ಬೈಕ್‌ಗೆ ಲಾರಿ ಡಿಕ್ಕಿ; ಪತಿ ಸಾವು, ಪತ್ನಿ ಕಾಲುಗಳು ಕಟ್‌, ಮಗು ಪಾರು

ರಸ್ತೆಯಲ್ಲಿ ಸಂಚರಿಸುವಾಗ ಎಷ್ಟೇ ಜಾಗೃತರಾಗಿದ್ದರೂ ಕಡಿಮೆಯೇ, ಅದರಂತೆ ಇದೀಗ ಬೆಂಗಳೂರಿನ ಬೊಮ್ಮಸಂದ್ರ ಫ್ಲೈಓವರ್ ಬಳಿ ಭೀಕರ ಅಪಘಾತವೊಂದು ನಡೆದಿದ್ದು, ದುರ್ಘಟನೆಯಲ್ಲಿ ಬೈಕ್‌ ಸವಾರ ಸಾವನ್ನಪ್ಪಿದ್ದು, ಪತ್ನಿಯ ಎರಡು‌ ಕಾಲು ಕಟ್ ಆಗಿದೆ. ಅದೃಷ್ಟವಶಾತ್​ ಬೈಕ್​ನಲ್ಲಿದ್ದ ಮಗು ಪಾರಾಗಿದೆ.

ಬೈಕ್‌ಗೆ ಲಾರಿ ಡಿಕ್ಕಿ; ಪತಿ ಸಾವು, ಪತ್ನಿ ಕಾಲುಗಳು ಕಟ್‌, ಮಗು ಪಾರು
ಬೈಕ್‌ಗೆ ಲಾರಿ ಡಿಕ್ಕಿ
Follow us
ರಾಮು, ಆನೇಕಲ್​
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 04, 2024 | 6:12 PM

ಬೆಂಗಳೂರು, ಆ.04: ಲಾರಿ ಡಿಕ್ಕಿಯಾಗಿ ಬೈಕ್‌ ಸವಾರ ಸಾವನ್ನಪ್ಪಿದ್ದು, ಪತ್ನಿಯ ಎರಡು‌ ಕಾಲು ಕಟ್ ಆದ ದಾರುಣ ಘಟನೆ ಬೆಂಗಳೂರಿನ ಬೊಮ್ಮಸಂದ್ರ ಫ್ಲೈಓವರ್ ಬಳಿ ನಡೆದಿದೆ. ಅದೃಷ್ಟವಶಾತ್​ ಸಣ್ಣ ಪುಟ್ಟ ಗಾಯಗಳೊಂದಿಗೆ ಬೈಕ್‌ನಲ್ಲಿದ್ದ ಮಗು ಪಾರಾಗಿದೆ. ಇನ್ನು ಗಾಯಗೊಂಡಿದ್ದವರನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಬಳಿಕ ಲಾರಿ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದು, ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅನಾರೋಗ್ಯದಿಂದ ಬಾಗಲಕೋಟೆ ಜಿಲ್ಲೆಯ ಯೋಧ ಸಾವು

ಬಾಗಲಕೋಟೆ: ಉಸಿರಾಟ ಸಮಸ್ಯೆಯಿಂದ ಅನಾರೋಗ್ಯಕ್ಕೀಡಾಗಿದ್ದ ಬಾಗಲಕೋಟೆ ಜಿಲ್ಲೆಯ ಯೋಧ ರಾಜಸ್ಥಾನದ ಜೋಧ್‌ಪುರ್ ಬೆಟಾಲಿಯನ್​ನಲ್ಲಿ ಸಾವನ್ನಪ್ಪಿದ್ದಾರೆ. ಉಸಿರಾಟ ಸಮಸ್ಯೆಯಿಂದ ಹನುಮಂತ ತಳವಾರ(32) ಕೊನೆಯುಸಿರೆಳೆದಿದ್ದಾರೆ. ಬಾಗಲಕೋಟೆ ತಾಲೂಕಿನ ಖಜ್ಜಿಡೋಣಿ ಗ್ರಾಮದ ನಿವಾಸಿಯಾದ ಅವರು, ‘2011ರಲ್ಲಿ ಸೇನೆಗೆ ಸೇರ್ಪಡೆ ಆಗಿದ್ದರು. ನಾಳೆ(ಆ.05) ಸಂಜೆ ವೇಳೆಗೆ ಅಂತ್ಯಸಂಸ್ಕಾರ ನಡೆಯುವ ಸಾಧ್ಯತೆಯಿದೆ.

ಇದನ್ನೂ ಓದಿ:ರಾಯಚೂರು: ಸೇತುವೆ ತಡೆಗೋಡೆಗೆ ಬಸ್ ಡಿಕ್ಕಿ; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಆಯತಪ್ಪಿ ಬೈಕ್​ ಸಮೇತ ನಾಲೆಗೆ ಬಿದ್ದಿದ್ದ ಸವಾರ ಶವವಾಗಿ ಪತ್ತೆ

ಬೆಳಗಾವಿ: ಬೆಳಗಾವಿ ತಾಲೂಕಿನ ಆಲತಗಾ ಬಳಿ ಸಹೋದರರು ಆಯತಪ್ಪಿ ಬೈಕ್ ಸಮೇತ ನಾಲೆಗೆ ಬಿದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನೀರಲ್ಲಿ ಕಣ್ಮರೆಯಾಗಿದ್ದ ಓಂಕಾರ ಪಾಟೀಲ್ ಶವವಾಗಿ ಪತ್ತೆಯಾಗಿದ್ದಾನೆ. ನಿರಂತರ ಕಾರ್ಯಾಚರಣೆ ನಡೆಸಿ ಎಸ್‌ಡಿಆರ್‌ಎಫ್ ತಂಡ ಶವ ಹೊರತೆಗೆದಿದೆ. ನಿನ್ನೆ(ಆ.03) ತಡರಾತ್ರಿ ಬೈಕ್ ಮೇಲೆ ಹೊರಟಾಗ ಓಂಕಾರ ಪಾಟೀಲ್, ಜ್ಯೋತಿನಾಥ ಪಾಟೀಲ್ ಎಂಬ ಸಹೋದರರಲ್ಲಿ ಆಯತಪ್ಪಿ ನಾಲೆಗೆ ಬಿದ್ದಿದ್ದರು. ನಾಲೆಗೆ ಬೀಳುತ್ತಿದ್ದಂತೆ ಜ್ಯೋತಿನಾಥ ಪಾಟೀಲ್ ಈಜಿ ದಡ ಸೇರಿದ್ದ. ನೀರಲ್ಲಿ ಬೈಕ್‌ ಜೊತೆಗೆ ಕಣ್ಮರೆಯಾದ್ದ ಓಂಕಾರ ಪಾಟೀಲ್ ಇಂದು ಶವವಾಗಿ ಪತ್ತೆಯಾಗಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:06 pm, Sun, 4 August 24

ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು