ಬೆಂಗಳೂರು: ರಾಜ್ಯದಲ್ಲಿ 4 ಕೋಟಿ ಡೋಸ್ ಕೊವಿಡ್ ಲಸಿಕೆ ನೀಡಿದ್ದೇವೆ. ಡಿಸೆಂಬರ್ ಅಂತ್ಯದ ವೇಳೆ 2 ಡೋಸ್ ನೀಡುವ ಗುರಿ ಇದೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಆಗಸ್ಟ್ 27ರ ವರೆಗೆ ಒಟ್ಟು 4 ಕೋಟಿ ಡೋಸ್ ಕೊವಿಡ್ ಲಸಿಕೆ ನೀಡಲಾಗಿದೆ. ಡಿಸೆಂಬರ್ ಅಂತ್ಯದ ವೇಳೆ 2 ಡೋಸ್ ನೀಡುವ ಗುರಿ ಇದೆ. ಗ್ರಾಮೀಣ ಭಾಗದಲ್ಲಿ ಲಸಿಕೆ ಹಾಕಿಸಿಕೊಳ್ಳಲು ಜನ ಹಿಂದೇಟು ಹಾಕುತ್ತಿದ್ದಾರೆ. ಕಲಬುರಗಿ, ಯಾದಗಿರಿ ಜಿಲ್ಲೆಯಲ್ಲಿ ಲಸಿಕೆ ನೀಡಿಕೆ ಕಡಿಮೆಯಾಗಿದೆ. ಕೊಳಗೇರಿ ನಿವಾಸಿಗಳಿಗೆ ವಿಶೇಷ ಲಸಿಕಾ ಮೇಳ ಪ್ರತಿನಿತ್ಯ ಹಮ್ಮಿಕೊಳ್ಳುವ ಕಾರ್ಯತಂತ್ರ ರೂಪಿಸಿದ್ದೇವೆ. ಕೇರಳ ಗಡಿ ಭಾಗದ 20 ಕಿ.ಮೀ. ವ್ಯಾಪ್ತಿಯಲ್ಲಿರುವ ಜನರಿಗೆ ಮೊದಲ ಪ್ರಾಶಸ್ತ್ಯದ ಲಸಿಕೆ ನೀಡುತ್ತೇವೆ. ಡಿಸೆಂಬರ್ ಅಂತ್ಯದ ವೇಳೆ 2 ಡೋಸ್ ಪೂರ್ಣಗೊಳಿಸುವ ಗುರಿ ಹೊಂದಿದ್ದೇವೆ. ಮಕ್ಕಳಿಗೆ ಲಸಿಕೆ ನೀಡಲು ಅನುಮತಿ ಸಿಕ್ಕ ಬಳಿಕ ಅವರಿಗೂ ಲಸಿಕೆ ನೀಡ್ತೇವೆ. ಮೊದಲ, 2ನೇ ಡೋಸ್ ಮಧ್ಯೆ ಸ್ವಲ್ಪ ತಾಂತ್ರಿಕ ಸಮಸ್ಯೆ ಇದೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ರು.
ಕೇರಳದಲ್ಲಿ ದಿನಕ್ಕೆ 20 ಸಾವಿರ ಕೊರೊನಾ ಕೇಸ್ ಬರುತ್ತಿದೆ. ಆದರೆ ಬೆಂಗಳೂರಿನಲ್ಲಿ 400ರಿಂದ 500 ಕೇಸ್ ಸಹ ಬರ್ತಿಲ್ಲ. ಬಿಬಿಎಂಪಿ ಸೂಕ್ತ ಕ್ರಮ ಕೈಗೊಂಡಿದ್ದರಿಂದ ನಿಯಂತ್ರಣವಾಗಿದೆ ಎಂದು ಬಿಬಿಎಂಪಿ ಕಾರ್ಯಕ್ಕೆ ಸುಧಾಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜನರು ಸಹಕಾರ ಕೊಟ್ಟಿದ್ದರಿಂದ ಇದು ಸಾಧ್ಯವಾಗಿದೆ. ಕೆಲವು ರಾಜ್ಯಗಳಲ್ಲಿ ಕೊರೊನಾ 3ನೇ ಅಲೆ ಆರಂಭವಾಗಿದೆ. ನಮ್ಮ ರಾಜ್ಯದಲ್ಲಿ 3ನೇ ಅಲೆಯಿಂದ ಸಮಸ್ಯೆಯಾಗಬಾರದು. ಹೀಗಾಗಿ ನಾವು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಜನರು ಸಹಕಾರ ಕೊಟ್ಟಾಗ ಮಾತ್ರ ಇದು ಸಾಧ್ಯವಾಗುತ್ತದೆ ಎಂದರು.
ಇದನ್ನೂ ಓದಿ: ಕೊರೊನಾ ಮೂರನೇ ಅಲೆ ಎದುರಿಸಲು ನಡೆಸಿರುವ ಸಿದ್ಧತೆ ಬಗ್ಗೆ ಮಾಹಿತಿ ನೀಡಿದ ಡಾ ಕೆ ಸುಧಾಕರ್