AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸಿಬಿ ರದ್ದು: ಎಸಿಬಿಯಲ್ಲಿದ್ದ ಹುದ್ದೆಗಳು ಲೋಕಾಯಕ್ತ, ಪೊಲೀಸ್ ಇಲಾಖೆಗಳಿಗೆ ವರ್ಗಾವಣೆ

2022ರ ಆಗಸ್ಟ್​.11 ರಂದು ಎಸಿಬಿ ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿತ್ತು. ಎಸಿಬಿ ರದ್ದು ಹಿನ್ನೆಲೆ ಅಲ್ಲಿ ಇರುವಂತಹ ಹುದ್ದೆಗಳು ಖಾಲಿಯಾಗಿದ್ದು, ಹೈಕೋರ್ಟ್​ನಿಂದ ಭ್ರಷ್ಟಾಚಾರ ನಿಗ್ರಹ ದಳ(ACB) ರದ್ದು ಹಿನ್ನೆಲೆ ಎಸಿಬಿಯಲ್ಲಿದ್ದ ಹುದ್ದೆಗಳನ್ನ ಲೋಕಾಯುಕ್ತ ಸಂಸ್ಥೆ ಮತ್ತು ಪೊಲೀಸ್ ಇಲಾಖೆಗಳಿಗೆ ಸರ್ಕಾರ ವರ್ಗಾವಣೆ ಮಾಡಿದೆ.

ಎಸಿಬಿ ರದ್ದು: ಎಸಿಬಿಯಲ್ಲಿದ್ದ ಹುದ್ದೆಗಳು ಲೋಕಾಯಕ್ತ, ಪೊಲೀಸ್ ಇಲಾಖೆಗಳಿಗೆ ವರ್ಗಾವಣೆ
ಎಸಿಬಿಯಲ್ಲಿದ್ದ ಹುದ್ದೆಗಳು ವರ್ಗಾವಣೆ
ರಾಚಪ್ಪಾಜಿ ನಾಯ್ಕ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 21, 2024 | 5:34 PM

Share

ಬೆಂಗಳೂರು, ಫೆ.21: ಹೈಕೋರ್ಟ್​ನಿಂದ ಭ್ರಷ್ಟಾಚಾರ ನಿಗ್ರಹ ದಳ(ACB) ರದ್ದು ಹಿನ್ನೆಲೆ ಎಸಿಬಿಯಲ್ಲಿದ್ದ ಹುದ್ದೆಗಳನ್ನ ಲೋಕಾಯುಕ್ತ ಸಂಸ್ಥೆ ಮತ್ತು ಪೊಲೀಸ್ ಇಲಾಖೆಗಳಿಗೆ ಸರ್ಕಾರ ವರ್ಗಾವಣೆ ಮಾಡಿದೆ. ಎಸಿಬಿಯಲ್ಲಿದ್ದ ಬರೊಬ್ಬರಿ 524 ಹುದ್ದೆಗಳನ್ನ ವಿಂಗಡಿಸಿ, ಎರಡು ಇಲಾಖೆಗೆ ವರ್ಗಾಹಿಸಲಾಗಿದೆ. 2022ರ ಆಗಸ್ಟ್​.11 ರಂದು ಎಸಿಬಿ ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿತ್ತು. ಎಸಿಬಿ ರದ್ದು ಹಿನ್ನೆಲೆ ಅಲ್ಲಿ ಇರುವಂತಹ ಹುದ್ದೆಗಳು ಖಾಲಿಯಾಗಿತ್ತು.

ಲೋಕಾಯುಕ್ತಕ್ಕೆ 266, ಪೊಲೀಸ್ ಇಲಾಖೆಗೆ 258 ಹುದ್ದೆಗಳ ವರ್ಗಾವಣೆ

ಇದೀಗ ಲೋಕಾಯುಕ್ತ ಸಂಸ್ಥೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಕೊರತೆ ಹಿನ್ನೆಲೆ ಅಧಿಕಾರಿ, ಸಿಬ್ಬಂದಿಯಿಂದ ಕೇಸ್​ ಕ್ಲಿಯರ್ ಮಾಡಲು ಕಷ್ಟ ಆಗುತ್ತಿದ್ದು, ಹೆಚ್ಚುವರಿ ಅಧಿಕಾರಿ, ಸಿಬ್ಬಂದಿ ನೇಮಕಕ್ಕೆ ಲೋಕಾಯಕ್ತರು ಮನವಿ ಮಾಡಿದ್ದರು. ಹೀಗಾಗಿ ಎಸಿಬಿಯಲ್ಲಿದ್ದ ಹುದ್ದೆಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಿ ಆದೇಶಿಸಲಾಗಿದೆ. ಅದರಂತೆ ಭ್ರಷ್ಟಾಚಾರ ನಿಗ್ರಹ ದಳದಿಂದ ಲೋಕಾಯುಕ್ತಕ್ಕೆ 266 ಹುದ್ದೆಗಳು ಹಾಗೂ ಪೊಲೀಸ್ ಇಲಾಖೆಗೆ 258 ಹುದ್ದೆಗಳನ್ನು ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ:ACB ಗೆ ಗುಡ್ ಬೈ! ಹೈಕೋರ್ಟ್ ಆದೇಶದಂತೆ ಎಸಿಬಿ ಸಂಸ್ಥೆಯನ್ನು ರದ್ದುಗೊಳಿಸಿದ ರಾಜ್ಯ ಸರ್ಕಾರ

ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸಿಬಿ ಸಂಸ್ಥೆಯನ್ನು ರದ್ದುಗೊಳಿಸಿ, ಆದೇಶ ಹೊರಡಿಸಿತ್ತು. ಜೊತೆಗೆ ಲೋಕಾಯುಕ್ಕೆ ಸಂಪೂರ್ಣ ಅಧಿಕಾರ ನೀಡಿತ್ತು. ಉಚ್ಚ ನ್ಯಾಯಾಲಯ ನೀಡಿದ್ದ ತೀರ್ಪಿನಲ್ಲಿನ ಅಂಶಗಳನ್ನು ಪರಿಶೀಲಿಸಿದ ಸರ್ಕಾರವು, ಈ ಕೆಳಕಂಡಂತೆ ಆದೇಶಿಸಿತ್ತು

. ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರವನ್ನು ರದ್ದುಗೊಳಿಸಿದೆ.

2. ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಭ್ರಷ್ಟಾಚಾರ ತಡೆ ಅಧಿನಿಯಮ ಸಂಪೂರ್ಣ ಅಧಿಕಾರ ನೀಡಲಾಗಿದೆ.

3. ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಪೊಲೀಸ್ ಠಾಣಾಧಿಕಾರ ನೀಡಲಾಗಿದೆ.

4. ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಪುಸ್ತುತ ಬಾಕಿಯಿರುವ ತನಿಖೆಗಳು ವಿಚಾರಣೆಗಳು/ಇತರೆ ಶಿಸ್ತು ಪ್ರಕರಣಗಳು ಹಾಗೂ ಖಾಸಗಿ ದೂರುದಾರರ ಪ್ರಕರಣಗಳನ್ನು ಸಂಪೂರ್ಣವಾಗಿ ಲೋಕಾಯುಕ್ತ ಸಂಖ್ಯೆಗೆ ವರ್ಗಾಯಿಸುವುದು ಎಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಚಪ್ಪಾಜಿ ನಾಯ್ಕ್
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ
ಸಕ್ರೇಬೈಲು ಆನೆ ಬಿಡಾರದಲ್ಲಿ ಶೌರ್ಯ ಆನೆ ಸಾವು
ಸಕ್ರೇಬೈಲು ಆನೆ ಬಿಡಾರದಲ್ಲಿ ಶೌರ್ಯ ಆನೆ ಸಾವು
ಹುಚ್ಚರನ್ನು ಜೈಲಿಗೆ ಹಾಕ್ತಾರಾ? ಪ್ರಕಾಶ್ ರಾಜ್​ಗೆ ಪ್ರತಾಪ್ ಸಿಂಹ ತಿರುಗೇಟು
ಹುಚ್ಚರನ್ನು ಜೈಲಿಗೆ ಹಾಕ್ತಾರಾ? ಪ್ರಕಾಶ್ ರಾಜ್​ಗೆ ಪ್ರತಾಪ್ ಸಿಂಹ ತಿರುಗೇಟು