AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಳ್ಳತನಕ್ಕೆಂದು ಪಿಜಿಗೆ ನುಗ್ಗಿ ಯುವತಿಯ ಕಾಲು ಸವರಿ ಎಸ್ಕೇಪ್ ಆಗಿದ್ದವ ಕೊನೆಗೂ ಅರೆಸ್ಟ್

ಬೆಂಗಳೂರಿನ ಸುದ್ದಗುಂಟೆಪಾಳ್ಯದಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಕೊನೆಗೂ ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದಾರೆ. ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಯನ್ನು ಪತ್ತೆ ಹಚ್ಚಲಾಗಿದ್ದು, ಕಳ್ಳತನಕ್ಕೆ ಬಂದು ಯುವತಿ ಜತೆ ಅಸಭ್ಯ ವರ್ತನೆ ತೋರಿದ್ದಾಗಿ ಪೊಲೀಸರ ವಿಚಾರಣೆ ವೇಳೆ ಕಾಮುಕ ಬಾಯ್ಬಿಟ್ಟಿದ್ದಾನೆ. ಅಷ್ಟಕ್ಕೂ ಈ ಘಟನೆ ನಡೆದಿದ್ದು ಯಾವಾಗ? ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು: ಕಳ್ಳತನಕ್ಕೆಂದು ಪಿಜಿಗೆ ನುಗ್ಗಿ ಯುವತಿಯ ಕಾಲು ಸವರಿ ಎಸ್ಕೇಪ್ ಆಗಿದ್ದವ ಕೊನೆಗೂ ಅರೆಸ್ಟ್
K Naresh
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Sep 04, 2025 | 5:45 PM

Share

ಬೆಂಗಳೂರು, (ಸೆಪ್ಟೆಂಬರ್ 04): ನಗರದ ಸುದ್ದಗುಂಟೆಪಾಳ್ಯದ ಲೇಡಿಸ್ ಪಿ.ಜಿಗೆ ನುಗ್ಗಿ ಯುವತಿ ಲೈಂಗಿಕ ಕಿರುಕಳ ನೀಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಘಟನೆ ನಂತರ ಸಿಸಿಟಿವಿ ಆದರಿಸಿ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಕೆ. ನರೇಶ್ ಪಟ್ಯಂ ಬಂಧಿತ ಆರೋಪಿಯಾಗಿದ್ದಾನೆ. ಈತ ಆಂಧ್ರದ ಮದನ ಪಲ್ಲಿ ಮೂಲದವನೆಂದು ತಿಳಿದುಬಂದಿದೆ. ಈತ ಬೈಕ್ ಟ್ಯಾಕ್ಸಿ ಹಾಗೂ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡು ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಾಗಿದ್ದ. ಆದರೆ ಕಳ್ಳತನ ಮಾಡುವುದು ಕೂಡ ಆತನ ಕಸುಬಾಗಿತ್ತು. ಹೀಗಾಗಿ ಕಳ್ಳತನ ಮಾಡಲು ಪಿಜಿಗೆ ನುಗ್ಗಿದ್ದ ವೇಳೆ ಯುವತಿಯ ದೇಹವನ್ನು ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ತನಿಖೆ ವೇಳೆ ಗೊತ್ತಾಗಿದೆ.

ಆಂಧ್ರ ಪ್ರದೇಶ ಮೂಲದ ಕೆ. ನರೇಶ್ ಪಟ್ಯಂ ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡು ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಾಗಿದ್ದಾನೆ.ಡೆಲಿವರಿ ಬಾಯ್ ಮಾತ್ರವಲ್ಲದೇ ಈತ ಕಳ್ಳತನ ಮಾಡುವುದು ಕಾಯಕವಾಗಿ ಮಾಡಿಕೊಂಡಿದ್ದಾನೆ. ಈಗಾಗಲೇ ಆರೋಪಿ ವಿರುದ್ಧ ಮದನಪಲ್ಲಿಯಲ್ಲಿ ಕೂಡ ಎರಡು ಮೊಬೈಲ್ ಕಳ್ಳತನ ಪ್ರಕರಣಗಳಿವೆ. ಸದ್ಯ ಪಿಜಿಗೆ ನುಗ್ಗಿ ಕಳ್ಳತನ ಮಾಡಿ ಯುವತಿ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ನರೇಶ್ ನನ್ನು ಸಿಸಿಟಿವಿ ಆಧಾರದ ಮೇಲೆ ಸುದ್ದಗುಂಟೆ ಪಾಳ್ಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಪಿಜಿಯಲ್ಲಿ ಮಲಗಿದ್ದ ಯುವತಿಗೆ ಲೈಂಗಿಕ ದೌರ್ಜನ್ಯ; ಹಲ್ಲೆ ಮಾಡಿ ದುಡ್ಡಿನೊಂದಿಗೆ ಆರೋಪಿ ಪರಾರಿ

ಘಟನೆ ಹಿನ್ನೆಲೆ

ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಈ ಘಟನೆ ತಡವಾಗಿ ಬೆಳಕಿಗೆ ಬಂದಿತ್ತು. ಪಿಜಿಯಲ್ಲಿ ವಾಸಿಸುತ್ತಿದ್ದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಬಳಿಕ ಆರೋಪಿ ಹಣ ಕದ್ದು ಪರಾರಿಯಾಗಿದ್ದ. ಘಟನೆ ದುರ್ಗಾ ಲೇಡೀಸ್ ಪಿಜಿಯಲ್ಲಿ ಆಗಸ್ಟ್ 29ರಂದು ಬೆಳಗ್ಗೆ ಸುಮಾರು 3 ಗಂಟೆ ವೇಳೆಗೆ ನಡೆದಿತ್ತು. ಪಿಜಿಯಲ್ಲಿ ಮಲಗಿದ್ದ ಯುವತಿಯ ರೂಮಿಗೆ ಆರೋಪಿ ನುಗ್ಗಿದ್ದ. ಆದ್ರೆ, ಯುವತಿ ಮೊದಲು ತನ್ನ ರೂಮ್‌ಮೇಟ್ ಎಂದು ಭಾವಿಸಿ ಸುಮ್ಮನೆ ಮಲಗಿದ್ದಳು. ಬಳಿಕ ಪಿಜಿಯಲ್ಲಿನ ಎಲ್ಲಾ ರೂಮ್‌ಗಳ ಬಾಗಿಲುಗಳನ್ನು ಲಾಕ್ ಮಾಡಿದ ನಂತರ ನೇರವಾಗಿ ಯುವತಿಯ ಬಳಿ ಹೋಗಿ ಅವಳ ಮೈಮೇಲೆ ಕೈ ಹಾಕಿದ್ದಾನೆ. ಇದಕ್ಕೆ ಯುವತಿ ವಿರೋಧ ವ್ಯಕ್ತಪಡಿಸಿದಾಗ, ಆರೋಪಿ ಚಾಕು ತೋರಿಸಿ ಬೆದರಿಕೆ ಹಾಕಿದ್ದಾನೆ. ಈ ವೇಳೆ ಯುವತಿ ಕೂಗಾಡಿದ್ದಾಳೆ. ಆಗ ಆರೋಪಿ ಯುವತಿಯನ್ನು ಬಿಟ್ಟು, ರೂಮಿನಲ್ಲಿ ಇಟ್ಟುಕೊಂಡಿದ್ದ 2,500 ನಗದು ಕದ್ದುಕೊಂಡು ಸ್ಥಳದಿಂದ ಎಸ್ಕೇಪ್ ಆಗಿದ್ದ.

ಇನ್ನು ಯುವತಿಯ ಕೂಗಾಟದಿಂದ ನೆರೆಯವರು ಎಚ್ಚರಗೊಂಡು ಓಡೋಡಿ ಬಂದಿದ್ದಾರೆ. ನಂತರ ಈ ಘಟನೆ ಸಂಬಂಧ ಯುವತಿ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಿದ ಪೊಲೀಸರು,ಪೊಲೀಸರು ಸಿಸಿಟಿವಿ ದೃಶ್ಯಾವಳಿ ಹಾಗೂ ಸ್ಥಳೀಯ ಮಾಹಿತಿ ಆಧರಿಸಿ ಆರೋಪಿಯನ್ನು ಪತ್ತೆಹಚ್ಚುವ ಯಶಸ್ವಿಯಾಗಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್