ಬ್ಯಾಂಕಾಕ್‌ನಿಂದ ಬಂದವನ ಬ್ಯಾಗಲ್ಲಿತ್ತು ಹೆಬ್ಬಾವು, ಮೊಸಳೆ! ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 234 ಪ್ರಾಣಿಗಳ ಜಪ್ತಿ

ಆರೋಪಿಯ ಬ್ಯಾಗ್​ ಅನ್ನು ತೆರೆದು ನೋಡಿದಾಗ, ಅದರಲ್ಲಿ ಜೀವಂತ ಪ್ರಾಣಿಗಳು ಮತ್ತು ಸರೀಸೃಪಗಳು ಕಂಡುಬಂದವು. ಮರಿ ಕಾಂಗರೊಂದು ಉಸಿರುಗಟ್ಟಿ ಮೃತಪಟ್ಟಿತ್ತು ಎಂದು ಕಸ್ಟಮ್ಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ಬ್ಯಾಂಕಾಕ್‌ನಿಂದ ಬಂದವನ ಬ್ಯಾಗಲ್ಲಿತ್ತು ಹೆಬ್ಬಾವು, ಮೊಸಳೆ! ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 234 ಪ್ರಾಣಿಗಳ ಜಪ್ತಿ
ಟ್ರ್ಯಾಲಿ ಬ್ಯಾಗ್​ನಲ್ಲಿ ಸಿಕ್ಕಿದ ಪ್ರಾಣಿಗಳು
Edited By:

Updated on: Aug 22, 2023 | 11:00 PM

ಬೆಂಗಳೂರು, ಆಗಸ್ಟ್ 22: ವಿಮಾನದಲ್ಲಿ ಪ್ರಯಾಣ ಮಾಡಿ ಬಂದವರ ಟ್ರ್ಯಾಲಿ ಬ್ಯಾಗ್​​ನಲ್ಲಿ (Trolley Bag) ಹೆಬ್ಬಾವು, ಊಸರವಳ್ಳಿ, ಆಮೆ, ಮೊಸಳೆ ಮರಿ (Animals) ಇರಲು ಸಾಧ್ಯವೇ? ಅನುಮಾನವೇ ಬೇಡ. ಬರೀ ಇಷ್ಟೇ ಅಲ್ಲ, ಒಟ್ಟು 234 ಪ್ರಾಣಿಗಳು ಇದ್ದುದು ಪತ್ತೆಯಾಗಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಜಪ್ತಿ ಮಾಡಲಾಗಿದೆ. ಕೆಂಪೇಗೌಡ ಏರ್‌ಪೋರ್ಟ್‌ನ ಕಸ್ಟಮ್ಸ್‌ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಇಂಥದ್ದೊಂದು ಅಪರೂಪದ ವಿದ್ಯಮಾನ ಬೆಳಕಿಗೆ ಬಂದಿದೆ. ಈ ಪ್ರಾಣಿಗಳನ್ನು ವಿದೇಶದಿಂದ ಆಗಮಿಸಿದ್ದ ಪ್ರಯಾಣಿಕರೊಬ್ಬರು ಟ್ರ್ಯಾಲಿ ಬ್ಯಾಗ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದರು.

ಬ್ಯಾಂಕಾಕ್‌ನಿಂದ ‘ಎಫ್‌ಡಿ 137’ ವಿಮಾನದಲ್ಲಿ ಬಂದಿದ್ದ ಪ್ರಯಾಣಿಕ ವಿವಿಧ ಪ್ರಾಣಿಗಳನ್ನು ಟ್ರ್ಯಾಲಿ ಬ್ಯಾಗ್​ನಲ್ಲಿ ಮರೆಮಾಚಿ ಸಾಗಿಸುತ್ತಿದ್ದ. ಈ ವೇಳೆ ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಪ್ರಾಣಿಗಳು ಪತ್ತೆಯಾಗಿವೆ. ಆರೋಪಿಯು ಪ್ರಾಣಿಗಳನ್ನು ಬಾಕ್ಸ್‌ಗಳಲ್ಲಿ ತುಂಬಿಕೊಂಡು ದೊಡ್ಡ ಬ್ಯಾಗ್​ನಲ್ಲಿಟ್ಟುಕೊಂಡು ಬಂದಿದ್ದ. ಸದ್ಯ ಕಸ್ಟಮ್ಸ್ ಅಧಿಕಾರಿಗಳು ಪ್ರಾಣಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ನೀಡಿದ್ದಾರೆ.

ಹೆಚ್ಚಿನ ವಿಚಾರಣೆಗೆ ಆರೋಪಿಯನ್ನು ಕಸ್ಟಮ್ಸ್ ಕಾಯ್ದೆಯ ಸೆಕ್ಷನ್ 104 ರ ಅಡಿಯಲ್ಲಿ ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗುತ್ತಿದೆ. ಆರೋಪಿಯು ತಮಿಳುನಾಡು ಮೂಲದ 32 ವರ್ಷ ವಯಸ್ಸಿನ ವ್ಯಕ್ತಿ ಎನ್ನಲಾಗಿದೆ.

ಆರೋಪಿಯ ಬ್ಯಾಗ್​ ಅನ್ನು ತೆರೆದು ನೋಡಿದಾಗ, ಅದರಲ್ಲಿ ಜೀವಂತ ಪ್ರಾಣಿಗಳು ಮತ್ತು ಸರೀಸೃಪಗಳು ಕಂಡುಬಂದವು. ಮರಿ ಕಾಂಗರೊಂದು ಉಸಿರುಗಟ್ಟಿ ಮೃತಪಟ್ಟಿತ್ತು ಎಂದು ಕಸ್ಟಮ್ಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಕಾರಿನೊಳಗೆ ನಾಯಿ ಲಾಕ್, ಶ್ವಾನದ ಪ್ರಾಣಕ್ಕೆ ಕುತ್ತು ತಂದಿಟ್ಟ ಮಾನಸಿಕ ಅಸ್ವಸ್ಥ

ಬ್ಯಾಂಕಾಕ್‌ನಲ್ಲಿ ಈ ಬ್ಯಾಗ್ ತನಗೆ ಹಸ್ತಾಂತರಿಸಲ್ಪಟ್ಟಿತ್ತು. ಅದರಲ್ಲಿ ಏನಿತ್ತು ಎಂಬುದು ತನಗೆ ತಿಳಿದಿಲ್ಲ ಎಂದು ಆರೋಪಿಯು ವಿಚಾರಣೆ ವೇಳೆ ಹೇಳಿಕೊಂಡಿದ್ದಾನೆ. ಜತೆಗೆ ಬ್ಯಾಗನ್ನು ಬೆಂಗಳೂರಿಗೆ ಕೊಂಡೊಯ್ಯಲು ತನಗೆ ಅದನ್ನು ಕೊಟ್ಟವರ ಸೂಚನೆ ಇತ್ತು ಎಂದೂ ಹೇಳಿದ್ದಾನೆ. ಆದರೆ, ಆತನ ಹೇಳಿಕೆಗಳ ಬಗ್ಗೆ ತನಿಖಾಧಿಕಾರಿಗಳು ತೃಪ್ತಿಹೊಂದಿಲ್ಲ. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:58 pm, Tue, 22 August 23

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us