ಬೆಂಗಳೂರಿನಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ
ಇತ್ತೀಚೆಗೆ ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಕುಳಿತು ಮಾತಾಡಿ ಬಗೆಹರಿಸಿಕೊಳ್ಳುವ ವಿಷಯಕ್ಕೂ ತಮ್ಮ ಜೀವನವನ್ನು ಅಂತ್ಯ ಮಾಡಿಕೊಳ್ಳಲು ಮುಂದಾಗುತ್ತಿದ್ದಾರೆ. ಇದೀಗ ಬೆಂಗಳೂರಿನ(Bengaluru) ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯೋರ್ವ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೆಂಗಳೂರು, ಜು.25: ಚಲಿಸುತ್ತಿದ್ದ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ(Bengaluru) ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಮೈಸೂರಿನ ಖಾಸಗಿ ಸಂಸ್ಥೆಯ ಉದ್ಯೋಗಿ ಸುಶಾಂತ್ (40) ಆತ್ಮಹತ್ಯೆ ಶರಣಾದವರು. ಮೂಲತಃ ಪಶ್ಚಿಮ ಬಂಗಾಳ ಮೂಲದವರಾಗಿರುವ ಮೃತ ಸುಶಾಂತ್, ಕೆಲಸದ ನಿಮಿತ್ತ ಮೈಸೂರಿನಿಂದ ಬೆಂಗಳೂರಿಗೆ ಬಂದಿದ್ದ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಕುಟುಂಬದವರಿಗೆ ಮಾಹಿತಿ ನೀಡಿದ ರೈಲ್ವೆ ಪೊಲೀಸರು
ಹೀಗೆ ಬಂದಿದ್ದವ ಸಂಜೆ ಮೈಸೂರಿಗೆ ಹಿಂದಿರುಗಲು ಸುಶಾಂತ್ ರೈಲು ನಿಲ್ದಾಣಕ್ಕೆ ಬಂದಿದ್ದ. ಆತ್ಮಹತ್ಯೆಗೂ ಮುನ್ನ ಒಡೆಯರ್ ಎಕ್ಸ್ಪ್ರೆಸ್ ರೈಲು ಹತ್ತಿದ್ದಾನೆ. ಅದೇನಾಯಿತೋ ಏನೋ, ಹೊರಡುವ ಸಂದರ್ಭದಲ್ಲಿ ಕೆಳಗಿಳಿದು ರೈಲಿಗೆ ತಲೆಕೊಟ್ಟಿದ್ದಾನೆ. ಘಟನೆ ಬಗ್ಗೆ ರೈಲ್ವೆ ಪೊಲೀಸರು ಆತನ ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪಶ್ಚಿಮ ಮೃತನ ಕುಟುಂಬ ಬಂಗಾಳದಿಂದ ಬೆಂಗಳೂರಿಗೆ ಬರುತ್ತಿದ್ದಾರೆ. ಈ ಕುರಿತು ಮೆಜೆಸ್ಟಿಕ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಬೆಂಗಳೂರು ಗ್ರಾಮಾಂತರ: ಯುಟ್ಯೂಬ್ ಚಾನೆಲ್ ಮಾಲೀಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣು
ಮಳಗಿ ಧರ್ಮಾ ಜಲಾಶಯದಲ್ಲಿ ಈಜಲು ತೆರಳಿದ್ದ ಯುವಕ ಸಾವು
ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ತಾಲೂಕಿನ ಮಳಗಿ ಧರ್ಮಾ ಡ್ಯಾಂಗೆ ಈಜಲು ತೆರಳಿದ್ದ ಯುವಕನೋರ್ವ ಸಾವನ್ನಪ್ಪಿದ್ದಾನೆ. ಮುಂಡಗೋಡ ತಾಲೂಕಿನ ಮುಡಸಾಲಿ ನಿವಾಸಿ ಶ್ರೀಕಾಂತ್(20) ಮೃತ ಯುವಕ. ನಿನ್ನೆ(ಜು.24) 8 ಸ್ನೇಹಿತರ ಜೊತೆ ಮಳಗಿ ಧರ್ಮಾ ಡ್ಯಾಂ ವೀಕ್ಷಣೆಗೆ ಆಗಮಿಸಿದ್ದ. ಈ ವೇಳೆ ಸ್ನೇಹಿತನ ಜತೆ ಜಲಾಶಯದಲ್ಲಿ ಈಜಲು ಹೋಗಿದ್ದ ವೇಳೆ ಅವಘಡ ನಡೆದಿದೆ. ಇಂದು ಜೀವರಕ್ಷಕ ಸಿಬ್ಬಂದಿ ಜಲಾಶಯದಿಂದ ಶ್ರೀಕಾಂತ್ ಶವ ಹೊರತೆಗೆದಿದ್ದಾರೆ. ಈ ಕುರಿತು ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ