ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ: ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯ ಬಂಧನ
ಈ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದು, ಸದ್ಯ ಈಶಾನ್ಯ ವಿಭಾಗ ಪೊಲೀಸರಿಂದ ಆರೋಪಿಯ ವಿಚಾರಣೆ ಮಾಡಲಾಗುತ್ತಿದೆ. ಬಳಿಕ ಆರೋಪಿಯನ್ನು ವಿಧಾನಸೌಧ ಪೊಲೀಸರ ವಶಕ್ಕೆ ಹಸ್ತಾಂತರಿಸಲಿದ್ದಾರೆ.
ಬೆಂಗಳೂರು: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ನಗರ ಈಶಾನ್ಯ ವಿಭಾಗದ ಪೊಲೀಸರಿಂದ ಬಂಧನ ಮಾಡಲಾಗಿದೆ. ಭಾವನ ಮೇಲೆ ಸೇಡು ತೀರಿಸಿಕೊಳ್ಳಲು ಕರೆ ಮಾಡಿದ್ದ ಸುಭಾಷ್, ವಿಚ್ಛೇದಿತ ಅಕ್ಕನ ಗಂಡನ ವಿರುದ್ಧ ಸೇಡು ತೀರಿಸಿಕೊಳ್ಳಲು ಸಂಚು ಮಾಡಿದ್ದ. ಬೆಳಗಿನ ಜಾವ 3.30ಕ್ಕೆ ಭಾವನ ಹೆಸರು ಹೇಳಿ ಕಂಟ್ರೋಲ್ ರೂಮ್ಗೆ ಕರೆ ಮಾಡಿ ಬೆದರಿಕೆ ಹಾಕಿದ್ದ. ಅಕ್ಕನ ಗಂಡನ ಹೆಸರು ಹೇಳಿದರೆ ಅವನನ್ನು ಬಂಧಿಸುತ್ತಾರೆ ಅಂದ್ಕೊಂಡಿದ್ದ. ಸುಭಾಷ್ ಗುಪ್ತ ಈ ಹಿಂದೆ ಏರ್ಪೋರ್ಟ್ನಲ್ಲಿ ಕೆಲಸ ಮಾಡುತ್ತಿದ್ದ. ಈ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದು, ಸದ್ಯ ಈಶಾನ್ಯ ವಿಭಾಗ ಪೊಲೀಸರಿಂದ ಆರೋಪಿಯ ವಿಚಾರಣೆ ಮಾಡಲಾಗುತ್ತಿದೆ. ಬಳಿಕ ಆರೋಪಿಯನ್ನು ವಿಧಾನಸೌಧ ಪೊಲೀಸರ ವಶಕ್ಕೆ ಹಸ್ತಾಂತರಿಸಲಿದ್ದಾರೆ.
ಇದನ್ನೂ ಓದಿ: Rohini Sindhuri: ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಕರ್ನಾಟಕ ಸರ್ಕಾರ ಆದೇಶ; ತನಿಖಾಧಿಕಾರಿ ನೇಮಕ
ಏರ್ಪೋರ್ಟ್ನಲ್ಲಿ ಕೆಲಕಾಲ ಆತಂಕ
ಬೆದರಿಕೆ ಕರೆಯಿಂದ ಏರ್ಪೋರ್ಟ್ನಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮುಂಜಾನೆ 03:30 ರ ಸುಮಾರಿಗೆ ಪೊಲೀಸ್ ಕಂಟ್ರೋಲ್ ರೂಂಗೆ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದ. ಈ ಹಿನ್ನೆಲೆಯಲ್ಲಿ ಪೊಲೀಸ್, ಸಿಐಎಸ್ಎಪ್ ಭದ್ರತಾ ಪಡೆಯಿಂದ ಕೆಲ ಕಾಲ ಏರ್ ಲೈನ್ಸ್ ಗೇಟ್ಗಳು ಸೇರಿದಂತೆ ಏರ್ಪೋಟ್ ಟರ್ಮಿನಲ್ನಲ್ಲಿ ತೀವ್ರ ತಪಾಸಣೆ ಮಾಡಲಾಗಿದೆ. 2 ಗಂಟೆಗೂ ಅಧಿಕ ಕಾಲ ತಪಾಸಣೆ ನಡೆಸಿ ಹುಸಿ ಬಾಂಬ್ ಕರೆ ಅಂತ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದವನಿಗಾಗಿ ಪೊಲೀಸರಿಂದ ಶೋಧ ನಡೆಸಲಾಯಿತು.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.