ಬೆಂಗಳೂರು, ನ.19: ನಗರದ (Bengaluru) ಕುಂಬಾರಪೇಟೆಯಲ್ಲಿರುವ ಮಕ್ಕಳ ಆಟದ ಸಾಮಾನು, ಎಲೆಕ್ಟ್ರಾನಿಕ್ಸ್ ವಸ್ತು ಮಾರಾಟದ ಮಳಿಗೆಯ ಮೂರನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ (Fire Accident) ಸಂಭವಿಸಿದೆ. ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವಾಗ ತಡವಾಗಿದ್ದರಿಂದ ಬೆಂಕಿಯು ಆರನೇ ಮಹಡಿಗೂ ಹಬ್ಬಿದೆ. ಸದ್ಯ, ನೀರು ಖಾಲಿಯಾಗಿದ್ದರಿಂದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಡಪಡುತ್ತಿದ್ದಾರೆ.
ಪ್ಲಾಸ್ಟಿಕ್ ಗೋದಾಮಿನ 3, 4ನೇ ಮಹಡಿಯಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದೆ. ಕೂಡಲೇ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿ ಒಂದು ಗಂಟೆಯಾದರೂ ಸ್ಥಳಕ್ಕೆ ಆಗಮಿಸರಿಲ್ಲ. ಇದರಿಂದಾಗಿ ಬೆಂಕಿ ಮತ್ತಷ್ಟು ಹೆಚ್ಚಾಯಿತು.
ಇದನ್ನೂ ಓದಿ: ಉಡುಪಿ: ದೀಪಾವಳಿ ಪೂಜೆ ವೇಳೆ ಅಗ್ನಿ ಅವಘಡ, 7 ಮೀನುಗಾರಿಕಾ ಹಡಗುಗಳು ಬೆಂಕಿಗಾಹುತಿ
ತಡವಾಗಿ ಐದು ವಾಹನಗಳಲ್ಲಿ ಬಂದ 30 ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ. ಆದರೆ, ಬೆಂಕಿ ಧಗಧಗಿಸಿದ ಪರಿಣಾಮ ಮೂರನೇ ಮಹಡಿಯಿಂದ ಆರನೇ ಮಹಡಿಗೆ ಬೆಂಕಿ ಹಬ್ಬಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯದ ಸಂಭವಿಸಿಲ್ಲ.
ತಡವಾಗಿ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕುತ್ತಿದ್ದಾರೆ. ಸಿಬ್ಬಂದಿ ನಿರ್ಲಕ್ಷ್ಯದಿಂದಲೇ ಈ ರೀತಿಯಾಗಿದೆ. ಮೊದಲು ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಮಾಹಿತಿ ನೀಡಿ ಒಂದು ಗಂಟೆಯಾದ್ರೂ ಸಿಬ್ಬಂದಿ ಬಂದಿರಲಿಲ್ಲ. ತಡವಾಗಿ ಬಂದೂ ಇದೀಗ ನೀರು ಖಾಲಿ ಅಂತಿದ್ದಾರೆ. ಇದರಿಂದಲೇ ಮೇಲಿನ ಮಹಡಿಗೂ ಬೆಂಕಿ ತಗುಲಿದೆ ಎಂದು ಸ್ಥಳೀಯ ನಿವಾಸಿ ಸುಂದರ ಎಂಬವರು ಆಕ್ರೋಶ ಹೊರಹಾಕಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:35 pm, Sun, 19 November 23