ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ಗಾಯಗೊಂಡಿದ್ದ ವ್ಯಕ್ತಿ ಸಾವು
ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ, ಜುಲೈ 9ರಂದು ನಾಗರಬಾವಿ ಸರ್ಕಲ್ ಬಳಿ ಅಪಘಾತ ಸಂಭವಿಸಿತ್ತು. ಸ್ಥಳದಲ್ಲೇ ವ್ಯಕ್ತಿಯ ಪತ್ನಿ ಸಾವನ್ನಪ್ಪಿದ್ದರು, ಇದೀಗ ಪತಿಯು ಕೂಡ ಕೊನೆಯುಸಿರೆಳೆದಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಯೋಗೇಂದ್ರ ಮೃತಪಟ್ಟಿದ್ದಾರೆ.

ನಾಗರಬಾವಿ ಸರ್ಕಲ್ ಬಳಿ ಕಸದ ಲಾರಿಯು ದಂಪತಿ ಇದ್ದ ಬೈಕ್ಗೆ ಡಿಕ್ಕಿ ಹೊಡೆದಿತ್ತು . ಜುಲೈ 9ರಂದು ರಾತ್ರಿ ವಿಜಯಾ ಮೃತಪಟ್ಟಿದ್ದರು. ಬ್ಯಾಟರಾಯನಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಏಪ್ರಿಲ್ 19ರಂದು ಇಂಥದ್ದೇ ಘಟನೆ ನಡೆದಿತ್ತು: ದ್ವಿಚಕ್ರ ವಾಹನಕ್ಕೆ ಕಸದ ಲಾರಿ ಡಿಕ್ಕಿಯಾಗಿ ಮಹಿಳೆ ಮೃತಪಟ್ಟಿರುವ ಘಟನೆ ನಗರದ ನಾಯಂಡಹಳ್ಳಿ ಬಳಿ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಸೇಂಟ್ ಮಾರ್ಕ್ಸ್ ರಸ್ತೆಯಿಂದ ರಾಜರಾಜೇಶ್ವರಿ ನಗರಕ್ಕೆ ಹೋಗುತ್ತಿದ್ದ ಪದ್ಮಿನಿ ಮೃತರು.
ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು. ಸ್ಕೂಟರ್ಗೆ ಡಿಕ್ಕಿ ಹೊಡೆಯುತ್ತಿದ್ದಂತೆ ಚಾಲಕ ಲಾರಿಯನ್ನು ರಸ್ತೆಯಲ್ಲಿಯೇ ನಿಲ್ಲಿಸಿ ಪರಾರಿಯಾದ. ಕಸದ ಲಾರಿಗಳಿಂದ ಪದೇಪದೇ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಅಧಿಕಾರಿಗಳು ತ್ಯಾಜ್ಯ ವಿಲೇವಾರಿ ವಾಹನಗಳ ಕ್ರಮಬದ್ಧ ತಪಾಸಣೆ ಮತ್ತು ಮುಂಜಾಗ್ರತಾ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
ಈ ಕುರಿತು ಆದೇಶ ಹೊರಡಿಸಿರುವ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಎಲ್ಲ ಕಾಂಪ್ಯಾಕ್ಟರ್, ಟಿಪ್ಪರ್ಗಳು ಫಿಟ್ನೆಸ್ ಸರ್ಟಿಫಿಕೆಟ್ ಹೊಂದಿರಬೇಕು. ವೇಗ ನಿಯಂತ್ರಕಗಳನ್ನು ಅಳವಡಿಸಿರಬೇಕು ಎಂದು ಹೇಳಿದ್ದರು.