AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾತ್ಮಾ ಗಾಂಧೀಜಿ ವಿಚಾರ ಧಾರೆ ಪ್ರಸಾರ: 10 ವರ್ಷಗಳಿಂದ ಉಚಿತ ಕಾರ್ಯಾಗಾರ ನಡೆಸುತ್ತಿರುವ ಉಪನ್ಯಾಸಕಿ ಅಬಿದಾ ಬೇಗಂ

ಬೆಂಗಳೂರಿನ ಉಪನ್ಯಾಸಕಿ ಅಬಿದಾ ಬೇಗಂ ಕಳೆದ 10 ವರ್ಷಗಳಿಂದ ಉಚಿತವಾಗಿ ಮಹಾತ್ಮಾ ಗಾಂಧೀಜಿಯವರ ಜೀವನ ಹಾಗೂ ತತ್ತ್ವಗಳ ಕುರಿತು ಕಾರ್ಯಾಗಾರ ನಡೆಸುತ್ತಿದ್ದಾರೆ. ಕರ್ನಾಟಕದ 31 ಜಿಲ್ಲೆಗಳ ೪೦೦ಕ್ಕೂ ಹೆಚ್ಚು ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿ ಪ್ರಾಮಾಣಿಕತೆ, ಅಹಿಂಸೆ ಹಾಗೂ ಸ್ವಾವಲಂಬನೆಯ ಮೌಲ್ಯಗಳನ್ನು ಮೂಡಿಸುತ್ತಿದ್ದಾರೆ. ಜೊತೆಗೆ ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆಯ ಸಂಚಾಲಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮಹಾತ್ಮಾ ಗಾಂಧೀಜಿ ವಿಚಾರ ಧಾರೆ ಪ್ರಸಾರ: 10 ವರ್ಷಗಳಿಂದ ಉಚಿತ ಕಾರ್ಯಾಗಾರ ನಡೆಸುತ್ತಿರುವ ಉಪನ್ಯಾಸಕಿ ಅಬಿದಾ ಬೇಗಂ
ಮಹಾತ್ಮಾ ಗಾಂಧೀಜಿ ವಿಚಾರ ಧಾರೆ ಪ್ರಸಾರImage Credit source: The Hindu
ಭಾವನಾ ಹೆಗಡೆ
|

Updated on:Oct 03, 2026 | 10:22 AM

Share

ಮುಖ್ಯಾಂಶಗಳು

  • ಗಾಂಧೀಜಿ ತತ್ತ್ವ ಪ್ರಸಾರಕ್ಕೆ ಉಚಿತವಾಗಿ ಕಾರ್ಯಾಗಾರ ನಡೆಸುತ್ತಿರುವ ಉಪನ್ಯಾಸಕಿ ಅಬಿದಾ ಬೇಗಂ.
  • ಕರ್ನಾಟಕದ 31 ಜಿಲ್ಲೆಗಳ 400ಕ್ಕೂ ಹೆಚ್ಚು ಕಾಲೇಜುಗಳಿಗೆ ಭೇಟಿ ನೀಡಿದ ಉಪನ್ಯಾಸಕಿ.
  • ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆ ಆಯೋಜಿಸಿ ಯುವಜನರಲ್ಲಿ ಮೌಲ್ಯಗಳನ್ನು ಬೆಳೆಸುತ್ತಿರುವ ಅಭಿಯಾನ.

ಬೆಂಗಳೂರು, ಅಕ್ಟೋಬರ್ 03: ತಂತ್ರಜ್ಞಾನ ಹಾಗೂ ಕೃತಕ ಬುದ್ಧಿಮತ್ತೆಯ (AI) ಈ ಯುಗದಲ್ಲೂ ಮಹಾತ್ಮಾ ಗಾಂಧೀಜಿಯವರ ತತ್ತ್ವ ಸಿದ್ಧಾಂತಗಳು ಇಂದಿಗೂ ಪ್ರಸ್ತುತ ಎಂಬುದನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ಕಾಯಕದಲ್ಲಿ ಬೆಂಗಳೂರಿನ ಟಿ. ದಾಸರಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಹಿರಿಯ ಉಪನ್ಯಾಸಕಿ ಅಬಿದಾ ಬೇಗಂ ತೊಡಗಿಸಿಕೊಂಡಿದ್ದಾರೆ.

ಕಳೆದ ಹತ್ತು ವರ್ಷಗಳಿಂದ ಉಚಿತ ಕಾರ್ಯಾಗಾರ

ಕಳೆದ 10 ವರ್ಷಗಳಿಂದ ಉಚಿತವಾಗಿ ಗಾಂಧೀಜಿ ಜೀವನ ಹಾಗೂ ವಿಚಾರಗಳ ಕುರಿತು ಕಾರ್ಯಾಗಾರಗಳನ್ನು ನಡೆಸಿಕೊಂಡು ಬರುತ್ತಿರುವ ಇವರು, ಒಂದೇ ಒಂದು ರೂಪಾಯಿ ಶುಲ್ಕ ಪಡೆಯದೆ ಕರ್ನಾಟಕದ 31 ಜಿಲ್ಲೆಗಳ 400ಕ್ಕೂ ಹೆಚ್ಚು ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳಿಗೆ ಭೇಟಿ ನೀಡಿದ್ದಾರೆ. ಗಾಂಧೀವಾದಿಯಾಗಿದ್ದ ತಮ್ಮ ತಂದೆ ಅಫ್ತಾಬ್ ಅಹಮದ್ ಖಾನ್ ಅವರಿಂದ ಪ್ರೇರಣೆ ಪಡೆದ ಇವರು, 2016ರಲ್ಲಿ ರಾಮನಗರದ ಕಾಲೇಜೊಂದರಲ್ಲಿ ಮೊದಲ ಬಾರಿಗೆ ಈ ಕಾರ್ಯಾಗಾರ ಆರಂಭಿಸಿದ್ದರು.

ವಿದ್ಯಾರ್ಥಿಗಳಲ್ಲಿ ಸಮಯ ಪ್ರಜ್ಞೆ, ಪ್ರಾಮಾಣಿಕತೆ, ಸ್ವಾವಲಂಬನೆ ಹಾಗೂ ಅಹಿಂಸೆಯ ಮೌಲ್ಯಗಳನ್ನು ಮೂಡಿಸುವುದು ಇವರ ಮುಖ್ಯ ಉದ್ದೇಶ. “ಇಂದಿನ ಯುವಜನತೆ ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡುವ ಸುಳ್ಳು ಸುದ್ದಿಗಳನ್ನು ನಂಬಿ ಗಾಂಧೀಜಿಯವರ ಬಗ್ಗೆ ತಪ್ಪು ಅಭಿಪ್ರಾಯ ಬೆಳೆಸಿಕೊಳ್ಳುತ್ತಾರೆ. ಅಂತಹ ಸಂದರ್ಭಗಳಲ್ಲಿ ಸತ್ಯಾಂಶ ಹಾಗೂ ಸೂಕ್ತ ಪುಸ್ತಕಗಳನ್ನು ಶಿಫಾರಸು ಮಾಡುವ ಮೂಲಕ ಅವರ ಗೊಂದಲ ನಿವಾರಿಸುತ್ತೇನೆ,” ಎನ್ನುತ್ತಾರೆ ಅಬಿದಾ

ಏಳು ದಿನಗಳ ರಾಜ್ಯಮಟ್ಟದ ಯುವ ಶಿಬಿರ ಆಯೋಜನೆ

ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಹಾಗೂ ಎನ್‌ಎಸ್‌ಎಸ್ ಸಹಯೋಗದೊಂದಿಗೆ ‘ಗಾಂಧಿವಾದಿ ಆಲೋಚನೆಗಳ ಮೂಲಕ ಮಾನವೀಯ ಮೌಲ್ಯಗಳು’ ಎಂಬ ಏಳು ದಿನಗಳ ರಾಜ್ಯಮಟ್ಟದ ಯುವ ಶಿಬಿರಗಳನ್ನು ಇವರು ಆಯೋಜಿಸುತ್ತಾರೆ. ಇದರಲ್ಲಿ ವಿದ್ಯಾರ್ಥಿಗಳಿಗೆ ನಾಯಕತ್ವ, ಸಂವಹನ ಕೌಶಲ ಮತ್ತು ರಾಟೆಯಲ್ಲಿ ನೂಲು ತೆಗೆಯುವ ತರಬೇತಿ ನೀಡಲಾಗುತ್ತದೆ.

ಅಲ್ಲದೆ, ಮಹಾರಾಷ್ಟ್ರದ ಜಲಗಾಂವ್‌ನಲ್ಲಿರುವ ಗಾಂಧಿ ರಿಸರ್ಚ್ ಫೌಂಡೇಶನ್ ನಡೆಸುವ ‘ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆ’ಯ ರಾಜ್ಯ ಸಂಚಾಲಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರತಿವರ್ಷ ಫೆಬ್ರವರಿಯಲ್ಲಿ ನಡೆಯುವ ಈ ಪರೀಕ್ಷೆಗೆ ಉಚಿತ ಅಧ್ಯಯನ ಸಾಮಗ್ರಿ ನೀಡಲಾಗುತ್ತದೆ. ಈ ವರ್ಷ ನೋಂದಾಯಿಸಿಕೊಂಡಿದ್ದ 8000 ವಿದ್ಯಾರ್ಥಿಗಳಲ್ಲಿ 325 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:22 am, Sat, 3 October 26

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!
ಕರ್ನಾಟಕ ಸ್ಟಿಂಗ್ ಸಮರ ಹೈಕಮಾಂಡ್ ಅಂಗಳಕ್ಕೆ
ಕರ್ನಾಟಕ ಸ್ಟಿಂಗ್ ಸಮರ ಹೈಕಮಾಂಡ್ ಅಂಗಳಕ್ಕೆ
ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್!
ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್!
ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ
ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್