AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಮಧ್ಯಾಹ್ನ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ: ಕೆಲ ನಿಯಮ ಸಡಿಲಿಕೆ ಸಾಧ್ಯತೆ

ವೀಡಿಯೋ ಕಾನ್ಫರೆನ್ಸ್ ಮೂಲಕ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗುತ್ತಾರೆ. ಈಗಾಗಲೇ ಸರ್ಕಾರ ವೀಕೆಂಡ್ ಕರ್ಫ್ಯೂ ರದ್ದು ಮಾಡಿದೆ.

ಇಂದು ಮಧ್ಯಾಹ್ನ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ: ಕೆಲ ನಿಯಮ ಸಡಿಲಿಕೆ ಸಾಧ್ಯತೆ
ಸಿಎಂ ಬಸವರಾಜ ಬೊಮ್ಮಾಯಿ
TV9 Web
| Updated By: sandhya thejappa|

Updated on: Jan 29, 2022 | 8:49 AM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ (Coronavirus) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಸೋಂಕಿತ ತೀವ್ರತೆ ಕಡಿಮೆ ಇದೆ. ಹೀಗಾಗಿ ಸದ್ಯ ಕಠಿಣ ನಿಯಮಗಳನ್ನ ಸರ್ಕಾರ ಜಾರಿಗೆ ತಂದಿಲ್ಲ. ಕೇವಲ ನೈಟ್ ಕರ್ಫ್ಯೂ (Night Curfew) ಮತ್ತು 50:50 ರೂಲ್ಸ್ (50:50 Rules) ಜಾರಿಯಲ್ಲಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಚರ್ಚೆ ನಡೆಸಲಿದ್ದಾರೆ. ಇಂದು (ಜ.29) ಮಧ್ಯಾಹ್ನ ಒಂದು ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಆರೋಗ್ಯ ಸಚಿವ ಕಂದಾಯ ಸಚಿವ, ಗೃಹ ಸಚಿವ, ಉನ್ನತ ಶಿಕ್ಷಣ ಸಚಿವ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ, ಇಲಾಖಾ ಕಾರ್ಯದರ್ಶಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ, ಬಿಬಿಎಂಪಿ ಆಯುಕ್ತ, ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಲಿದ್ದಾರೆ.

ವೀಡಿಯೋ ಕಾನ್ಫರೆನ್ಸ್ ಮೂಲಕ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗುತ್ತಾರೆ. ಈಗಾಗಲೇ ಸರ್ಕಾರ ವೀಕೆಂಡ್ ಕರ್ಫ್ಯೂ ರದ್ದು ಮಾಡಿದೆ. ಇವತ್ತಿನ ಸಭೆಯಲ್ಲಿ 50-50 ರೂಲ್ಸ್ ಕೈ ಬಿಡುವ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ. ಸೋಂಕಿನ ಪ್ರಮಾಣ ಹೆಚ್ಚಿದ್ದರೂ, ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆ ತೀರಾ ಕಡಿಮೆಯಿದೆ. ಇದರಿಂದ ಜಾರಿಯಾಗಿರುವ ನಿಯಮಗಳನ್ನ ತೆರವುಗೊಳಿಸುವ ಸಾಧ್ಯತೆ ಹೆಚ್ಚಿದೆ.

ಹೋಟೆಲ್, ಥಿಯೇಟರ್, ರೆಸ್ಟೋರೆಂಟ್, ಜಿಮ್, ಸ್ವಿಮ್ಮಿಂಗ್ ಫೂಲ್ಗಳಿಗೆ 50-50 ರೂಲ್ಸ್ ಸಡಿಲಿಕೆ ಮಾಡಬಹುದು. ಹೋಟೆಲ್ಗಳು ಫೆಬ್ರವರಿಯಿಂದ ಯಥಾಸ್ಥಿತಿ ಕಾರ್ಯ ನಡೆಯಬಹುದು, ಥಿಯೇಟರ್ಗಳಲ್ಲಿ ಶೇ.100 ಭರ್ತಿಗೆ ಅವಕಾಶ ನೀಡಬಹುದು. ಅಲ್ಲದೇ ವ್ಯಾಕ್ಸಿನ್ ಇದ್ದವರಿಗಷ್ಟೇ ಪ್ರವೇಶ ನೀಡುವಂತೆ ಷರತ್ತು ವಿಧಿಸುವ ಸಾಧ್ಯತೆಯಿದೆ.

ಪ್ರತಿಭಟನೆ, ಮೆರವಣಿಗೆಗೆ ನಿರ್ಬಂಧ ಮುಂದುವರಿಕೆ ಮಾಡುವ ಸಾಧ್ಯತೆಯಿದೆ. ಸಭೆ, ಸಮಾರಂಭಗಳಲ್ಲಿ ಜನ ಸಂಖ್ಯೆ ನಿಗದಿ ಮಾಡಬಹುದು. 1 ರಿಂದ 9ನೇ ತರಗತಿಯವರೆಗೂ ಶಾಲೆ ಓಪನ್ಗೆ ಅನುಮತಿ ಕೊಡಬಹುದು. ಕೊರೊನಾ ಮಾರ್ಗಸೂಚಿಗಳೊಂದಿಗೆ ನರ್ಸರಿಯಿಂದ ಹೈಸ್ಕೂಲ್ ತೆರೆಯಲು ಗ್ರೀನ್ ಸಿಗ್ನಲ್ ನೀಡಬಹುದು. ತಜ್ಞರ ಸಲಹೆ ಬೆನ್ನಲ್ಲೇ ನಗರದಲ್ಲಿ ಶಾಲೆ ಬಾಗಿಲು ತೆರೆಯಲು ನಿರ್ಧರಿಸಲಾಗಿದೆ. ಸಿಎಂ ಸಭೆ ಬಳಿಕ ಶಿಕ್ಷಣ ಸಚಿವರು ಈ ಕುರಿತು ಅಧಿಕೃತ ಆದೇಶ ಹೊರಡಿಸಬಹುದು.

ಇದನ್ನೂ ಓದಿ

Karnataka Dam Water Level: ಮತ್ತೆ ಮಳೆಯಿಂದ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

‘ನೀನೇ ನನ್ನ ಹೆಂಡ್ತಿ’ ಎಂದು ನಂಬಿಸಿ, ನಟಿ ಮೇಲೆ ಅತ್ಯಾಚಾರ ಮಾಡಿದ ಆರೋಪ; ಕನ್ನಡ ಸಿನಿಮಾ ನಿರ್ಮಾಪಕನ​ ಬಂಧನ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ