ಬೆಂಗಳೂರಿನಲ್ಲಿ ಹೊಸ ವರ್ಷದ ಪಾರ್ಟಿ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು

ಬಾಪಿ ಹಾಗೂ ಸ್ನೇಹಿತರು ಟೆರೇಸ್ ಮೇಲೆ ಹೋಗಿ​ ಕೇಕ್ ಕತ್ತರಿಸಲು ಕೇಕ್ ತಂದಿದ್ದರು. ಆದ್ರೆ ಕೇಕ್ ಕಟ್ ಮಾಡುವ ಮುನ್ನವೇ ಕುಡಿದ ಅಮಲಿನಲ್ಲಿದ್ದ ಬಾಪಿ ಕಟ್ಟಡದಿಂದ ಕೆಳ ಬಿದ್ದು ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಹೊಸ ವರ್ಷದ ಪಾರ್ಟಿ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು
ಬಾಪಿ
Follow us
TV9 Web
| Updated By: ಆಯೇಷಾ ಬಾನು

Updated on:Jan 01, 2023 | 12:55 PM

ಬೆಂಗಳೂರು: ಹೊಸ ವರ್ಷದ ಪಾರ್ಟಿ ನಂತರ ಕಟ್ಟಡದಿಂದ ಬಿದ್ದು ಯುವಕ ಮೃತಪಟ್ಟ ಘಟನೆ ಬೆಂಗಳೂರಿನ ಕೊಟ್ಟಿಗೆಪಾಳ್ಯದಲ್ಲಿ ನಡೆದಿದೆ. ಒಡಿಶಾ ಮೂಲದ ಬಾಪಿ ಎಂಬ ಯುವಕ ಒಂದು ಕಟ್ಟಡದಿಂದ ಮತ್ತೊಂದು ಕಟ್ಟಡಕ್ಕೆ ದಾಟಲು ಯತ್ನಿಸಿ ಕಟ್ಟಡದ 3ನೇ ಫ್ಲೋರ್​ನಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ.

ಮೃತ ಬಾಪಿ ಕಾಟನ್​ಬಾಕ್ಸ್​ ಸಿದ್ಧಪಡಿಸುವ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಳೆದ ರಾತ್ರಿ ಹೊಸ ವರ್ಷದ ಪಾರ್ಟಿ ಮಾಡಿದ ಯುವಕರು ಎರಡು ಕಟ್ಟಡಗಳ ನಡುವೆ ಹೋಗಿ ಬರಲು ಕಿಟಕಿ ಹೊಡೆದು ದಾರಿ ಮಾಡಿಕೊಂಡಿದ್ರು. ಆ ಕಿಟಕಿಯ ಮೂಲಕವೇ ನಿನ್ನೆ ಕಟ್ಟಡದ ಟೆರೇಸ್ ಮೇಲೆ ಹೋಗಿದ್ದರು. ಅದೇ ರೀತಿ ರಾತ್ರಿ ಪಾರ್ಟಿ‌ ಮಾಡೋದಕ್ಕೆ ಸಿದ್ದತೆ ಮಾಡಿಕೊಂಡಿ‌ದ್ದ ಬಾಪಿ ಹಾಗೂ ಸ್ನೇಹಿತರು ಟೆರೇಸ್ ಮೇಲೆ ಹೋಗಿ​ ಕೇಕ್ ಕತ್ತರಿಸಲು ಕೇಕ್ ತಂದಿದ್ದರು. ಆದ್ರೆ ಕೇಕ್ ಕಟ್ ಮಾಡುವ ಮುನ್ನವೇ ಕುಡಿದ ಅಮಲಿನಲ್ಲಿದ್ದ ಬಾಪಿ ಕಟ್ಟಡದಿಂದ ಕೆಳ ಬಿದ್ದು ಮೃತಪಟ್ಟಿದ್ದಾರೆ.

ಹೊಸ ವರ್ಷಾಚರಣೆ ವೇಳೆ ಯುವಕನ ಮೇಲೆ ಹಾರಿದ ಗುಂಡು

ಶಿವಮೊಗ್ಗದ ವಿದ್ಯಾನಗರದಲ್ಲಿ ನಿನ್ನೆ ರಾತ್ರಿ ಹೊಸ ವರ್ಷಾಚರಣೆ ವೇಳೆ ಗುಂಡು ಹಾರಿಸುವಾಗ ಅವಘಡ ಸಂಭವಿಸಿದೆ. ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಹಾಗೂ ಗುಂಡುಹಾರಿಸಿದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಂಜುನಾಥ್ ಓಲೇಕರ್ ಎಂಬುವವರ ಮನೆಯಲ್ಲಿ ಹೊಸ ವರ್ಷದ ಪಾರ್ಟಿ ಆಯೋಜಿಸಲಾಗಿತ್ತು. ರಾತ್ರಿ 12 ಗಂಟೆಗೆ ಓಲೇಕರ್ ಗಾಳಿಯಲ್ಲಿ ಗುಂಡುಹಾರಿಸಲು ಮುಂದಾಗಿದ್ದರು. ಈ ವೇಳೆ ಆಕಸ್ಮಿಕವಾಗಿ ವಿನಯ್​ ಎಂಬುವನಿಗೆ ಗುಂಡು ತಗುಲಿದೆ. ಗಂಭೀರ ಗಾಯಗೊಂಡ ವಿನಯ್​ಗೆ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶಾಕ್​ಗೆ ಒಳಗಾದ ಮಂಜುನಾಥ್​ ಓಲೇಕರ್ ಸ್ಥಳದಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಟೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮಂಜುನಾಥ್ ಓಲೇಕರ್ ಅವರು ಪ್ರತಿವರ್ಷ ಹೊಸವರ್ಷವನ್ನು ಸಂಭ್ರಮದಿಂದ ಆಚರಿಸುತ್ತಾರೆ. ಈ ವರ್ಷವೂ ಅದೇ ರೀತಿಯಲ್ಲಿ ಪಾರ್ಟಿ ಅರೆಂಜ್ ಆಗಿತ್ತು. ಓಲೇಕರ್ ಅವರ ಪುತ್ರ ಈ ಪಾರ್ಟಿಗೆ ವಿನಯ್ ಎಂಬವರನ್ನು ಕರೆದಿದ್ದರು. ಪಾರ್ಟಿ ನಡೆಯುತ್ತಿದ್ದಾಗ ಓಲೇಕರ್ ಅವರು ಬಂದೂಕಿಗೆ ಬುಲೆಟ್ ಲೊಡ್ ಮಾಡಿ ಫೈರ್ ಮಾಡಲು ಅಣಿಯಾಗಿದ್ದಾರೆ. ಈ ವೇಳೆ ಮಿಸ್ ಫೈರ್ ಆಗಿದ್ದು, ವಿನಯ್ ರ ಹೊಟ್ಟೆಗೆ ತಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:55 pm, Sun, 1 January 23

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು