ತಾಯಿಯನ್ನ ಕೊಂದು ಆತ್ಮಹತ್ಯೆಗೆ ಶರಣಾದ ಮಗ..!

ಕುಡಿದ ಮತ್ತಿನಲ್ಲಿ ತಾಯಿಯನ್ನು ಕೊಂದು ಬಳಿಕ ಮಗ ಸಹ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹೊಟ್ಟೆ ಪಾಡಿಗಾಗಿ ದೂರದ ಚಿತ್ರದುರ್ಗದಿಂದ ಬಂದಿದ್ದ ತಾಯಿ ಮಗ ಆನೇಕಲ್​ ಬಳಿಯ ಚಂದಾಪುರದಲ್ಲಿ ನೆಲೆಸಿದ್ದರು. ಆದ್ರೆ, ಮಗ ಕುಡಿದುಬಂದು ನಿತ್ಯ ಗಲಾಟೆ ಮಾಡುತ್ತಿದ್ದ. ಅದರಂತೆ ನಿನ್ನೆ ಕುಡಿದುಬಂದು ಮತ್ತೆ ಜಗಳ ಮಾಡಿದ್ದಾನೆ. ಈ ವೇಳೆ ಗಲಾಟೆ ತಾರಕಕ್ಕೇರಿದ್ದು, ಮೊಬೈಲ್​ ಚಾರ್ಜರ್​ ವೈರ್​ನಿಂದ ತಾಯಿ ಕುತ್ತಿಗೆ ಹಿಸುಕು ಕೊಲೆ ಮಾಡಿದ್ದಾನೆ.

ತಾಯಿಯನ್ನ ಕೊಂದು ಆತ್ಮಹತ್ಯೆಗೆ ಶರಣಾದ ಮಗ..!
ಪ್ರಾತಿನಿಧಿಕ ಚಿತ್ರ
Image Credit source: CNBCTV18.COM
Edited By:

Updated on: Jan 05, 2025 | 11:38 AM

ಅನೇಕಲ್, (ಜನವರಿ 05): ತಾಯಿಯನ್ನು ಕೊಂದು ಬಳಿಕ ಮಗನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಸೂರ್ಯಸಿಟಿ ಸಮೀಪದ ಹಳೆ ಚಂದಾಪುರದಲ್ಲಿ ನಡೆದಿದೆ. ಮಹಾಲಕ್ಷ್ಮಿ (41) ಕೊಲೆಯಾದ ಮಹಿಳೆ. ರಮೇಶ್ (21) ತಾಯಿಯನ್ನ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಮಗ. ಚಿತ್ರದುರ್ಗ ಮೂಲದ ಚಳ್ಳಕೆರೆಯ ಚಿಕ್ಕಹಳ್ಳಿ ಕುಟುಂಬ, ಕಳೆದ ಕೆಲ ವರ್ಷಗಳ ಹಿಂದೆ ಕೆಲಸ ಅರಸಿಕೊಂಡು ಬಂದಿದ್ದರು. ಆದ್ರೆ, ಮಗ ಕುಡಿದುಬಂದು ತಾಯಿ ಜೊತೆ ಜಗಳ ಮಾಡುತ್ತಿದ್ದ. ಅದರಂತೆ ನಿನ್ನೆ(ಜನವರಿ 04) ಗಲಾಟೆ ವಿಕೋಪಕ್ಕೆ ತಿರುಗಿದ್ದು, ಮೊಬೈಲ್​ ಚಾರ್ಜರ್​ ವೈರ್​ನಿಂದ ತಾಯಿ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದಾನೆ.

ಕುಟುಂಬ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಮಗ ಕುಡಿದು ಬಂದು ಆಗಾಗ್ಗೆ ಗಲಾಟೆ ಮಾಡುತ್ತಿದ್ದ. ನಿನ್ನೆ ರಾತ್ರಿಯೂ ಕುಡಿದು ಬಂದು ತಾಯಿ ಮಹಾಲಕ್ಷ್ಮಿ ಜೊತೆ ಗಲಾಟೆ ಮಾಡಿದ್ದ. ಗಲಾಟೆ ವಿಕೋಪಕ್ಕೆ ತಿರುಗಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಮೊಬೈಲ್ ಚಾರ್ಜಿಂಗ್ ವೈರ್‌ನಿಂದ ಕುತ್ತಿಗೆಗೆ ಬಿಗಿದು ತಾಯಿ ಹತ್ಯೆ ಮಾಡಿದ್ದಾನೆ. ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಸೂರ್ಯನಗರ ಪೊಲೀಸರ ಮತ್ತು ಬೆಂಗಳೂರು ಗ್ರಾಮಾಂತರ ಎಎಸ್‌ಪಿ ನಾಗೇಶ್ ಕುಮಾರ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತ ದೇಹಗಳನ್ನು ಅತ್ತಿಬೆಲೆ ಆಕ್ಸ್‌ಫರ್ಡ್ ಆಸ್ಪತ್ರೆಗೆ ರವಾನಿಸಲಾಗಿದೆ.