AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ ಲಾರಿ ಪಲ್ಟಿ: ಓರ್ವ ಬೈಕ್ ಸವಾರ ಸಾವು

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಟಿಟಿ ವಾಹನ ಡಿಕ್ಕಿಯಾಗಿದ್ದು, ನಾಲ್ವರಿಗೆ ಗಂಭೀರ ಗಾಯವಾಗಿರುವಂತಹ ಘಟನೆ ನಡೆದಿದೆ.

Crime News: ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ ಲಾರಿ ಪಲ್ಟಿ: ಓರ್ವ ಬೈಕ್ ಸವಾರ ಸಾವು
ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಮರದ ದಿಮ್ಮಿಗಳು.
TV9 Web
| Edited By: |

Updated on:Jul 22, 2022 | 8:22 AM

Share

ಬೆಂಗಳೂರು: ನಾಗರಬಾವಿ ರಿಂಗ್​ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ ಲಾರಿ (lorry) ಪಲ್ಟಿಯಾಗಿರುವಂತಹ ಘಟನೆ ನಡೆದಿದೆ. ಪಕ್ಕದಲ್ಲಿ ಬರುತ್ತಿದ್ದ 2 ಬೈಕ್​ಗಳ ಮೇಲೆ ಮರದ ದಿಮ್ಮಿಗಳು ಬಿದ್ದು ತಮಿಳುನಾಡು ಮೂಲದ ಬೈಕ್​ ಸವಾರ ಸುಖೇಶ್(35) ಸಾವನ್ನಪ್ಪಿದ್ದಾನೆ. ಮತ್ತೊಬ್ಬರಿಗೆ ಗಂಭೀರ ಗಾಯವಾಗಿದೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ 20ಕ್ಕೂ ಹೆಚ್ಚು ಮರದ ದಿಮ್ಮಿಗಳು ಬಿದಿದ್ದು, ಘಟನಾ ಸ್ಥಳದಲ್ಲಿ  ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ರಾಯಚೂರಲ್ಲಿ ಹಾಡಹಗಲೇ ಹರಿದ ನೆತ್ತರು; ರಸ್ತೆಯಲ್ಲಿ ಅಟ್ಟಾಡಿಸಿ ಕಂಟ್ರ್ಯಾಕ್ಟರ್ ಕೊಲೆ ಮಾಡಿದ ಹಂತಕರು

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಟಿಟಿ ವಾಹನ ಡಿಕ್ಕಿ

ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಟಿಟಿ ವಾಹನ ಡಿಕ್ಕಿಯಾಗಿದ್ದು, ನಾಲ್ವರಿಗೆ ಗಂಭೀರ ಗಾಯವಾಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್​​ಪೇಟೆಯಲ್ಲಿ ಅಪಘಾತ ಸಂಭವಿಸಿದೆ. ಮೂವರು ಮಹಿಳಾ ಕಾರ್ಮಿಕರು ಹಾಗೂ ಚಾಲಕನಿಗೆ ಗಾಯವಾಗಿದ್ದು, ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ದಾಬಸ್​ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್​ಗೆ ಕಾರು ಡಿಕ್ಕಿ, ಓರ್ವ ಸಾವು, ಮತ್ತೊಬ್ಬರ ಸ್ಥಿತಿ ಗಂಭೀರ

ಚಿಕ್ಕಮಗಳೂರು: ಬೈಕ್​ಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಶಿಡ್ಲೆ ಬಳಿ ಘಟನೆ ನಡೆದಿದೆ. ಕಾರ್ ಗುದ್ದಿದ್ದ ರಭಸಕ್ಕೆ ಇಬ್ಬರು ಬೈಕ್ ಸವಾರರ ಕಾಲು ಕಟ್ ಆಗಿದೆ. ಮಣಿಪಾಲ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಶೇಖರ್ ಮೃತಪಟ್ಟಿದ್ದಾರೆ. ವಿಜಯೇಂದ್ರ ಎಂಬುವರ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರು ಶೃಂಗೇರಿ ತಾಲೂಕಿನ ಬೇಸೂರು ಗ್ರಾಮದವರು. ಅಪಘಾತದ ಸುದ್ದಿ ಕೇಳಿ ಸ್ಥಳದಲ್ಲಿ ನೂರಾರು ಜನರು ಜಮಾವಣೆಗೊಂಡಿದ್ದರು. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: YouTube ಚಾನಲ್‌ಗೆ ವ್ಯೂಸ್​ ಬರಲಿಲ್ಲವೆಂದು ಲೈಫ್​ ಎಂಡ್​ ಮಾಡಿಕೊಂಡ ಐಐಟಿ ಎಂಜಿನಿಯರಿಂಗ್ ವಿದ್ಯಾರ್ಥಿ!

ಕುಖ್ಯಾತ ಬೈಕ್ ಕಳ್ಳರನ್ನ ಬಂಧನ:

ಬೆಂಗಳೂರು: ಕುಖ್ಯಾತ ಬೈಕ್ ಕಳ್ಳರನ್ನ ಬೊಮ್ಮನಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ತನಿಳುನಾಡು ಮೂಲದ ನೆಡುಚೆಲಿಯನ್, ತಿರುಪತಿ, ವಲ್ಲರಸು ಬಂಧಿತ ಆರೋಪಿಗಳು. 26 ಬೈಕ್​ಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಮಿಳುನಾಡಿನಿಂದ ಬಸ್​ನಲ್ಲಿ ಬಂದು ರಸ್ತೆಗಳಲ್ಲಿ ಒಂಟಿಯಾಗಿರುತ್ತಿದ್ದ ಬೈಕ್​ಗಳನ್ನ ಕದ್ದೊಯ್ಯುತ್ತಿದ್ದರು. ಡಿಯೋ ಬೈಕ್​ಗಳನ್ನೆ ಟಾರ್ಗೆಟ್ ಮಾಡಿ ಕಳ್ಳತನ ಮಾಡಿತ್ತಿದ್ದರು.

Published On - 8:17 am, Fri, 22 July 22

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?