Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮಾರಾಟಕ್ಕಿಟ್ಟಿದ್ದ ಗಣಪತಿ ಮೂರ್ತಿಗೆ ಡಿಕ್ಕಿ ಹೊಡೆದ ಟಿಪ್ಪರ್; ತಪ್ಪಿದ ಅನಾಹುತ

ನಿಂತಿದ್ದ ಟಿಪ್ಪರ್ ಲಾರಿ ಚಲಿಸಿ ಒಂದು ಲೈಟ್ ಕಂಬ ಹಾಗೂ ರಸ್ತೆ ಬದಿ ಮಾರಾಟಕ್ಕೆ ಇಟ್ಟಿದ್ದ ಗಣಪತಿ ಮೂರ್ತಿಗೆ ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್(Wilson Garden)​ನಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ವಾಹನ ಓಡಾಟ ಇಲ್ಲದಿರುವುದರಿಂದ ಅನಾಹುತ ತಪ್ಪಿದೆ.

ಬೆಂಗಳೂರಿನಲ್ಲಿ ಮಾರಾಟಕ್ಕಿಟ್ಟಿದ್ದ ಗಣಪತಿ ಮೂರ್ತಿಗೆ ಡಿಕ್ಕಿ ಹೊಡೆದ ಟಿಪ್ಪರ್; ತಪ್ಪಿದ ಅನಾಹುತ
ಬೆಂಗಳೂರಿನಲ್ಲಿ ಮಾರಾಟಕ್ಕಿಟ್ಟಿದ್ದ ಗಣಪತಿ ಮೂರ್ತಿಗೆ ಡಿಕ್ಕಿ ಹೊಡೆದ ಟಿಪ್ಪರ್
Follow us
ರಾಚಪ್ಪಾಜಿ ನಾಯ್ಕ್
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 29, 2024 | 4:20 PM

ಬೆಂಗಳೂರು, ಸೆ.29: ನಗರದ ವಿಲ್ಸನ್ ಗಾರ್ಡನ್(Wilson Garden)​ನಲ್ಲಿ ನಿಂತಿದ್ದ ಟಿಪ್ಪರ್ ಲಾರಿ ಚಲಿಸಿ ಒಂದು ಲೈಟ್ ಕಂಬ ಹಾಗೂ ರಸ್ತೆ ಬದಿ ಮಾರಾಟಕ್ಕೆ ಇಟ್ಟಿದ್ದ ಗಣಪತಿ ಮೂರ್ತಿಗೆ ಡಿಕ್ಕಿ ಹೊಡೆದಿದೆ. ಹೌದು, ರಾತ್ರಿ 1.30 ಸುಮಾರಿಗೆ ಟಿಪ್ಪರ್ ಲಾರಿ ಚಾಲಕ, ಜಲ್ಲಿ ಕಲ್ಲು ಅನ್ ಲೋಡ್ ಮಾಡಲು ಟಿಪ್ಪರ್ ನಿಲ್ಲಿಸಿ ಜಲ್ಲಿ ಕಲ್ಲಿನ ಫೋಟೋ ತೆಗೆದುಕೊಳ್ಳುತ್ತಿದ್ದ , ಈ ವೇಳೆ ಬ್ರೇಕ್ ಫೇಲ್ ಆಗಿ ಟಿಪ್ಪರ್ ಏಕಾಏಕಿ ಚಲಿಸಿದ್ದು, ರಸ್ತೆ ದಾಟಿ ಎದುರುಗಡೆಗೆ ಹೋಗಿ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ವಾಹನ ಓಡಾಟ ಇಲ್ಲದಿರುವುದರಿಂದ ಅನಾಹುತ ತಪ್ಪಿದೆ.

ಇದೀಗ  ಲೈಟ್ ಕಂಬವನ್ನು ಬೆಸ್ಕಾಂ ಸಿಬ್ಬಂದಿ ತೆರವು ಗೊಳಿಸಿದ್ದು, ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಘಟನೆ ಕುರಿತು ಮಾತನಾಡಿದ ಗಣೇಶ ವ್ಯಾಪಾರಸ್ಥ ಚೇತನ್ ಕುಮಾರ್, ‘ ಇದು ರಾತ್ರಿ 1 ಗಂಟೆಗೆ ನಡೆದಿದೆ. ಚಾಲಕ ಅದಾಗೆ ಬಂದುಬಿಡ್ತು ಎನ್ನುತ್ತಿದ್ದಾರೆ. ಗಣೇಶ ಮೂರ್ತಿಗೆ ಡ್ಯಾಮೆಜ್ ಆಗಿದೆ. ಈ ಗಣೇಶ ಮೂರ್ತಿಗೆ 75 ಸಾವಿರ ರೂಪಾಯಿ ಕೊಟ್ಟು ಬುಕಿಂಗ್ ಕೂಡ ಆಗಿದೆ. ಇವತ್ತು ಸಂಜೆಗೆ ತಗೊಂಡು ಹೋಗುತ್ತಿದ್ದರು. ಅಷ್ಟರಲ್ಲಿ ಮಧ್ಯರಾತ್ರಿ ಈ ರೀತಿಯಾಗಿದೆ. ಈ ಕುರಿತು ದೂರು ದಾಖಲು ಮಾಡಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ:ಬಾಗಲಕೋಟೆ: ನಿದ್ದೆ ಮಂಪರಿನಿಂದ ಕ್ಯಾಂಟರ್​ಗೆ ಕಾರು ಡಿಕ್ಕಿ, ಸ್ಥಳದಲ್ಲೇ ನಾಲ್ವರ ಸಾವು

ಪಂಪ್​ಸೆಟ್​ ದುರಸ್ತಿ ವೇಳೆ ವಿದ್ಯುತ್​ ಪ್ರವಹಿಸಿ ವ್ಯಕ್ತಿ ದುರ್ಮರಣ

ರಾಯಚೂರು: ಜಿಲ್ಲೆಯ ಲಿಂಗಸಗೂರು ತಾಲೂಕಿನ ಮರಳಿ ಗ್ರಾಮದಲ್ಲಿ ಪಂಪ್ ಸೆಟ್ ದುರಸ್ತಿ ವೇಳೆ ಕರೆಂಟ್ ಶಾಕ್ ಹೊಡೆದು 33 ವರ್ಷದ ನಾಗಲಾಪುರ ಗ್ರಾಮದ ನಿವಾಸಿ ಶಿವು ಎಂಬಾತ ಸಾವನ್ನಪ್ಪಿದ್ದಾನೆ. ಟ್ರಾಕ್ಟರ್​ನ ಹೈಡ್ರಾಲಿಕ್ ಡಿಪ್ಪರ್ ಮೂಲಕ ಪಂಪ್ ಸೆಟ್ ದುರಸ್ತಿ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್​ಗೆ ಅಳವಡಿಸಲಾಗಿದ್ದ ಡಿಪ್ಪರ್ ಮೈನ್ ಲೈನ್ ತಾಗಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ