ಬೆಂಗಳೂರು: ಕಟ್ಟಡದ ಮೂರನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ, ಆರನೇ ಮಹಡಿಗೂ ಹಬ್ಬಿದ ಬೆಂಕಿ

ಬೆಂಗಳೂರು ನಗರದ ಕುಂಬಾರಪೇಟೆಯಲ್ಲಿರುವ ಮಕ್ಕಳ ಆಟದ ಸಾಮಾನು, ಎಲೆಕ್ಟ್ರಾನಿಕ್ಸ್ ವಸ್ತು ಮಾರಾಟದ ಮಳಿಗೆಯ ಮೂರನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವಾಗ ತಡವಾಗಿದ್ದರಿಂದ ಬೆಂಕಿಯು ಆರನೇ ಮಹಡಿಗೂ ಹಬ್ಬಿದೆ. ಸದ್ಯ, ನೀರು ಖಾಲಿಯಾಗಿದ್ದರಿಂದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಡಪಡುತ್ತಿದ್ದಾರೆ.

ಬೆಂಗಳೂರು: ಕಟ್ಟಡದ ಮೂರನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ, ಆರನೇ ಮಹಡಿಗೂ ಹಬ್ಬಿದ ಬೆಂಕಿ
ಬೆಂಗಳೂರು ನಗರದ ಕುಂಬಾರಪೇಟೆಯಲ್ಲಿರುವ ಕಟ್ಟಡವೊಂದರಲ್ಲಿ ಅಗ್ನಿ ಅವಘಡ
Follow us
| Updated By: Rakesh Nayak Manchi

Updated on:Nov 19, 2023 | 8:47 PM

ಬೆಂಗಳೂರು, ನ.19: ನಗರದ (Bengaluru) ಕುಂಬಾರಪೇಟೆಯಲ್ಲಿರುವ ಮಕ್ಕಳ ಆಟದ ಸಾಮಾನು, ಎಲೆಕ್ಟ್ರಾನಿಕ್ಸ್ ವಸ್ತು ಮಾರಾಟದ ಮಳಿಗೆಯ ಮೂರನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ (Fire Accident) ಸಂಭವಿಸಿದೆ. ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವಾಗ ತಡವಾಗಿದ್ದರಿಂದ ಬೆಂಕಿಯು ಆರನೇ ಮಹಡಿಗೂ ಹಬ್ಬಿದೆ. ಸದ್ಯ, ನೀರು ಖಾಲಿಯಾಗಿದ್ದರಿಂದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಡಪಡುತ್ತಿದ್ದಾರೆ.

ಪ್ಲಾಸ್ಟಿಕ್ ಗೋದಾಮಿನ 3, 4ನೇ ಮಹಡಿಯಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದೆ. ಕೂಡಲೇ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿ ಒಂದು ಗಂಟೆಯಾದರೂ ಸ್ಥಳಕ್ಕೆ ಆಗಮಿಸರಿಲ್ಲ. ಇದರಿಂದಾಗಿ ಬೆಂಕಿ ಮತ್ತಷ್ಟು ಹೆಚ್ಚಾಯಿತು.

ಇದನ್ನೂ ಓದಿ: ಉಡುಪಿ: ದೀಪಾವಳಿ ಪೂಜೆ ವೇಳೆ ಅಗ್ನಿ ಅವಘಡ, 7 ಮೀನುಗಾರಿಕಾ ಹಡಗುಗಳು ಬೆಂಕಿಗಾಹುತಿ

ತಡವಾಗಿ ಐದು ವಾಹನಗಳಲ್ಲಿ ಬಂದ 30 ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ. ಆದರೆ, ಬೆಂಕಿ ಧಗಧಗಿಸಿದ ಪರಿಣಾಮ ಮೂರನೇ ಮಹಡಿಯಿಂದ ಆರನೇ ಮಹಡಿಗೆ ಬೆಂಕಿ ಹಬ್ಬಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯದ ಸಂಭವಿಸಿಲ್ಲ.

ಅಗ್ನಿಶಾಮಕ ದಳದ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ

ತಡವಾಗಿ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕುತ್ತಿದ್ದಾರೆ. ಸಿಬ್ಬಂದಿ ನಿರ್ಲಕ್ಷ್ಯದಿಂದಲೇ ಈ ರೀತಿಯಾಗಿದೆ. ಮೊದಲು ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಮಾಹಿತಿ ನೀಡಿ ಒಂದು ಗಂಟೆಯಾದ್ರೂ ಸಿಬ್ಬಂದಿ ಬಂದಿರಲಿಲ್ಲ. ತಡವಾಗಿ ಬಂದೂ ಇದೀಗ ನೀರು ಖಾಲಿ ಅಂತಿದ್ದಾರೆ. ಇದರಿಂದಲೇ ಮೇಲಿನ ಮಹಡಿಗೂ ಬೆಂಕಿ ತಗುಲಿದೆ ಎಂದು ಸ್ಥಳೀಯ ನಿವಾಸಿ ಸುಂದರ ಎಂಬವರು ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:35 pm, Sun, 19 November 23

ತಾಜಾ ಸುದ್ದಿ
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ