ಆನೇಕಲ್: ಅಣು ಬಾಂಬ್​ನಂತೆ ಸಿಡಿದ ಗ್ಯಾಸ್ ಸಿಲಿಂಡರ್; ಸ್ಫೋಟದ ಶಬ್ದಕ್ಕೆ ಬೆಚ್ಚಿ ಬಿದ್ದ ಬಡಾವಣೆ ಜನ!

ಅದು ಅಕ್ರಮವಾಗಿ ಗ್ಯಾಸ್ ರಿಫಿಲ್ಲಿಂಗ್ ಮಾಡುತ್ತಿದ್ದ ಜಾಗ, ಹತ್ತಾರು ಹಳೆ ಗ್ಯಾಸ್ ಸಿಲಿಂಡರ್​ಗಳನ್ನು ಅಂಗಡಿಯೊಳಗಿಟ್ಟ ಆತ ಇದು‌ ಎಷ್ಟು ಡೇಂಜರ್​ ಅನ್ನೋದು ಮರೆತು ಮಲಗಿದ್ದ, ಈಗ ಅದೇ ಗ್ಯಾಸ್ ಸಿಲಿಂಡರ್ ಸಿಡಿದು ಗಂಭೀರವಾಗಿ ಗಾಯಗೊಂಡಿದ್ದಾನೆ.

ಆನೇಕಲ್: ಅಣು ಬಾಂಬ್​ನಂತೆ ಸಿಡಿದ ಗ್ಯಾಸ್ ಸಿಲಿಂಡರ್; ಸ್ಫೋಟದ ಶಬ್ದಕ್ಕೆ ಬೆಚ್ಚಿ ಬಿದ್ದ ಬಡಾವಣೆ ಜನ!
anekal cylinder blast
Follow us
ಕಿರಣ್ ಹನುಮಂತ್​ ಮಾದಾರ್
|

Updated on: Apr 19, 2023 | 9:00 AM

ಬೆಂಗಳೂರು: ರಾತ್ರಿ 12:30 ರ ಸಮಯ ಬಡಾವಣೆಯ ಜನರೆಲ್ಲ ನಿದ್ದೆಗೆ ಜಾರಿದ್ರು, ಅದೇ ಸಮಯಕ್ಕೆ ಸರಿಯಾಗಿ ದೊಡ್ಡದಾಗಿ ಭೂಮಿ ಕಂಪಿಸಿದ ಶಬ್ದ. ಜನ ಬಾಂಬ್ ಸಿಡಿಯಿತೋ ಅಥವಾ ಭೂಕಂಪ ಆಯಿತೋ ಎಂದು ಗಾಬರಿಗೊಂಡು ತಮ್ಮ ಮನೆ ಬಾಗಿಲು, ಕಿಟಕಿ‌ ಬಳಿ ಬಂದು ನೋಡಿದರೆ ಮುಖ್ಯರಸ್ತೆಯ ಬಿಲ್ಡಿಂಗ್ ಬಿದ್ದಿರೋದು ಗೊತ್ತಾಗಿದೆ. ಹೌದು ಆನೇಕಲ್ ತಾಲೂಕಿನ‌ ಮುತ್ಯಾನಲ್ಲೂರು ಗ್ರಾಮದಲ್ಲಿ ನಡೆದ ಘಟನೆ ಇಡೀ ಬಡವಾಣೆಯ ಜನರನ್ನ ಆತಂಕಕ್ಕೀಡು ಮಾಡಿದೆ. ಹೌದು ಮುತ್ಯಾನಲ್ಲೂರು ಮುಖ್ಯ ರಸ್ತೆಯಲ್ಲಿರುವ ಅಂಗಡಿಯಲ್ಲಿ ಅಕ್ರಮವಾಗಿ ಹಾಗೂ ಅವೈಜ್ಞಾನಿಕವಾಗಿ ಗ್ಯಾಸ್ ರಿಪೇರಿ ಹಾಗೂ ರಿಫಿಲ್ಲಿಂಗ್ ಮಾಡಲಾಗುತ್ತಿತ್ತು.‌ ಇದು ಎಷ್ಟು ಡೇಂಜರ್ ಎಂದು ಪರಿವೆ ಇಲ್ಲದ ಫೈಜುಲ್ ಎಂಬಾತ ಹಳೆಯ ಗ್ಯಾಸ್ ಸಿಲಿಂಡರ್​ಗಳು ಹಾಗೂ ಲಿಕೇಜ್ ಗ್ಯಾಸ್ ಸಿಲಿಂಡರ್​ಗಳನ್ನ ಶೇಖರಿಸಿಟ್ಟಿದ್ದ.‌ ರಾತ್ರಿ 12:30 ಕ್ಕೆ ಗ್ಯಾಸ್ ಲೀಕ್ ಆಗಿ ಸಿಲಿಂಡರ್ ಸ್ಫೋಟಗೊಂಡಿದೆ.

ಹೌದು ರಾತ್ರಿ ಅಂಗಡಿಯಲ್ಲೇ ಮಲಗಿದ್ದ ಫೈಜುಲ್​ಗೆ ಗಂಭೀರ ಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಫೋಟದ ತೀವ್ರತೆಗೆ ಇಡೀ ಕಟ್ಟಡದ ನಾಲ್ಕು ಅಂಗಡಿಯ ಚೇಂಬರ್​ಗಳು ಕೂಡ ನೆಲಸಮವಾಗಿದ್ದು, ಸಧ್ಯ ಪ್ರಕರಣ‌ ದಾಖಲಿಸಿಕೊಂಡಿರುವ ಸೂರ್ಯಸಿಟಿ ಪೊಲೀಸರು ಘಟನೆ ಬಗ್ಗೆ ಇನ್ನಷ್ಟು ಪರಿಶೀಲನೆ ಮಾಡುತ್ತಿದ್ದಾರೆ. ಇದೇ ಘಟನೆ ಬೆಳಿಗ್ಗೆ ಸಮಯದಲ್ಲಿ ನಡೆದಿದ್ದರೇ ಬಹಳಷ್ಟು ಸಾವು ನೋವುಗಳಾಗುವ ಸಂಭವವಿತ್ತು ಎನ್ನುವುದು ಸ್ಥಳೀಯರ ಮಾತು, ಅದೇನೆ ಇರಲಿ ಇಂತಹ ಅಕ್ರಮ ಗ್ಯಾಸ್ ಫಿಲ್ಲಿಂಗ್ ಸ್ಟೋರ್​ಗಳ ಬಾಗಿಲು ಮುಚ್ಚಿಸಿ ಜನರ ಜೀವ ಉಳಿಸಿ ಅನ್ನೋದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ