ಪ್ರಕರಣವೇನು?
ಶಮಾನಿಸಂ (ಆತ್ಮಗಳೊಂದಿಗೆ ಮಾತನಾಡುವುದು) ಎನ್ನುವುದು ಧಾರ್ಮಿಕ ಆಚರಣೆಯಾಗಿದ್ದು, ಅದರ ಅಭ್ಯಾಸ ಮಾಡುವವರು ಅರೆ ಪ್ರಜ್ಞಾವಸ್ಥ ಸ್ಥಿತಿಯಲ್ಲಿ ಆತ್ಮಗಳೊಂದಿಗೆ ಮಾತುಕತೆ ನಡೆಸುತ್ತಾರೆ ಎಂಬ ನಂಬಿಕೆಯ ಮೇಲೆ ಆಧಾರಿತವಾಗಿದೆ. ಇದು ಪುರಾತನ ಹೀಲಿಂಗ್ ವಿಧಾನ ಎನ್ನಲಾಗಿದೆ. ಇದರಿಂದ ಆಕರ್ಷಿತರಾಗಿದ್ದ ಅನುಷ್ಕಾ, ಮನೆ ಬಿಟ್ಟು ತೆರಳಿದ್ದರು. ಅವರು ನಾಪತ್ತೆಯಾಗಿ ಸುಮಾರು ಎರಡು ತಿಂಗಳಾಗಿತ್ತು.
ಅನುಷ್ಕಾ 12ನೇ ತರಗತಿಯಲ್ಲಿ ಉತ್ತೀರ್ಣರಾದ ನಂತರ ಶಾಮನಿಸಂನತ್ತ ಆಕರ್ಷಿತರಾಗಿದ್ದರು. ಆಕೆಯ ಪೋಷಕರು ಆಧ್ಯಾತ್ಮಿಕ ಜೀವನ ತರಬೇತುದಾರರಾಗಿದ್ದು, ಸೈಕೆಡೆಲಿಕ್ ಶಿಕ್ಷಣತಜ್ಞರಿಂದ ಪ್ರಭಾವಿತಳಾಗಿದ್ದರು. ಯುವತಿ ಶಾಮನಿಸಂ ಅನ್ನು ಅಭ್ಯಾಸ ಮಾಡುವ ಬಯಕೆಯ ಬಗ್ಗೆ ತನ್ನ ತಂದೆ-ತಾಯಿಯ ಜೊತೆ ಮಾತನಾಡಿದ್ದಳು. ಮಗಳಿಗೆ ಮನೆ ತೊರೆಯುವ ನಿರ್ಧಾರ ತೆಗೆದುಕೊಳ್ಳುವಂತೆ ಯಾರೋ ಪ್ರಭಾವ ಮಾಡಿದ್ದಾರೆ ಎಂದು ಆಕೆಯ ತಂದೆ ಅಭಿಷೇಕ್ ಹೇಳಿದ್ದರು. ಆಕೆ ಅಪ್ರಾಪ್ತಳಾಗಿದ್ದು, ಅವಳು ತನ್ನ ಸ್ವಂತ ನಿರ್ಣಯದ ನಿರ್ಧಾರವನ್ನು ತೆಗೆದುಕೊಳ್ಳುವ ಸ್ಥಿತಿಯಲ್ಲಿಲ್ಲದಿರಬಹುದು. ಅವಳನ್ನು ಯಾರೋ ಪ್ರಭಾವಿಸಿದ್ದಾರೆ ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದರು. ಅನುಷ್ಕಾ ಅಕ್ಟೋಬರ್ 31ರಂದು ಮನೆ ಬಿಟ್ಟು ತೆರಳಿದ್ದರು.
ಈ ಪ್ರಕರಣದ ಬಗ್ಗೆ ಪೊಲೀಸರು ಕೂಡ ತನಿಖೆ ನಡೆಸಿದ್ದರು. ಅನುಷ್ಕಾಳ ಚಲನವಲನವನ್ನು ಸಿಸಿಟಿವಿ ಕ್ಯಾಮೆರಾ ಮೂಲಕ ವಿಶ್ಲೇಷಿಸಿದ್ದೇವೆ ಎಂದು ಬೆಂಗಳೂರು ಉತ್ತರದ ಉಪ ಪೊಲೀಸ್ ಆಯುಕ್ತ ವಿನಾಯಕ ಪಾಟೀಲ್ ಹೇಳಿದ್ದರು. ಸುಮಾರು ಎರಡು ತಿಂಗಳಿನಿಂದ ತಮ್ಮ ಮಗಳ ಸುಳಿವಿಗಾಗಿ ಕಾಯುತ್ತಿದ್ದ ಅನುಷ್ಕಾ ಪೋಷಕರು ಇತ್ತೀಚೆಗೆ ಪೊಲೀಸರೊಂದಿಗೆ ಕೆಲಸ ಮಾಡುವುದರ ಜೊತೆಗೆ ಸಾರ್ವಜನಿಕರ ಮೊರೆ ಹೋಗಿದ್ದರು. ಅವರು ತಮ್ಮ ಮಗಳನ್ನು ಹುಡುಕಲು ಸಹಾಯ ಮಾಡುವಂತೆ ಟ್ವಿಟರ್‌ನಲ್ಲಿ ಮನವಿ ಮಾಡಿದ್ದರು. ಇದೀಗ ಅಂತಿಮವಾಗಿ ಸುಬ್ರಹ್ಮಣ್ಯ ನಗರ ಠಾಣೆ ಪೊಲೀಸರು ಯುವತಿಯನ್ನು ಪತ್ತೆ ಹಚ್ಚಿ ಪೋಷಕರಿಗೆ ಒಪ್ಪಿಸಿದ್ದಾರೆ.
ಇದನ್ನೂ ಓದಿ:
ಶಮಾನಿಸಂಗೆ ಆಕರ್ಷಿತಳಾಗಿ ನಾಪತ್ತೆಯಾಗಿದ್ದ ಯುವತಿಯನ್ನು ಪತ್ತೆ ಹಚ್ಚಿದ ಪೊಲೀಸರು