AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ಎಸ್ಕೇಪ್ ಆಗುತ್ತಿದ್ದವನನ್ನು ಹುಡುಕಿ ಹಿಡಿದ ವಿವಿಪುರಂ ಪೊಲೀಸರು

ಬೆಂಗಳೂರಿನಲ್ಲಿ ಕಾಮುಕರ ಸಂಖ್ಯೆ ಹೆಚ್ಚಾಗಿದೆ. ಮಹಿಳೆಯರು, ಯುವತಿಯರ ಮುಂದೆ ಅಸಭ್ಯವಾಗಿ ವರ್ತಿಸುವುದು. ಇಲ್ಲ ಅವರ ದೇಹವನ್ನು ಮುಟ್ಟಿ ವಿಕೃತಿ ಮರೆಯುವುದು, ಹೀಗೆ ನಾನಾ ರೀತಿಯಲ್ಲಿ ಲೈಂಗಿಕ ಕಿರುಕುಳ ನೀಡುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಅದರಂತೆ ಇಲ್ಲೋರ್ವ ವಿಕೃತ ಕಾಮುಕ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಯುವತಿಯರ ಮುಂದೆ ತನ್ನ ಮರ್ಮಾಂಗವನ್ನ ತೋರಿಸುತ್ತಿದ್ದವನನ್ನು ಪೊಲೀಸರು ಹುಡುಕಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ಎಸ್ಕೇಪ್ ಆಗುತ್ತಿದ್ದವನನ್ನು ಹುಡುಕಿ ಹಿಡಿದ ವಿವಿಪುರಂ ಪೊಲೀಸರು
ಅಯೂಬ್ ಉರ್ ರೆಹಮಾನ್
Jagadisha B
| Edited By: |

Updated on: Jul 08, 2024 | 9:31 PM

Share

ಬೆಂಗಳೂರು, (ಜುಲೈ 08): ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಯುವತಿಯರಿಗೆ ತನ್ನ ಮರ್ಮಾಂಗವನ್ನು ತೊರಿಸಿ ಎಸ್ಕೇಪ್ ಆಗುತ್ತಿದ್ದ ವಿಕೃತ ಕಾಮುಕನನ್ನು ಬೆಂಗಳೂರಿನ ವಿವಿಪುರಂ ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಅಯೂಬ್ ಉರ್ ರೆಹಮಾನ್(48) ಬಂಧಿತ ವಿಕೃತ ಕಾಮಿ. ಈತ ಯುವತಿಯರು ಹೆಚ್ಚಾಗಿರುವ ಕಾಲೇಜು ಟಾರ್ಗೆಟ್ ಮಾಡಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಯುವತಿಯರಿಗೆ ಮರ್ಮಾಂಗ ತೋರಿಸಿ ಪರಾರಿಯಾಗುತ್ತಿದ್ದ. ಹೀಗೆ ಮಾಡಿ ಎಸ್ಕೇಪ್ ಆಗುತ್ತಿದ್ದವನನ್ನು ಇಂದು (ಜುಲೈ 08) ವಿವಿಪುರಂ ಪೊಲೀಸರು ಹುಡುಕಾಡಿ ಬಂಧಿಸಿದ್ದಾರೆ.

ಬೈಕ್​ನಲ್ಲಿ ಬರುವ ಕಾಮುಕ ಉರ್ ರೆಹಮಾನ್, ವಿ.ವಿ. ಪುರಂ ರಸ್ತೆಯಲ್ಲಿ ಓಡಾಡುವ ವಿದ್ಯಾರ್ಥಿನಿಯರಿಗೆ ತನ್ನ ಖಾಸಗಿ ಅಂಗ ಪ್ರದರ್ಶಿಸಿ ಕಿರುಕುಳ ನೀಡುತ್ತಿದ್ದ. ಯುವತಿಯರು ಹೆಚ್ಚಾಗಿರುವ ಕಾಲೇಜು ಟಾರ್ಗೆಟ್ ಮಾಡಿ ಆ ರಸ್ತೆಗೆ ಇಳಿಯುವ ಕಾಮುಕ, ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಯುವತಿಯರಿರುವ ಕಡೆ ಬೈಕ್ ನಿಲ್ಲಿಸಿ ಮರ್ಮಾಂಗ ತೋರಿಸಿ ಎಸ್ಕೇಪ್ ಆಗುತ್ತಿದ್ದ. ಇದರಿಂದ ವಿದ್ಯಾರ್ಥಿನಿಯರಿಗೆ ಸಾಕಾಗಿ ಹೋಗಿತ್ತು. ಕೊನೆಗೆ ಕೆಲ ವಿದ್ಯಾರ್ಥಿನಿಯರು ಕಾಮುಕನ ಕೃತ್ಯವನ್ನು ಮೊಬೈಲ್​ನಲ್ಲಿ ಸೆರೆ ಹಿಡಿದು ವಿ.ವಿ.ಪುರಂ ಪೊಲೀಸರಿಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು.

ಇದನ್ನೂ ಓದಿ: ಎತ್ತ ಸಾಗುತ್ತಿದೆ ಬೆಂಗಳೂರು? ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ವಿಕೃತಿ, ಕುಟುಂಬದ ಜೊತೆ ಹೋಗ್ತಿದ್ದ ಮಹಿಳೆಗೆ ಕಿರಿಕ್

ವಿಡಿಯೋ ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಕಾಮುಕನನ್ನು ಬೆತ್ತಿ ಅಲ್ಲಿ, ಇಲ್ಲಿ ಹುಡುಕಾಡಿ ಕೊನೆಗೆ ಇಂದು ಸಂಜೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಅಯೂಬ್, ಕಲಾಸಿಪಾಳ್ಯದಲ್ಲಿ ಟೀ ಅಂಗಡಿ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ಇನ್ನಷ್ಟು ವಿಚಾರಣೆಗೊಳಪಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ