Bengaluru Weather Report: ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ತಜ್ಞ ಸದಾನಂದ ಅಡಿಗ ಮಾಹಿತಿ

Bangalore Rains: ಎಲೆಕ್ಟ್ರಾನಿಕ್ ಸಿಟಿಯಲ್ಲಿ 6.5 ಮಿಲಿ ಮೀಟರ್ ಮಳೆಯಾಗಿದ್ದರೆ, ಜಿಕೆವಿಕೆಯಲ್ಲಿ 123 ಮಿಲಿ ಮೀಟರ್ ಮಳೆಯಾಗಿದೆ. ರಾಜಧಾನಿಯಲ್ಲಿ ಇನ್ನು ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ.

Bengaluru Weather Report: ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ತಜ್ಞ ಸದಾನಂದ ಅಡಿಗ ಮಾಹಿತಿ
ಬೆಂಗಳೂರಿನಲ್ಲಿ ಮಳೆ
Follow us
TV9 Web
| Updated By: sandhya thejappa

Updated on:Nov 22, 2021 | 3:11 PM

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆಯಾಗುವ (Bangalore Rains) ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು (ನ.22) ಬೆಳಗ್ಗೆ 26.5 ರಷ್ಟು ಗರಿಷ್ಟ ಉಷ್ಣಾಂಶವಿದ್ದು. 20.5 ಕನಿಷ್ಠ ಉಷ್ಣಾಂಶ ದಾಖಾಲಾಗಿದೆ. ನಗರದಲ್ಲಿ 5.2 ಮಿಲಿ ಮೀಟರ್ ಮಳೆಯಾಗಿದೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 6.2 ಮಿಮೀ ಮಳೆಯಾಗಿದ್ದು, ಎಚ್ಎಎಲ್​ನಲ್ಲಿ 1.4 ಮಿಲಿ ಮೀಟರ್ ಮಳೆಯಾಗಿದೆ.

ಎಲೆಕ್ಟ್ರಾನಿಕ್ ಸಿಟಿಯಲ್ಲಿ 6.5 ಮಿಲಿ ಮೀಟರ್ ಮಳೆಯಾಗಿದ್ದರೆ, ಜಿಕೆವಿಕೆಯಲ್ಲಿ 123 ಮಿಲಿ ಮೀಟರ್ ಮಳೆಯಾಗಿದೆ. ರಾಜಧಾನಿಯಲ್ಲಿ (Bangalore Rains) ಇನ್ನು ಎರಡು ದಿನ ಮಳೆಯಾಗುವ ಸಾಧ್ಯತೆ ಇದ್ದು, ಮೋಡ ಕವಿದ ವಾತಾವಾರಣ ಇರಲಿದೆ ಅಂತ ಹವಾಮಾನ ಇಲಾಖೆ ತಜ್ಞ ಸದಾನಂದ ಅಡಿಗ ತಿಳಿಸಿದ್ದಾರೆ.

ನಿರಂತರ ಮಳೆಯಿಂದ ರಾಜ್ಯದಲ್ಲಿ ತೀರಾ ನಷ್ಟ ಉಂಟಾಗಿದೆ. ರೈತರು ಬೆಳೆದ ಬೆಳೆಗಳಿಂದ ಹಿಡಿದು ವಾಸವಿದ್ದ ಮನೆಗಳು ನಾಶವಾಗಿವೆ. ಬೆಂಗಳೂರಿನಲ್ಲೂ ಅಪಾರ ಪ್ರಮಾಣದ ನಷ್ಟವಾಗಿದೆ. ಅಪಾರ್ಟ್​ಮೆಂಟ್​ಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ನಿವಾಸಿಗಳು ಪರದಾಡಿದ್ದಾರೆ. ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಅಂತ ಭಾರತದ ಹವಾಮಾನ ಇಲಾಖೆ ತಿಳಿಸಿದೆ.

1 ಲಕ್ಷ ಪರಿಹಾರಕ್ಕೆ ಸಿಎಂ ಸೂಚನೆ ಮನೆ ಸಂಪೂರ್ಣ ಹಾನಿಯಾಗಿದ್ದರೆ ಶೀಘ್ರವೇ ಒಂದು ಲಕ್ಷ ರೂ. ಪರಿಹಾರ ನೀಡುವಂತೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಬೆಳೆ ನಷ್ಟಕ್ಕೆ ವಿಮಾ ಕಂಪನಿಗಳು ಪರಿಹಾರ ವಿತರಿಸಬೇಕು. ಶೀಘ್ರವೇ ಬೆಳೆ ನಷ್ಟ ಪರಿಹಾರ ನೀಡಬೇಕೆಂದು ಅಂತ ಬೊಮ್ಮಾಯಿ ಆದೇಶ ನೀಡಿದ್ದಾರೆ. ಅಲ್ಲದೇ ರಸ್ತೆ ದುರಸ್ತಿಗಾಗಿ 500 ಕೋಟಿ ರೂ. ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಗೆ ಆದೇಶ ನೀಡಿದ್ದಾರೆ. 4 ಕೆರೆಗಳು ಸಂಪೂರ್ಣ ಹಾನಿಯಾಗಿದೆ ಕೂಡಲೇ ಎಚ್ಚೆತ್ತುಕೊಳ್ಳಿ. ನೀರು ವ್ಯರ್ಥವಾಗದಂತೆ ಎಚ್ಚರವಹಿಸಬೇಕು ಎಂದು ಸೂಚನೆ ನೀಡುರುವ ಅವರು, ರಾಜ್ಯದಲ್ಲಿ ಭಾರಿ ಮಳೆಗೆ ವಿದ್ಯುತ್ ಕಂಬ, ಟಿಸಿಗಳಿಗೆ ಹಾನಿಯಾಗಿವೆ. ವಿದ್ಯುತ್ ಸರಬರಾಜು ಕಂಪನಿಗಳು ದುರಸ್ತಿ ಕಾರ್ಯ ಕೈಗೊಳ್ಳಿ ಅಂತ ತಿಳಿಸಿದ್ದಾರೆ.

ಇದನ್ನೂ ಓದಿ

ಮಳೆ ಅಬ್ಬರ: ಮನೆಗೋಡೆ ಕುಸಿದು ವ್ಯಕ್ತಿ ಸಾವು, ಹರಿಯುವ ನೀರಲ್ಲಿ ತೇಲಿ ಬಂತು ಅಪರಿಚಿತ ಮಹಿಳೆ ಶವ

ಕೋಗಿಲು ಕ್ರಾಸ್ ಬಳಿ ರಸ್ತೆ ಜಲಾವೃತ; ಬಿಬಿಎಂಪಿ ಚುನಾವಣೆ ಬಹಿಷ್ಕರಿಸಿದ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ನಿವಾಸಿಗಳು

Published On - 2:43 pm, Mon, 22 November 21

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ