ಅಪರಿಚಿತನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್​ ಕರೆ: ಏರ್​ಪೋರ್ಟ್​​ನಲ್ಲಿ ಕೆಲಕಾಲ ಆತಂಕ

| Updated By: ಗಂಗಾಧರ​ ಬ. ಸಾಬೋಜಿ

Updated on: May 20, 2022 | 8:04 AM

2 ಗಂಟೆಗೂ ಅಧಿಕ ಕಾಲ ತಪಾಸಣೆ ನಡೆಸಿ ಹುಸಿ ಬಾಂಬ್ ಕರೆ ಅಂತ  ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದವನಿಗಾಗಿ ಪೊಲೀಸರಿಂದ ಶೋಧ ನಡೆಸಲಾಗುತ್ತಿದೆ. 

ಅಪರಿಚಿತನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್​ ಕರೆ: ಏರ್​ಪೋರ್ಟ್​​ನಲ್ಲಿ ಕೆಲಕಾಲ ಆತಂಕ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ.
Follow us on

ಬೆಂಗಳೂರು: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ  ನಿಲ್ದಾಣಕ್ಕೆ ಹುಸಿ ಬಾಂಬ್​ ಇಟ್ಟಿರುವುದಾಗಿ ಅಪರಿಚಿತನಿಂದ ಬೆದರಿಕೆ ಕರೆ ಮಾಡಲಾಗಿದೆ. ಬೆದರಿಕೆ ಕರೆಯಿಂದ ಏರ್​ಪೋರ್ಟ್​​ನಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮುಂಜಾನೆ 03:30 ರ ಸುಮಾರಿಗೆ ಪೊಲೀಸ್ ಕಂಟ್ರೋಲ್ ರೂಂಗೆ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್, ಸಿಐಎಸ್ಎಪ್ ಭದ್ರತಾ ಪಡೆಯಿಂದ ಕೆಲ ಕಾಲ ಏರ್ ಲೈನ್ಸ್ ಗೇಟ್ಗಳು ಸೇರಿದಂತೆ ಏರ್ಪೋಟ್ ಟರ್ಮಿನಲ್​ನಲ್ಲಿ ತೀವ್ರ ತಪಾಸಣೆ ಮಾಡಲಾಗಿದೆ. 2 ಗಂಟೆಗೂ ಅಧಿಕ ಕಾಲ ತಪಾಸಣೆ ನಡೆಸಿ ಹುಸಿ ಬಾಂಬ್ ಕರೆ ಅಂತ  ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದವನಿಗಾಗಿ ಪೊಲೀಸರಿಂದ ಶೋಧ ನಡೆಸಲಾಗುತ್ತಿದೆ.

ಗೂಡ್ಸ್ ವಾಹನ ಡಿಕ್ಕಿ, ಬೈಕ್​ ಸವಾರ ಸ್ಥಳದಲ್ಲೇ ಸಾವು

ಮೈಸೂರು: ಗೂಡ್ಸ್ ವಾಹನ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ಸವಾರ ಸಾವನ್ನಪ್ಪಿದ್ದು, ಹಿಂಬದಿ ಸವಾರನಿಗೆ ಗಾಯವಾಗಿರುವಂತಹ ಘಟನೆ ಹುಣಸೂರು ತಿರುಮಲ‌ ಬಡಾವಣೆ ಬಳಿ ನಡೆದಿದೆ. ಶ್ರೀನಿವಾಸ್ 53 ಮೃತ ದುರ್ದೈವಿ. ಗಾಯಾಳುವಿಗೆ ಹುಣಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗೂಡ್ಸ್ ವಾಹನ ಹಾಗೂ ಚಾಲಕ‌ನನ್ನು ವಶಕ್ಕೆ ಪಡೆಯಲಾಗಿದೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ
Shocking News: ಆಸ್ಪತ್ರೆಯಲ್ಲಿ ಅತ್ತಿದ್ದಕ್ಕೆ 3,100 ರೂ. ಶುಲ್ಕ ವಿಧಿಸಿದ ವೈದ್ಯರು; ಬಿಲ್ ನೋಡಿ ಮಹಿಳೆ ಶಾಕ್
ಗರ್ಲ್​ಫ್ರೆಂಡ್ ಜೊತೆ ಮಾತಾಡಿದ 10ನೇ ತರಗತಿಯ ಬಾಲಕನಿಗೆ 7 ಬಾರಿ ಚಾಕುವಿನಿಂದ ತಿವಿದ ಪಿಯುಸಿ ವಿದ್ಯಾರ್ಥಿ!
Crime News: ಸ್ನೇಹಿತರ ಜೊತೆ ಈಜಲು ತೆರಳಿದ್ದ ಬಾಲಕ ಕೆರೆಯಲ್ಲಿ ಮುಳುಗಿ ಸಾವು
ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳ ಬಂಧನಕ್ಕೆ ಆಗ್ರಹ, ಮಳೆಗೆ ಕೊಚ್ಚಿ ಹೋದ ಸ್ಮಶಾನ!

ಇದನ್ನೂ ಓದಿ: Optical Illusion: ನಿಮ್ಮ ದೃಷ್ಟಿ ಶಕ್ತಿಗೊಂದು ಸವಾಲು; ಈ ಚಿತ್ರದಲ್ಲಿ ಅಡಗಿರುವ ಬಾಲಕಿಯನ್ನು ಪತ್ತೆಹಚ್ಚಬಲ್ಲಿರಾ?

ನಕಲಿ ದಾಖಲೆ ಸೃಷ್ಟಿಸಿ ಸೈಟ್​ ಮಾರಾಟ ಮಾಡಿದ್ದವರ ಬಂಧನ

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಸೈಟ್​ ಮಾರಾಟ ಮಾಡಿದ್ದ ಐವರನ್ನ ನಗರದ ವಿದ್ಯಾರಣ್ಯಪುರ ಪೊಲೀಸರು ಬಂಧನ ಮಾಡಿದ್ದಾರೆ. ಫೈಜ್ ಸುಲ್ತಾನ್​​, ಕಬೀರ್, ಜಗದೀಶ್​, ಜಯಮ್ಮ ಹಾಗೂ ವೈಶಾಲಿ ಬಂಧಿತರು. 102 ಗ್ರಾಂ ಚಿನ್ನಾಭರಣ, 2.97 ಲಕ್ಷ ನಗದು, 1 ಕಾರು ಜಪ್ತಿ ಮಾಡಲಾಗಿದ್ದು, ನಕಲಿ ಆಧಾರ್ ಕಾರ್ಡ್, ಪಾನ್ ಕಾರ್ಡ್, ವೋಟರ್ ಐಡಿ, ಬ್ಯಾಂಕ್ ಪಾಸ್ ಬುಕ್​ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 1988 ರಲ್ಲಿ ಸುವರ್ಣಮ್ಮ ಎಂಬುವರ ಸೈಟ್ ಮಾರಿದ್ದರು. ಆರೋಪಿಗಳು ನಕಲಿ ದಾಖಲೆ ಸೃಷ್ಟಿಸಿ 65 ಲಕ್ಷಕ್ಕೆ ಮಾರಾಟ ಮಾಡಿದ್ದರು.

ವಿದ್ಯುತ್ ಸ್ಪರ್ಶಿಸಿ ಯುವಕ ಸಾವು:

ದಾವಣಗೆರೆ: ನಿರಂತರ ಮಳೆಯಿಂದಾಗಿ ವಿದ್ಯುತ್ ಪಂಪ್ ಸೆಟ್ ತೆರವು ಗೊಳಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಬಿಸ್ತುವಳ್ಳಿ ಗ್ರಾಮದಲ್ಲಿ ನಡೆದಿದೆ. ನಾಗರಾಜ್ (28) ಸಾವನ್ನಪ್ಪಿದ ಯುವಕ. ನಿರಂತರ ಮಳೆ ಹಿನ್ನೆಲೆ ವಿದ್ಯುತ್ ಪಂಪ್ ಸೆಟ್ ಹಾಳಾಗುವ ಭೀತಿ ಹಿನ್ನೆಲೆ ತೆರವಿಗೆ ಮುಂದಾಗಿದ್ದ ಯುವಕ. ಈ ವೇಳೆ ಪಂಪ್​ಸೆಟ್​ಗೆ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾನೆ. ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:02 am, Fri, 20 May 22