ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್​, ​ಬೈಕ್​ಗೆ ಡಿಕ್ಕಿ ಹೊಡೆದು ಲಾರಿ ಎಸ್ಕೇಪ್

ಮಡಿವಾಳ ಸಮೀಪದ ಮೈಕೋಬಂಡೆ ಬಳಿ ಹಿಟ್ ಅಂಡ್ ರನ್​ಗೆ ಬೈಕ್ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ರಾತ್ರಿ 12 ಗಂಟೆ ಸುಮಾರಿಗೆ ನಡೆದಿದೆ. ವೇಗವಾಗಿ ಬಂದ ಕಂಟೇನರ್​ ಲಾರಿಯೊಂದು ಬೈಕ್​ಗೆ ಡಿಕ್ಕಿ ಹೊಡೆದು ಎಸ್ಕೇಪ್ ಆಗಿದ್ದಾರೆ.

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್​, ​ಬೈಕ್​ಗೆ ಡಿಕ್ಕಿ ಹೊಡೆದು ಲಾರಿ ಎಸ್ಕೇಪ್
ಪ್ರಾತಿನಿಧಿಕ ಚಿತ್ರ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Apr 28, 2023 | 9:07 AM

ಬೆಂಗಳೂರು: ಮಡಿವಾಳ(Madiwala) ಸಮೀಪದ ಮೈಕೋಬಂಡೆ ಬಳಿ ಹಿಟ್ ಅಂಡ್ ರನ್(Hit And Run)​ಗೆ ಬೈಕ್ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ರಾತ್ರಿ 12 ಗಂಟೆ ಸುಮಾರಿಗೆ ನಡೆದಿದೆ. ವೇಗವಾಗಿ ಬಂದ ಕಂಟೇನರ್​ ಲಾರಿಯೊಂದು ಬೈಕ್​ಗೆ ಡಿಕ್ಕಿ ಹೊಡೆದು ಎಸ್ಕೇಪ್ ಆಗಿದ್ದಾರೆ. ಡಿಕ್ಕಿಯ ರಭಸಕ್ಕೆ ಗಾಯಗೊಂಡ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಇನ್ನು ಮೃತನ ಹೆಸರು ಹಾಗೂ ವಿಳಾಸ ತಿಳಿದು ಬಂದಿಲ್ಲ. ಘಟನೆ ಸಂಬಂಧ ಆಡುಗೋಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿಯ ಪತ್ತೆಗಾಗಿ ಸಿಸಿಟವಿಯನ್ನ ಪರಿಶೀಲನೆ ನಡೆಸುತ್ತಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಮಹಿಳೆ ಮೇಲೆ ಹಲ್ಲೆ ನಡೆಸಿದ ವ್ಯಕ್ತಿ

ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ದುರುಳನೊಬ್ಬ ಪೆಟ್ರೋಲ್ ಬಂಕ್​ನಲ್ಲಿ ಕೆಲಸ ನಿರ್ವಹಿಸುವ ಮಹಿಳೆಗೆ ಕಪಾಳ ಮೋಕ್ಷ ಮಾಡಿದ ಘಟನೆ ಮಂಡ್ಯ ತಾಲೂಕಿನ ಕೊತ್ತತ್ತಿ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಇನ್ನು ಮಹಿಳೆಗೆ ಹಲ್ಲೆ ನಡೆಸುವ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಚಿಲ್ಲರೆ ನೀಡುವ ವಿಚಾರಕ್ಕೆ ಕಿರಿಕ್ ತೆಗೆದು ಹಲ್ಲೆ ಆರೋಪ ಮಾಡಲಾಗಿದ್ದು, ಮಂಡ್ಯ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಇದನ್ನೂ ಓದಿ:ಚಿಕ್ಕಮಗಳೂರು: ಕೆಎಸ್​ಆರ್​ಟಿಸಿ ಬಸ್​ಗಳ ಮಧ್ಯೆ ಅಪಘಾತ: 16 ಜನರಿಗೆ ಗಂಭೀರ ಗಾಯ

ಸಿಎಂ ನಿವಾಸದ ಕೊಂಚ ದೂರದಲ್ಲೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ಪತ್ತೆ

ಬೆಂಗಳೂರು: ಸಿಎಂ ನಿವಾಸದ ಕೊಂಚ ದೂರದಲ್ಲೇ ಇರುವ ಆರ್​.ಟಿ ನಗರದ ವ್ಯಾಪ್ತಿಯ ಚೆಕ್​​ಪೋಸ್ಟ್​ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 10 ಲಕ್ಷ ಹಣವನ್ನ ವಶಕ್ಕೆ ಪಡೆಯಲಾಗಿದೆ. ಕಾರು ತಪಾಸಣೆ ವೇಳೆ ಅಕ್ರಮ ಹಣ ಪತ್ತೆಯಾಗಿದ್ದು, ಮೊಹಮ್ಮದ್​ ಷರೀಫ್​, ಮಹಮ್ಮದ್​ ಯುನೂಸ್​ ಎಂಬುವವರನ್ನ ವಶಕ್ಕೆ ಪಡೆದು, ಆರ್​.ಟಿ.ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ವೇಳೆ ತಾವು ಮೊಬೈಲ್ ಸೇಲ್ಸ್ ಅಂಡ್ ಸರ್ವಿಸ್ ಶೋ ನಡೆಸ್ತಿರೋದಾಗಿ ಕಾರಿನ ಮಾಲೀಕ ಹೇಳಿದ್ದಾರೆ.

ಇನ್ನಷ್ಟು ಅಪಘಾತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:17 am, Fri, 28 April 23