ದ್ವಿಚಕ್ರ ವಾಹನದಲ್ಲಿ ಹೋಗ್ತಿದ್ದ ರೈತನ ಮೇಲೆ ಹರಿದ ಟಿಪ್ಪರ್; ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಅವರು ದ್ವಿಚಕ್ರವಾಹನದಲ್ಲಿ ರಸ್ತೆ ಬದಿಯಲ್ಲಿ ಹೋಗುತ್ತಿದ್ದರು. ಅದೇ ರಸ್ತೆಯಲ್ಲಿ ಅತಿ ವೇಗವಾಗಿ ಬಂದ ಟಿಪ್ಪರ್ ಲಾರಿ, ಬೈಕ್ ಸವಾರನ ಕಾಲಿನ ಮೇಲೆ ಹರಿದಿದ್ದು ಟಿಪ್ಪರ್ ಲಾರಿಯ ಕೆಳಗೆ ಸಿಲುಕಿದ ಸವಾರನ ಎರಡು ಕಾಲುಗಳು ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Follow us
ರಾಮು, ಆನೇಕಲ್​
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 13, 2023 | 9:03 PM

ಬೆಂಗಳೂರು, ಅ.13: ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ರೈತನ ಮೇಲೆ ಟಿಪ್ಪರ್​ವೊಂದು ಹರಿದ ಘಟನೆ ಬೆಂಗಳೂರು (Bengaluru) ನಗರದ ಸರ್ಜಾಪುರ ಪಟ್ಟಣದಲ್ಲಿ ಅರಳಿಕಟ್ಟೆ ಬಳಿ ನಡೆದಿದೆ. ಹೌದು, ರಸ್ತೆಯ ಬದಿಯಲ್ಲಿ ಟಿವಿಎಸ್ ಬೈಕಿನಲ್ಲಿ ಹೋಗುತ್ತಿದ್ದ ರೈತನ ಮೇಲೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಆಯಾತಪ್ಪಿ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಆತನ ಕಾಲಿನ ಮೇಲೆ ಲಾರಿಯ ಚಕ್ರ ಹರಿದಿದೆ. ಈ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮಾರಾದಲ್ಲಿ ಸೆರೆಯಾಗಿದೆ.

ತಮಿಳುನಾಡಿನ ಕಗ್ಗನೂರು ಬಳಿಯ ಶಾವಕನಹಳ್ಳಿ ನಿವಾಸಿ ನಂಜುಂಡ ರೆಡ್ಡಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತಮ್ಮ ಹೊಲಕ್ಕೆ ಗೊಬ್ಬರ ಖರೀದಿ‌ ಮಾಡಿ ವಾಪಾಸ್ ಮನೆಯ ಕಡೆಗೆ ಹೋಗುವಾಗ ಅಜಾಗರೂಕತೆಯಿಂದ ಅತಿವೇಗವಾಗಿ ಬಂದ ಟಿಪ್ಪರ್ ಲಾರಿ, ಬೈಕ್ ಸವಾರನಿಗೆ ಗುದ್ದಿದೆ. ಇನ್ನು ಈ ವೇಳೆ ಎರಡು ಕಾಲಿಗೆ ತೀವ್ರ ಪೆಟ್ಟಾಗಿದ್ದ ನಂಜುಂಡ ರೆಡ್ಡಿ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ:ಕಾಫಿನಾಡಲ್ಲಿ ಸರಣಿ ಅಪಘಾತ; ಕಾರು, ಟಿಪ್ಪರ್​, ಬೈಕ್​ ನಡುವೆ ಡಿಕ್ಕಿಯಾಗಿ ದಂಪತಿ ಸಾವು, 1 ವರ್ಷದ ಮಗುವಿಗೆ ಗಾಯ

ಇನ್ನು ಟಿಪ್ಪರ್ ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದು, ಸುಮಾರು ಒಂದು ಗಂಟೆಗಳ ಕಾಲ ಸ್ಥಳೀಯರು ರಸ್ತೆಯಲ್ಲಿ ಜಮಾಯಿಸಿ ಟಿಪ್ಪರ್ ಲಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದರಿಂದ ರಸ್ತೆಯುವುದಕ್ಕೂ ವಾಹನಗಳು ನಿಂತು ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸರ್ಜಾಪುರ ಮುಖ್ಯ ರಸ್ತೆ ಕಿರಿದಾಗಿರುವ ಹಿನ್ನಲೆ ಹೆದ್ದಾರಿಯಲ್ಲಿ ಬೆಂಗಳೂರಿಗೆ ಹೋಗಬೇಕಾಗಿರುವ ಟಿಪ್ಪರ್ ಲಾರಿಗಳು ಅಕ್ರಮವಾಗಿ ಸುಂಕಗಳನ್ನು ಹಾಗೂ ಟ್ಯಾಕ್ಸ್ ಕಟ್ಟುವುದನ್ನು ತಪ್ಪಿಸಲು ವೇಗವಾಗಿ ಸರ್ಜಾಪುರದ ಪಟ್ಟಣದಲ್ಲಿ ಸಂಚಾರ ಮಾಡುತ್ತಿದ್ದು, ಕಳೆದ 20 ದಿನಗಳಲ್ಲಿ 12 ಅಪಘಾತಗಳನ್ನು ಮಾಡಿದ್ದಾರೆ. ಅಧಿಕಾರಿಗಳು ಟಿಪ್ಪರ್ ಲಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಈ ಘಟನೆ ಸಂಬಂಧ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಜಾಗರೂಕತೆಯಿಂದ ಅಕ್ರಮವಾಗಿ ಓಡಾಟ ಮಾಡುವ ಟಿಪ್ಪರ್ ಲಾರಿಗಳ ಹಾವಳಿಗೆ ಸಂಬಂಧ ಪಟ್ಟ ಪೊಲೀಸರು ಹಾಗೂ ಅಧಿಕಾರಿಗಳು ಕಡಿವಾಣ ಹಾಕುತ್ತಾರ ಎಂದು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:02 pm, Fri, 13 October 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್