AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅತಿದೊಡ್ಡ ಕಳ್ಳತನ: ಹಾಡಹಗಲೇ ATM ವಾಹನ ಹೈಜಾಕ್, 7.11 ಕೋಟಿ ರೂ. ದರೋಡೆ

ಇತ್ತೀಚೆಗೆಷ್ಟೇ ಬೀದರ್ ನಲ್ಲಿ ಎಟಿಎಂ ವಾಹನ ಸಿಬ್ಬಂದಿ ಮೇಲೆ ಗುಂಡು ಹಾರಿಸಿ ಕೋಟ್ಯಾಂತರ ರೂಪಾಯಿ ಇದ್ದ ಹಣದ ಟ್ರಂಕ್ ದೋಚಿರುವ ಘಟನೆ ಮಾಸುವ ಮುನ್ನವೇ ಬೆಂಗಳೂರಿನ ಹೃದಯಭಾಗದಲ್ಲೇ ಅತಿದೊಡ್ಡ ದರೋಡೆ ನಡೆದಿದೆ. ಗ್ಯಾಂಗ್​​ವೊಂದು ಹಾಡಹಗಲೇ ಎಟಿಎಂಗೆ ಹಣ ಹಾಕಲು ಹೊರಟಿದ್ದ ವಾಹನ ತಡೆದು ಬರೋಬ್ಬರಿ 7.11 ಕೋಟಿ ರೂಪಾಯಿ ಹಣ ದೋಚಿಕೊಂಡು ಪರಾರಿಯಾಗಿದೆ.

ಬೆಂಗಳೂರಿನಲ್ಲಿ ಅತಿದೊಡ್ಡ ಕಳ್ಳತನ: ಹಾಡಹಗಲೇ ATM ವಾಹನ ಹೈಜಾಕ್, 7.11 ಕೋಟಿ ರೂ. ದರೋಡೆ
ಎಟಿಎಂ ವಾಹನ ದರೋಡೆ
ರಾಚಪ್ಪಾಜಿ ನಾಯ್ಕ್
| Edited By: |

Updated on:Nov 19, 2025 | 4:09 PM

Share

ಬೆಂಗಳೂರು, ನವೆಂಬರ್ 19): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆಯಾಗಿರುವ ಘಟನೆ ನಡೆದಿದೆ. ಇಂದು (ನವೆಂಬರ್ 19) ಮಧ್ಯಾಹ್ನ ಇನ್ನೋವಾ ಕಾರಿನಲ್ಲಿ ಬಂದ ಗ್ಯಾಂಗ್, ಎಟಿಎಂಗೆ ಹಣ ಹಾಕಲು ಹೊರಟಿದ್ದ ವಾಹನ ತಡೆದು ಬರೋಬ್ಬರಿ 7.11 ಕೋಟಿ ರೂ ದೋಚಿಕೊಂಡು ಪರಾರಿಯಾಗಿದೆ. ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂ ಕಡೆ ಹೊರಟಿದ್ದ ಹಣ ಇದ್ದ ವಾಹನವನ್ನು ಜಯದೇವ ಡೇರಿ ಸರ್ಕಲ್​​ನ ಬಳಿ ತಡೆದು ಹಣ ದೋಚಿಕೊಂಡು ಎಸ್ಕೇಪ್ ಆಗಿದೆ.

ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂಗೆ ಹಣ ಹಾಕಲೆಂದು GJ 01 HT 9173 ಸಂಖ್ಯೆ ವಾಹನ ಹಣ ತುಂಬಿಕೊಂಡು ತೆರಳುತ್ತಿತ್ತು. ಈ ವೇಳೆ ಜಯದೇವ ಡೇರಿ ಸರ್ಕಲ್​ನಲ್ಲಿ ಇನ್ನೋವಾದಲ್ಲಿ ಬಂದ ಆರೇಳು ಜನರ ಗ್ಯಾಂಗ್, ಎಟಿಎಂ ವಾಹನ ತಡೆದು ನಾವು ಆರ್​​ಬಿಐನವರು ಎಂದು ಹೇಳಿಕೊಂಡು ಹೆದರಿಸಿದ್ದಾರೆ. ಗನ್​​ಮ್ಯಾನ್​​ ಸೇರಿದಂತೆ ಉಳಿದವರನ್ನೆಲ್ಲ ಅಲ್ಲೇ ಇಳಿಸಿ ವಾಹನ ಸಮೇತ ಚಾಲಕನನ್ನು ಡೇರಿ ಸರ್ಕಲ್​ಗೆ ಕರೆದೊಯ್ದಿದ್ದಾರೆ. ಬಳಿಕ ಡೇರಿ ಸರ್ಕಲ್ ಫ್ಲೈಓವರ್ ಮೇಲೆ ನಿಲ್ಲಿಸಿ ವಾಹನದಲ್ಲಿದ್ದ ಹಣವನ್ನು ಇನ್ನೋವಾ ಕಾರಿಗೆ ತುಂಬಿಕೊಂಡು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ಸುದ್ದಗುಂಟೆಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬೀದರ್​ ಬೆನ್ನಲ್ಲೇ ಕಲಬುರಗಿಯಲ್ಲಿ ATM ಕಳ್ಳತನ, ಕರ್ನಾಟಕದಲ್ಲಿ ಸಾಲು ಸಾಲು ದರೋಡೆ

ಆರ್​​ಬಿಐ ಅಧಿಕಾರಿಗಳೆಂದು ವಾಹನ ಹೈಜಾಕ್

ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಅಶೋಕ್‌ ಪಿಲ್ಲರ್ ಬಳಿ ಅಡ್ಡಗಟ್ಟಿದ್ದಾರೆ. ಬಳಿಕ ದರೋಡಕೋರರು,ನಾವು ಆರ್ ಬಿ ಐ ನವರು ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ ನೀವು ನಿಯಮ ಉಲ್ಲಂಘಿಸಿದ್ದೀರಿ.  ಪೊಲೀಸ್ ಠಾಣೆಗೆ ಬನ್ನಿ ಎಂದು ಹಣ ಇದ್ದ ಸಿಎಂಎಸ್ ವಾಹನ ಹೈಜಾಕ್ ಮಾಡಿ ತಂದಿದ್ದಾರೆ. ನಂತರ ಸುದ್ದುಗುಂಟೆ ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಡೇರಿ ಸರ್ಕಲ್​ ಫ್ಲೈಓವರ್​ನಲ್ಲಿ ವಾಹನ ನಿಲ್ಲಿಸಿ ಹಣವನ್ನು ತಮ್ಮ ಇನ್ನೋವಾ ಕಾರಿಗೆ ತುಂಬಿಕೊಂಡು ಪರಾರಿಯಾಗಿದ್ದಾರೆ.

ಎಟಿಎಂ ವಾಹನದಲ್ಲಿ ಒಟ್ಟು ನಾಲ್ಕು ಜನ ಸಿಎಂಎಸ್ ಸಿಬ್ಬಂದಿ ಇದ್ದರು. ಓರ್ವ ಡ್ರೈವರ್,ಇಬ್ಬರು ಗನ್ ಮ್ಯಾನ್ ಹಾಗೂ ಮತ್ತೊಬ್ಬ ಹಣ ಹಾಕುವ ಸಿಬ್ಬಂದಿ ಇದ್ದು, ಸದ್ಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಇವರ ವಿಚಾರಣೆ ನಡೆಯುತ್ತಿದೆ. ಇನ್ನು  ಫಿಂಗರ್ ಪ್ರಿಂಟ್ ತಂಡ ಹಾಗೂ ಡಾಗ್ ಸ್ಕ್ವಾಡ್ ಕೂಡ ಸ್ಥಳಕ್ಕೆ ಆಗಮಿಸುತ್ತಿದೆ, ತನಿಖೆ ಚುರುಕುಗೊಂಡಿದೆ.

ನಕಲಿ ನಂಬರ್​ ಪ್ಲೇಟ್​ ಹಾಕಿಕೊಂಡು ಕೃತ್ಯ

ದರೋಡೆಕೋರರು ತಂದಿದ್ದ ಇನ್ನೋವಾ ಕಾರಿಗೆ ನಕಲಿ ನಂಬರ್ ಪ್ಲೇಟ್ ಅಳವಿಡಿಸಿರುವುದು ಬೆಳಕಿಗೆ ಬಂದಿದೆ. ಹೌದು..KA 03 NC 8052 ಸಂಖ್ಯೆಯ ಇನ್ನೋವಾ ಕಾರಿನಲ್ಲಿ ಬಂದು ಕೃತ್ಯ ಎಸಗಿದ್ದಾರೆ. ಆದ್ರೆ, KA 03 NC 8052 ಸಂಖ್ಯೆಯ ಮೂಲ ಕಾರು ಮಾರುತಿ ಸುಜುಕಿ ಎಂದು ತಿಳಿದುಬಂದಿದೆ. ಇದರಿಂದ ಈ ಗ್ಯಾಂಗ್ ಪಕ್ಕಾ ಪ್ಲ್ಯಾನ್ ಮಾಡಿಯೇ ಈ ಕೃತ್ಯ ಎಸಗಿದೆ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗಿದೆ.

ಹೊಸಕೋಟೆ ಕಡೆ ತೆರಳಿರುವ ಮಾಹಿತಿ

ಹಣ ದರೋಡೆ ಮಾಡಿ ಗ್ಯಾಂಗ್, ​ಹೊಸಕೋಟೆ ಕಡೆ ತೆರಳಿರುವ ಮಾಹಿತಿ ಸಿಕ್ಕಿದೆ. ಡೇರಿ ಸರ್ಕಲ್, ಕೋರಮಂಗಲ, ಸೋನಿ ವರ್ಡ್ ಜಂಕ್ಷನ್, ದೊಮ್ಮಲೂರು, ಮಾರತ್ತಹಳ್ಳಿ, ವೈಟ್​ ಫಿಲ್ಡ್​​ ಮಾರ್ಗವಾಗಿ ಹೊಸಕೋಟೆ ಕಡೆ ತೆರಳಿರುವ ಮಾಹಿತಿ ಲಭ್ಯವಾಗಿದ್ದು, ಪೊಲೀಸರು ದರೋಡೆಕೋರರ ಗ್ಯಾಂಗ್​​ ಬೆನ್ನುಬಿದ್ದಿದ್ದಾರೆ.

ಪೊಲೀಸರು ಹೈಅಲರ್ಟ್​​

ಇಷ್ಟೊಂದು ದೊಡ್ಡ ಮಟ್ಟದ ದರೋಡೆಯಾಗಿರುವ ಬೆನ್ನಲ್ಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತ ಅಲರ್ಟ್ ಆಗಿದ್ದು, ನಗರದಲ್ಲಿ ಹೈಅಲರ್ಟ್ ಆಗಿರುವಂತೆ ಸೂಚಿಸಿದ್ದಾರೆ. ಅಲ್ಲದೇ ಆರೋಪಿಗಳು ಬೆಂಗಳೂರು ಬಿಟ್ಟು ಹೋಗದಂತೆ ನಗರದ ಗಡಿಪ್ರದೇಶದಲ್ಲಿ ​ ಬ್ಯಾರಿಕೆಡ್ ಹಾಕಿ ವಾಹನ ಪರಿಶೀಲನೆ ಮಾಡುವಂತೆ ಸಂದೇಶ ರವಾನಿಸಿದ್ದಾರೆ.

Published On - 3:21 pm, Wed, 19 November 25

ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್