನ್ ಸದ್ದು ಕೇಳಿ ಎದ್ದೆವು. ಹೊರಗೆ ಬಂದು ನೋಡಿದಾಗ ನಮ್ಮ ಎರಡು ವಾಹನಕ್ಕೆ ಬೆಂಕಿ ಹಾಕಿದ್ದಾರೆ. ತಕ್ಷಣ ಬೆಂಕಿ ಹಾರಿಸಲು ನಮ್ಮ ಜತೆಗೆ ಅಕ್ಕ-ಪಕ್ಕದವರು ಕೂಡ ಸಹಾಯಕ್ಕೆ ಧಾವಿಸಿದ್ದಾರೆ. ಅದರೂ ಯಾವುದೇ ಪ್ರಯೋಜನವಾಗಿಲ್ಲ, ವಾಹನ ನೋಡು ನೋಡುತ್ತಿದಂತೆ ಸುಟ್ಟು ಹೋಯಿತು ಎಂದು ಪುಷ್ಪ ಅವರು ಹೇಳಿದ್ದಾರೆ. ಇದೀಗ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು, ಕೊತ್ತನೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು