AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಯ್ತಾ ಮೂರು ವರ್ಷದ ಮಗು? ಅನುಮಾಸ್ಪದ ಸಾವಿನ ಬಗ್ಗೆ ದೂರು ದಾಖಲು

ಬೆಂಗಳೂರಿನಲ್ಲಿ ಜ್ವರದಿಂದ ಬಳಲುತ್ತಿದ್ದ 3 ವರ್ಷದ ಮಗು ವೈದ್ಯರ ನಿರ್ಲಕ್ಷ್ಯಕ್ಕೆ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಮಗುವಿನ ಪೋಷಕರು ಆಸ್ಪತ್ರೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಯ್ತಾ ಮೂರು ವರ್ಷದ ಮಗು? ಅನುಮಾಸ್ಪದ ಸಾವಿನ ಬಗ್ಗೆ ದೂರು ದಾಖಲು
ಪ್ರಾತಿನಿಧಿಕ ಚಿತ್ರ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Apr 27, 2023 | 7:00 AM

Share

ಬೆಂಗಳೂರು: ನಗರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ಜ್ವರದಿಂದ ಬಳಲುತ್ತಿದ್ದ 3 ವರ್ಷದ ಮಗುವನ್ನ ನಿನ್ನೆ(ಏ.26) ಮಧ್ಯಾಹ್ನ ಯಲಹಂಕದ ಶುಶ್ರೂಷಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಸುಮಾರು ಒಂದು ಗಂಟೆ ಕಾಲ ಚಿಕಿತ್ಸೆ ನೀಡದೆ ವೈದ್ಯರು ಕಾಯಿಸಿದ್ದಾರೆ. ನಂತರ ಅಲ್ಲಿಂದ ಹೆಬ್ಬಾಳದ ಬ್ಯಾಪ್ಟಿಸ್ಟ್​ ಆಸ್ಪತ್ರೆಗೆ ಕಳಿಸಿದ್ದು, ಸಂಜೆ ಸುಮಾರಿಗೆ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ರಾತ್ರಿ 9 ಗಂಟೆ ಬಳಿಕ ಮಗು ಮೃತಪಟ್ಟಿದೆ ಎಂದು ವೈದ್ಯರು ಹೇಳಿದ್ದಾರೆ.

ಇನ್ನು ಮಗುವಿನ ಸಾವಿನ ವಿಚಾರ ಪೋಷಕರಿಗೆ ತಿಳಿಯುತ್ತಿದ್ದಂತೆ ಆಕ್ರೋಶ ವ್ಯಕ್ತಪಡಿಸಿದ್ದು, ಮಗು ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದಾರೆ. ಮಗುವಿನ ಅನುಮಾನಾಸ್ಪದ ಸಾವಿನ ಬಗ್ಗೆ ದೂರು ನೀಡಲು ನಿರ್ಧರಿಸಿದ್ದು, ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಮಗು ಅಳುತ್ತಿರುವುದಕ್ಕೆ ವಿಮಾನದಲ್ಲಿನ ಪ್ರಯಾಣಿಕ ಸಿಡಿಮಿಡಿ; ಕೋಪಗೊಂಡು ವ್ಯಕ್ತಿ ಮಾಡಿದ್ದೇನು ಗೊತ್ತಾ?

ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ ಮಗು ಸಾವು: ವೈದ್ಯರ ವಿರುದ್ಧ ಪೋಷಕರ ಆಕ್ರೋಶ

ಹೊಸಕೋಟೆ (ಬೆಂಗಳೂರು ಗ್ರಾಮಾಂತರ): ಇಂತಹ ಘಟನೆಗಳು ಇತ್ತೀಚೆಗೆ ಹೆಚ್ಚಾಗಿದ್ದು ಕಳೆದ ಮಾರ್ಚ್​ 9 ರಂದು ಹೊಟ್ಟೆ ನೋವು ಎಂದು ಹೊಸಕೋಟೆ ಗ್ರಾಮದ ಕಂಬಳಿಪುರ ಗ್ರಾಮದ ವೇಣುಗೋಪಾಲ ಮತ್ತು ಪ್ರಿಯಾಂಕಾ ದಂಪತಿಯ 5 ತಿಂಗಳ ಮಗುವನ್ನ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಬಳಿಕ  ಮಗು ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿತ್ತು. ಇದಕ್ಕೆ ವೈದ್ಯರ ನಿರ್ಲಕ್ಷ್ಯಕ್ಕೆ ಕಾರಣ ಎಂದು ಪೋಷಕರು ಆರೋಪಿಸಿದ್ದರು. ಹೌದು ಮಗುವಿಗೆ ಹೊಟ್ಟೆ ನೋವು ಹಾಗೂ ವಾಂತಿ ಕಾಣಿಸಿಕೊಂಡಿದ್ದು,ನಂತರ ಹೊಸಕೋಟೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಒಂದು ವಾರದಿಂದ ಚಿಕಿತ್ಸೆ ನೀಡಲಾಗುತ್ತಿದ್ದು, ಆದರೆ ಮಗು ಮಾತ್ರ ಗುಣಮುಖವಾಗಿರಲಿಲ್ಲ ಎಂದು ಪೋಷಕರು ಆರೋಪಿಸಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ