AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲೋ ಬ್ಲಾಕ್​ ತುಂಬಿದ್ದ ಟೆಂಪೋ ಬೈಕ್​ ಮೇಲೆ ಪಲ್ಟಿ; ದಂಪತಿ ಸೇರಿ ಮೂವರು ಸ್ಥಳದಲ್ಲೇ ಸಾವು

ಹಾಲೋ ಬ್ಲಾಕ್ ತುಂಬಿದ್ದ ಟೆಂಪೋ ಬೈಕ್ ಮೇಲೆ ಪಲ್ಟಿಯಾಗಿದೆ. ಈ ಪರಿಣಾಮ ಬೈಕ್​​ನಲ್ಲಿ ತೆರಳುತ್ತಿದ್ದ ಮಾದೇಶ್ ಹಾಗೂ ಜಯಲಕ್ಷ್ಮೀ ದಂಪತಿ ಮತ್ತು ಟೆಂಪೋದಲ್ಲಿದ್ದ ಕೂಲಿ ಕಾರ್ಮಿಕ ಗೋವಿಂದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಂಚೆಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಲೋ ಬ್ಲಾಕ್​ ತುಂಬಿದ್ದ ಟೆಂಪೋ ಬೈಕ್​ ಮೇಲೆ ಪಲ್ಟಿ; ದಂಪತಿ ಸೇರಿ ಮೂವರು ಸ್ಥಳದಲ್ಲೇ ಸಾವು
ಅಪಘಾತ ನಡೆದ ಸ್ಥಳ
ರಾಮು, ಆನೇಕಲ್​
| Edited By: |

Updated on: Sep 26, 2024 | 2:02 PM

Share

ಬೆಂಗಳೂರು, ಸೆ.26: ಹಾಲೋ ಬ್ಲಾಕ್​ ತುಂಬಿದ್ದ ಟೆಂಪೋ ಪಲ್ಟಿಯಾಗಿ ಮೂವರು ಮೃತಪಟ್ಟ (Death) ಘಟನೆ ರಾಜ್ಯ ಗಡಿಭಾಗ ತಮಿಳುನಾಡಿನ ಡೆಂಕಣಿಕೋಟೆ ಬಳಿಯ ಅಂಚೆಟ್ಟಿ ರಸ್ತೆಯಲ್ಲಿ ನಡೆದಿದೆ (Accident). ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯಗಳಾಗಿವೆ. ಹಾಲೋ ಬ್ಲಾಕ್ ತುಂಬಿದ್ದ ಟೆಂಪೋ ಬೈಕ್ ಮೇಲೆ ಪಲ್ಟಿಯಾಗಿದೆ. ಈ ಪರಿಣಾಮ ಬೈಕ್​​ನಲ್ಲಿ ತೆರಳುತ್ತಿದ್ದ ಮಾದೇಶ್ ಹಾಗೂ ಜಯಲಕ್ಷ್ಮೀ ದಂಪತಿ ಮತ್ತು ಟೆಂಪೋದಲ್ಲಿದ್ದ ಕೂಲಿ ಕಾರ್ಮಿಕ ಗೋವಿಂದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಸ್ತೆಯ ತಿರುವಿನಲ್ಲಿ ಹಾಲೋಬ್ಲಾಕ್ ತುಂಬಿದ್ದ ಟೆಂಪೋ ಪಲ್ಟಿಯಾಗಿದೆ. ಡೆಂಕಣಿಕೋಟೆ ಸರ್ಕಾರಿ ಆಸ್ಪತ್ರೆಗೆ ಮೃತದೇಹಗಳನ್ನು ರವಾನಿಸಲಾಗಿದ್ದು ಗಾಯಾಳುಗೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಂಚೆಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಳುಮೆ ಮಾಡುವಾಗ ಹೆಜ್ಜೇನು ದಾಳಿಯಾಗಿ ರೈತ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಗೌಡಯ್ಯನಪಾಳ್ಯದಲ್ಲಿ ಉಳುಮೆ ಮಾಡುವಾಗ ಹೆಜ್ಜೇನು ದಾಳಿಯಾಗಿ ರೈತ ಮೃತಪಟ್ಟ ಘಟನೆ ನಡೆದಿದೆ. ರಾಜಣ್ಣ(48) ಮೃತ ದುರ್ದೈವಿ. ಹೊಲ ಉಳುಮೆ ಮಾಡುವ ವೇಳೆ ರೈತನ ಮೇಲೆ ಹೆಜ್ಜೇನು ದಾಳಿ ಮಾಡಿತ್ತು. ನೂರಾರು ಹೆಜ್ಜೇನು ಹುಳುಗಳು ಕಡಿದು ರೈತ ಅಸ್ವಸ್ಥನಾಗಿ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು ಟ್ರಾಫಿಕ್ ಜಾಮ್ ಬಿಸಿ ರೈಲಿಗೂ ತಟ್ಟಿತಾ? ಪೊಲೀಸರು ಹೇಳುವುದೇ ಬೇರೆ!

ಗಾಬರಿಯಲ್ಲಿ ಓಡಿ ಬರುವಾಗ ಕೊಳ್ಳದಲ್ಲಿ ಬಿದ್ದು ಮಹಿಳೆ ಸಾವು

ಮನೆಗೆ ಕನ್ನ ಹಾಕಲು ಕಳ್ಳರು ಬಂದಿದ್ದು ಅವರಿಂದ ತಪ್ಪಿಸಿಕೊಳ್ಳಲು ಹೋಗಿ ಕೊಳ್ಳದಲ್ಲಿ ಬಿದ್ದು ಮಹಿಳೆ ಮೃತಪಟ್ಟ ಘಟನೆ ಬೆಳಗಾವಿ ತಾಲೂಕಿನ ಶಿಂದೋಳ್ಳಿ ಗ್ರಾಮದಲ್ಲಿ ನಡೆದಿದೆ. ಭರಮಕ್ಕಾ ಪೂಜಾರಿ ಕೊಳ್ಳದಲ್ಲಿ ಕಾಲು ಜಾರಿ ಬಿದ್ದ ಮಹಿಳೆ. ನಿನ್ನೆ ಮಧ್ಯೆ ರಾತ್ರಿ ಕಳ್ಳರ ಗ್ಯಾಂಗೊಂದು ಮನೆಗೆ ಕನ್ನ ಹಾಕಲು ಭರಮಕ್ಕಾ ಅವರ ಮನೆಗೆ ಎಂಟ್ರಿಯಾಗಿತ್ತು. ಇದನ್ನ ಗಮನಿಸಿ ಮನೆಯ ಹಿತ್ತಲು ಬಾಗಿಲಿನಿಂದ ಭರಮಕ್ಕಾ ಹೊರ ಬಂದಿದ್ದು ಗಾಬರಿಯಲ್ಲಿ ಓಡಿ ಬರುವಾಗ ಕೊಳ್ಳದಲ್ಲಿ ಬಿದ್ದು ಮೃತಪಟ್ಟಿದ್ದಾರೆ. ಸ್ಥಳೀಯ ನಿವಾಸಿಗಳು ಮೃತದೇಹ ಹೊರ ತೆಗೆದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮಹಿಳೆ ಮೃತದೇಹವನ್ನು ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ