ಬೆಂಗಳೂರು: ನಕಲಿ ಅಂಕಪಟ್ಟಿ ನೀಡಿ ಉದ್ಯೋಗ ಪಡೆಯಲು ಯತ್ನ! ಸಾಫ್ಟ್​ವೇರ್​ ಕಂಪನಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ

ಸಿದ್ದಲಿಂಗೇಶ ಮೊದಲು ದ್ವಿತೀಯ ದರ್ಜೆ ಸಹಾಯಕ ಹುದ್ದೆ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದ. ಬಾಗಲಕೋಟೆ ಉಪನಿರ್ದೇಶಕರ ಕಚೇರಿಗೆ ದಾಖಲಾತಿಗಳೊಂದಿಗೆ ಮನವಿ ಸಲ್ಲಿಸಿದ್ದ. ಅನಂತರ ಪದವಿ ಪ್ರಮಾಣ ಪತ್ರ ನೀಡಿ ಪ್ರಥಮ ದರ್ಜೆ ಹುದ್ದೆ ನೀಡುವಂತೆ ಕೇಳಿಕೊಂಡಿದ್ದ.

ಬೆಂಗಳೂರು: ನಕಲಿ ಅಂಕಪಟ್ಟಿ ನೀಡಿ ಉದ್ಯೋಗ ಪಡೆಯಲು ಯತ್ನ! ಸಾಫ್ಟ್​ವೇರ್​ ಕಂಪನಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: sandhya thejappa

Updated on:Mar 30, 2022 | 9:26 AM

ಬೆಂಗಳೂರು: ವ್ಯಕ್ತಿಯೊಬ್ಬ ಅನುಕಂಪದ ಅಧಾರದ ಮೇಲೆ ನಕಲಿ ಅಂಕಪಟ್ಟಿ (Mark Card) ನೀಡಿ ಉದ್ಯೋಗ (Job) ಪಡೆಯಲು ಯತ್ನಿಸಿದ್ದಾನೆ. ನಕಲಿ ಅಂಕಪಟ್ಟಿ ನೀಡಿ ಪ್ರಥಮ ದರ್ಜೆ ಹುದ್ದೆ ಪಡೆಯಲು ಯತ್ನಿಸಿರುವ ಆರೋಪ ಕೇಳಿಬಂದಿದ್ದು, ಸಿದ್ಧಲಿಂಗೇಶ ಗಂಗಾಧರ ಬುದ್ನಿ ವಿರುದ್ಧ ವಿಧಾನ ಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ವಿಷ್ಣುವರ್ಧನ ರೆಡ್ಡಿಯಿಂದ ದೂರು ದಾಖಲಾಗಿದೆ. ಇಲಾಖೆಯ ಸೇವೆಯಲ್ಲಿರುವಾಗಲೆ ಸಿದ್ಧಲಿಂಗೇಶ ತಂದೆ ಗಂಗಾಧರ ಬುದ್ನಿ ಮರಣ ಹೊಂದಿದ್ದರು. ಅನುಕಂಪದ ಅಧಾರದ ಮೇಲೆ ಕೆಲಸ ನೀಡುವಂತೆ ಸಿದ್ದಲಿಂಗೇಶ ಪ್ರಸ್ತಾವನೆ ಸಲ್ಲಿಸಿದ್ದ.

ಸಿದ್ದಲಿಂಗೇಶ ಮೊದಲು ದ್ವಿತೀಯ ದರ್ಜೆ ಸಹಾಯಕ ಹುದ್ದೆ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದ. ಬಾಗಲಕೋಟೆ ಉಪನಿರ್ದೇಶಕರ ಕಚೇರಿಗೆ ದಾಖಲಾತಿಗಳೊಂದಿಗೆ ಮನವಿ ಸಲ್ಲಿಸಿದ್ದ. ಅನಂತರ ಪದವಿ ಪ್ರಮಾಣ ಪತ್ರ ನೀಡಿ ಪ್ರಥಮ ದರ್ಜೆ ಹುದ್ದೆ ನೀಡುವಂತೆ ಕೇಳಿಕೊಂಡಿದ್ದ. ನೇಮಕಾತಿ ಸಂದರ್ಭದಲ್ಲಿ ದಾಖಲಾತಿ ಪರಿಶೀಲನೆ ವೇಳೆ ನಕಲಿ ಅಂಕಪಟ್ಟಿ ನೀಡಿರುವುದು ಪತ್ತೆಯಾಗಿದೆ. ಇಲಾಖೆಗೆ ವಂಚಿಸಿರುವ ಆರೋಪದಡಿ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ದಾಖಲಾಗಿದೆ.

ಸಾಫ್ಟ್​ವೇರ್​ ಕಂಪನಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ: ಹುಬ್ಬಳ್ಳಿ: ಸಾಫ್ಟ್​ವೇರ್​ ಕಂಪನಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಅಮಿತ್ ಪ್ರಭು, ಅಂಕಿತಾ ಕಾಮತ್, ಬೆಂಗಳೂರಿನ ದೀಪಕ್ ಶರಣಕುಮಾರ್ ಎಂಬುವವರು ಹುಬ್ಬಳ್ಳಿಯ ಸಿಬಿಟಿ ಕಿಲ್ಲಾದ ವಿನೋದ್ ರಾಠೋಡ್​ಗೆ ವಂಚನೆ ಮಾಡಿದ್ದಾಗಿ ಆರೋಪ ಕೇಳಿಬಂದಿದೆ. ಆರೋಪಿಗಳು ಬಿಎಲ್ಎಚ್ ಹೈಟೆಕ್ ಪ್ರೈ.ಲಿ ಎಂಬ ಕಂಪನಿ ಹೆಸರಿನಲ್ಲಿ 3.5 ಕೊಟಿ ರೂಪಾಯಿ ವಂಚನೆ ಮಾಡಿದ್ದಾರಂತೆ. ಪ್ರಕರಣ ಸಂಬಂಧ ಹುಬ್ಬಳ್ಳಿ ಶಹರ ಠಾಣೆಯಲ್ಲಿ ನಾಲ್ವರ ವಿರುದ್ಧ ದೂರು ದಾಖಲಾಗಿದೆ.

ಇದನ್ನೂ ಓದಿ

ಹಿಜಾಬ್ ವಿವಾದಕ್ಕೆ ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗದಂತೆ ಸಾಮಾಜಿಕ ಜಾಲತಾಣದಲ್ಲಿ ತಿಳುವಳಿಕೆ ಅಭಿಯಾನ ಆರಂಭ

40 ವರ್ಷದ ನಂತರವೂ ಮಹಿಳೆಯರು ಫಿಟ್ ಆಗಿರುವುದು ಹೇಗೆ? ಇಲ್ಲಿದೆ ಮಾಹಿತಿ

Published On - 9:24 am, Wed, 30 March 22

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್