ಬೆಂಗಳೂರಿನಲ್ಲೊಂದು ಅಮಾನುಷ ಕೃತ್ಯ, ಹೆತ್ತ ತಾಯಿಯಿಂದಲೇ ಮಗುವಿನ ಮೇಲೆ ಹಲ್ಲೆ

ಪ್ರತಿ ಮಕ್ಕಳಿಗೂ ಹೆತ್ತ ತಾಯಿಯೇ ಶ್ರೀರಕ್ಷೆ.. ಅದೆಷ್ಟೋ ಹೆಣ್ಮಕ್ಕಳು ಮಕ್ಕಳಾಗಿಲ್ಲ ಎಂದು ಕೊರಗುತ್ತಾ ಶತಕೋಟಿ ದೇವರನ್ನೆಲ್ಲ ಪೂಜಿಸುತ್ತಾರೆ. ಆದರೆ ಬೆಂಗಳೂರಿನಲ್ಲಿ ಪಾಪಿ ತಾಯಿಯೊಬ್ಬಳು ಪ್ರಿಯಕರನ ಜತೆ ಸೇರಿ ಹೆತ್ತ ಮಗುವಿನ (Assault Case) ಮೇಲೆ ಹಲ್ಲೆ ನಡೆಸಿರುವ ಅಮಾನುಷ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರಿನಲ್ಲೊಂದು ಅಮಾನುಷ ಕೃತ್ಯ, ಹೆತ್ತ ತಾಯಿಯಿಂದಲೇ ಮಗುವಿನ ಮೇಲೆ ಹಲ್ಲೆ
Edited By:

Updated on: Mar 03, 2024 | 12:59 PM

ಬೆಂಗಳೂರು, (ಮಾರ್ಚ್ 03): ಲಾಲನೆ ಪಾಲನೆ ಮಾಡಬೇಕಾದವಳೇ ತನ್ನ ಮಗುವನ್ನು ಮನೆಯಲ್ಲಿ ಕೂಡಿ ಹಾಕಿ, ಮನಬಂದಂತೆ ಹೊಡೆದು ಬಡಿದು ಹಲ್ಲೆ ಮಾಡಿದ್ದಾಳೆ. ಗಂಡನಿಂದ ವಿಚ್ಛೇದನೆ ಪಡೆದುಕೊಂಡಿರುವ ಸ್ಟ್ಯಾಲಿನ್ ಎನ್ನುವ ಮಹಿಳೆ ತನ್ನ ಪ್ರಿಯಕರನ ಜೊತೆ ಸೇರಿ ಎರಡ್ಮೂರು ವರ್ಷದ ಮಗುವಿನ ಮೇಲೆ ಹಲ್ಲೆ ಮಾಡಿದ್ದಾಳೆ. ಈ ಹಿನ್ನೆಲೆಯಲ್ಲಿ ಮಗುವಿನ ಮೈತುಂಬ ಗಾಯಗಳಾಗಿವೆ. ಈ ಅಮಾನುಷ್ಯ ಕೃತ್ಯ ಬೆಂಗಳೂರಿನ(Bengaluru) ವೀರಭದ್ರ ನಗರದಲ್ಲಿ ನಡೆದಿದೆ. 2-3 ವರ್ಷದ ಮಗುವು ತೊದಲನುಡಿಯಲ್ಲೇ ತನಗೆ ಹೇಗೆಲ್ಲ ಹೊಡೆದು ಹಿಂಸೆ ಕೊಟ್ಟರು ಎಂಬುದನ್ನು ತಿಳಿಸಿದೆ.

ಮನೆಗೆ ಬಂದ ಅಂಕಲ್‌ವೊಬ್ಬರ್‌ ಕುಕ್ಕರ್‌ನಿಂದ ತಲೆಗೆ ಹೊಡೆದರಂತೆ. ಅಮ್ಮ ಕೂಡ ನೀನು ಬೇಡ ಮನೆ ಬಿಟ್ಟು ಹೋಗು ಎಂದು ಕಾಲಲ್ಲಿ ಒದ್ದರಂತೆ. ಇದೆಲ್ಲವನ್ನೂ ಮಗುವು ಸ್ಥಳೀಯರೊಬ್ಬರ ಬಳಿ ಹೇಳಿಕೊಂಡಿದೆ.

ಇದನ್ನೂ ಓದಿ: ಕಬ್ಬಿಣ ಕಾಯಿಸಿ ಮೈಮೇಲೆ ಬರೆ ಎಳೆದ ಮಲತಾಯಿ, ನಡೆಯಲು ಆಗದೆ ಪುಟ್ಟ ಬಾಲಕಿ ನರಳಾಟ

ಬೆಳಗ್ಗೆ ಕೆಲಸಕ್ಕೆ ಹೋಗುವಾಗ ಮನೆಗೆ ಬೀಗ ಹಾಕಿ ಹೋದರೆ ರಾತ್ರಿ ಬರುವವರೆಗೂ ಬಾಗಿಲು ತೆಗಯದೆ ಕೂಡಿಹಾಕುತ್ತಾಳೆ. ಈ ವಿಷಯ ತಿಳಿಯುತ್ತಿದ್ದಂತೆ ಸಂಘಟನೆಯೊಂದು ಮಗುವಿನ ರಕ್ಷಣೆಗೆ ಬಂದಿದೆ. ಪಾಪಿ ತಾಯಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮನೆಯಲ್ಲಿ ಕೂಡಿ ಹಾಕಿದ್ದ ಮಗುವನ್ನು ರಕ್ಷಿಸಿ, ಗೃಹ ಬಂಧನಕ್ಕೆ ಮುಕ್ತಿಕೊಟ್ಟಿದ್ದಾರೆ. ಇನ್ನು ಮೈತುಂಬ ಗಾಯಗೊಂಡಿದ್ದ ಮಗುವಿಗೆ ವೈದ್ಯರಿಂದ ಚಿಕಿತ್ಸೆ ಕೊಡಿಸಲಾಗಿದೆ. ಸಿಡಬ್ಲ್ಯೂಸಿಗೆ(CWC)ಗೆ ದೂರು ಕೊಟ್ಟರೂ ಕ್ರಮಕೈಗೊಂಡಿಲ್ಲ. ಮತ್ತೊಂದು ಕಡೆ ಪೊಲೀಸರು ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.

ಹೊಡೆದಿದ್ದನ್ನು ಒಪ್ಪಿಕೊಂಡ ಮಹಾತಾಯಿ

ಮಗುವನಗೆ ಹೊಡೆದಿರುವುದನ್ನು ಸ್ವತಃ ತಾಯಿ ಸ್ಟ್ಯಾರೀನ್ ಒಪ್ಪಿಕೊಂಡಿದ್ದಾಳೆ. ನಾನು ಮಗುವಿಗೆ ಹೊಡದಿದ್ದೇನೆ. ಆದ್ರೆ ಮಗು ಬುದ್ಧಿಕಲಿಬೇಕು ಎಂದು ಮಾಡಿದ್ದೀನಿ. ಜೀವನದಲ್ಲಿ ಸ್ವಂತ ಕಾಲಿನ ಮೇಲೆ ನಿಲ್ಲಬೇಕು ಎಂದು ಈ ರೀತಿ ಮಾಡಿದ್ದೀನಿ. ಮಗುವೇ ಸುಳ್ಳು ಹೇಳುತ್ತೆ. ನನಗೆ ಕೆಲಸ ಇರಲಿಲ್ಲ. ನನ್ನ ಗಂಡನ ಜೊತೆ ವಿಚ್ಛೇದನವಾಗಿದ್ದು, ಮನೆಯಲ್ಲಿ ನಾನು ಒಬ್ಬರೇ ಇರುವುದು. ಹೀಗಾಗಿ ಮಗುವನ್ನ ಕೂಡಿ ಹಾಕುತ್ತಿದ್ದೆ ಎಂದು ಸಮಜಾಯಿಷಿ ನೀಡಿದ್ದಾಳೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:45 pm, Sun, 3 March 24

TV9 Web

TV9 Kannada

Read More
Loading...
Unable to load recommendations.
Follow Us