AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿವಿಯಲ್ಲಿ ವಿದ್ಯಾರ್ಥಿ ಸಂಘಟನೆಗಳ ನಡುವೆ ಮಾರಾಮಾರಿ: ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್

ಪರೀಕ್ಷೆ ಮೌಲ್ಯಮಾಪನ, ಫಲಿತಾಂಶಕ್ಕೆ ಸಮಸ್ಯೆಯಾಗಿದೆ. ಇದನ್ನು ಆದಷ್ಟು ಬೇಗ ಬಗೆಹರಿಸಬೇಕು ಎಂದು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದು, ಹಲವರು ಗಾಯಗೊಂಡಿದ್ದಾರೆ.

ಬೆಂಗಳೂರು ವಿವಿಯಲ್ಲಿ ವಿದ್ಯಾರ್ಥಿ ಸಂಘಟನೆಗಳ ನಡುವೆ ಮಾರಾಮಾರಿ: ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್
ಎಬಿವಿಪಿ ಪ್ರತಿಭಟನೆ
Follow us
TV9 Web
| Updated By: preethi shettigar

Updated on:Jan 31, 2022 | 1:46 PM

ಬೆಂಗಳೂರು: ನಗರದ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ(ABVP) ಪ್ರತಿಭಟನೆ ನಡೆಸಿದ್ದು, ಧರಣಿ ನಿರತ ಎಬಿವಿಪಿ ಕಾಯರ್ಕರ್ತರ ಮೇಲೆ ಪೊಲೀಸರು(Karnataka Police) ಲಾಠಿಚಾರ್ಜ್​ ಮಾಡಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಶೈಕ್ಷಣಿಕ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಇಂದು (ಜನವರಿ 31) ಎಬಿವಿಪಿ ಪ್ರತಿಭಟನೆ (Protest) ನಡೆಸುತ್ತಿದೆ. ಪರೀಕ್ಷೆ ಮೌಲ್ಯಮಾಪನ, ಫಲಿತಾಂಶಕ್ಕೆ ಸಮಸ್ಯೆಯಾಗಿದೆ. ಇದನ್ನು ಆದಷ್ಟು ಬೇಗ ಬಗೆಹರಿಸಬೇಕು ಎಂದು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದು, ಹಲವರು ಗಾಯಗೊಂಡಿದ್ದಾರೆ.

ವಿವಿ ಮುತ್ತಿಗೆ ಹಾಕಲು ಮುಂದಾಗಿದ್ದ ಅಖಿಲಾ ಭಾರತೀಯ ವಿದ್ಯಾರ್ಥಿ ಪರಿಷತ್  ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಹಾಸ್ಟೆಲ್ ಸಮಸ್ಯೆ, ವಿದ್ಯಾರ್ಥಿ ವೇತನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ವಿವಿಗೆ ವಿದ್ಯಾರ್ಥಿಗಳು ಮುಂದಾಗಿದ್ದಾರೆ. ಈ ವೇಳೆ ವಿದ್ಯಾರ್ಥಿ ಸಂಘಟನೆಗಳು ನಡವೆಯೇ ಮಾರಾಮಾರಿಯಾಗಿದೆ.

ಬೇರೆ ಬೇರೆ ವಿಚಾರಗಳಿಗಾಗಿ ಪ್ರತಿಭಟನೆಗೆ ಮುಂದಾಗಿದ್ದ, ಎಬಿವಿಪಿ ಮತ್ತು ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ನಡುವೆ ಗಲಾಟೆಯಾಗಿದೆ. ರಾಯಚೂರಿನಲ್ಲಿ ಅಂಬೇಡ್ಕರ್ ರವರಿಗೆ ಅವಮಾನ ಹಿನ್ನೆಲೆ ಬೆಂಗಳೂರು ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಲಾಗಿತ್ತು. ಮಾರ್ಕ್ಸ್ ಕಾರ್ಡ್, ಫಲಿತಾಂಶ ತಡವಾಗಿ ಬರುತ್ತಿರುವ ಹಿನ್ನೆಲೆ ಎಬಿವಿಪಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿದ್ದರು. ಹೀಗಾಗಿ ವಿದ್ಯಾರ್ಥಿಗಳ ಮಧ್ಯೆಯೇ ಗಲಾಟೆಯಾಗಿದೆ.

ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವುದೇ ದೊಡ್ಡ ವಿಚಾರ ವಿಚಾರ ದೇಶಕ್ಕಾಗಿ ನೀವು ಬರೊಲ್ಲ, ಮಾರ್ಕ್ಸ್ ಕಾರ್ಡ್, ಫಲಿತಾಂಶ ತಡವಾಗೋದು ಇದೆಲ್ಲ ಮಾಮೂಲಿ. ಇವತ್ತು ನಮ್ಮ ಪ್ರತಿಭಟನೆ ಇದೆ. ನೀವು ನಾಳೆ ಬನ್ನಿ ಎಂದು  ಹೇಳಿ ಗಲಾಟೆ. ಈ ವೇಳೆ ಎಬಿವಿಬಿ ವಿದ್ಯಾರ್ಥಿಗಳ ಮೇಲೆ ಬೆಂಗಳೂರು ಸಂಶೋಧನಾ ವಿವಿ ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದಾರೆ. ಈ ಹೀಗಾಗಿ ಪರಿಸ್ಥಿತಿ ಹತೋಟಿಗೆ ತರಲು ಸ್ಥಳಕ್ಕೆ ಆಗಮಿಸಿದ ಜ್ಞಾನ ಭಾರತಿ ಪೊಲೀಸರು ಲಾಠಿಚಾರ್ಜ್​ ಮಾಡಿದ್ದಾರೆ.

ಪೊಲೀಸರ ಲಾಠಿಚಾರ್ಜ್ ವೇಳೆ ವಿದ್ಯಾರ್ಥಿನಿ ತಲೆಗೆ ಗಾಯ

ಪೊಲೀಸರ ಲಾಠಿಚಾರ್ಜ್ ವೇಳೆ ವಿದ್ಯಾರ್ಥಿನಿ ಹೇಮಶ್ರೀ ತಲೆಗೆ ಗಂಭೀರ ಗಾಯವಾಗಿದೆ. ಶೈಕ್ಷಣಿಕ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಎಬಿವಿಪಿ ಧರಣಿ ನಡೆಸುತ್ತಿರುವ ವೇಳೆ ಗಂಭೀರ ಗಾಯವಾಗಿದ್ದು, ತಲೆಗೆ ಸ್ಟಿಚ್ಚಿಂಗ್ ಹಾಕಲಾಗಿದೆ. ಕಳೆದ 2 ವರ್ಷದಿಂದ ಎಬಿವಿಪಿ ವಿದ್ಯಾರ್ಥಿ ಸಂಘಟನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಹೇಮಾಶ್ರೀ ಗಾಯಗೊಂಡಿದ್ದಾರೆ.

ತಳ್ಳಾಟ ಹಾಗೂ ನೂಕಾಟದ ವೇಳೆ ಯುವತಿಗೆ ಗಾಯ

ಅನುಮತಿ ಇಲ್ಲದಿದ್ದರೂ ಪ್ರತಿಭಟನೆಗೆ ಮುಂದಾಗಿದ್ದ ಎಬಿವಿಪಿ ಹಾಗೂ ಇನ್ನೊಂದು ಗುಂಪಿನ ನಡುವೆ ಗಲಾಟೆ ನಡೆದಿದೆ. ಬಿಕಾಂ ಮಾರ್ಕ್ಸ್ ಕಾರ್ಡ್ ವಿಚಾರವಾಗಿ ಪ್ರತಿಭಟನೆಗೆ ಅನುಮತಿ ನಿರಾಕಾರಣೆ ಮಾಡಲಾಗಿದೆ. ನೆನ್ನೆ ಪೊಲೀಸರ ಅನುಮತಿ ನಿರಾಕರಣೆ ಬಳಿಕವೂ ಇಂದು ಪ್ರತಿಭಟನಾಕಾರರು ಆಗಮಿಸಿದ್ದಾರೆ. ಆದರೆ ಇಂದು ರಾಯಚೂರು ಘಟನೆಗೆ ಪ್ರತಿಭಟನೆ ಅನುಮತಿ ಪಡೆದಿದ್ದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅಲ್ಲಿಗೆ ಎಬಿವಿಪಿ ಕಾರ್ಯಕರ್ತರು ಆಗಮಿಸಿದ್ದಾರೆ. ಈ ವೇಳೆ ಗಲಾಟೆ ಆಗಿದೆ. ಪ್ರತಿಭಟನಾಕಾರರನ್ನು ಬೇರ್ಪಡಿಸುವಾಗ ತಳ್ಳಾಟ ನಡೆದಿದೆ.

ಪೊಲೀಸ್ ಠಾಣೆ ಮುಂದೆಯೇ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

ಹಲ್ಲೆ ಮಾಡಿದ ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ಮೇಲೆ ಎಬಿವಿಪಿ ವಿದ್ಯಾರ್ಥಿಗಳ ತಂಡ ದೂರು ನೀಡಿದೆ. ಸದ್ಯ ಜೈ ಭೀಮ್ ಮತ್ತು ಎಬಿವಿಪಿ ವಿದ್ಯಾರ್ಥಿ ಸಂಘಟನೆಗಳು ಪೊಲೀಸ್ ಠಾಣೆ ಮುಂದೆಯೇ ಪ್ರತಿಭಟನೆ ನಡೆಸುತ್ತಿದ್ದಾರೆ.

ಘಟನೆಯ ಬಗ್ಗೆ ಬೆಂಗಳೂರು ವಿವಿ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ಸ್ಪಷ್ಟನೆ

ದೂರ ಶಿಕ್ಷಣ ವಿದ್ಯಾರ್ಥಿಗಳ ಫಲಿತಾಂಶ ವಿಳಂಬ ಹಿನ್ನೆಲೆ ಎಬಿವಿಪಿ ವಿದ್ಯಾರ್ಥಿಗಳಿಂದ ವಿವಿಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸಂಶೋಧನಾ ವಿದ್ಯಾರ್ಥಿಗಳಿಂದಲೂ ಪ್ರತಿಭಟನೆ ನಡೆದಿದೆ. 2 ಸಂಘಟನೆ ಪ್ರತಿಭಟನೆ ವಿಚಾರವಾಗಿ ಗಲಾಟೆ ನಡೆದಿದೆ. ರಾಜಕೀಯತೇರ ವಿದ್ಯಾರ್ಥಿ ಸಂಘಟನೆಗಳಿಗೆ ಅವಕಾಶವಿಲ್ಲ. ಪ್ರತಿಭಟನೆ ನಡೆಸುವ ಬಗ್ಗೆ ಯಾವುದೇ ಮಾಹಿತಿ ನೀಡಿರಲಿಲ್ಲ. ವಿದ್ಯಾರ್ಥಿಗಳಿಗೆ ಸಮಸ್ಯೆ ಇದ್ದರೆ ನೇರವಾಗಿ ಬಂದು ಕೇಳಲಿ. ವಿವಿ ಆವರಣದಲ್ಲಿ ಇಂತಹ ಸಂಘಟನೆಗೆ ಅವಕಾಶ ನೀಡಲ್ಲ ಎಂದು ಬೆಂಗಳೂರು ವಿವಿ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ಸ್ಪಷ್ಟನೆ ನೀಡಿದ್ದಾರೆ.

ಘಟನೆ ಸಂಬಂಧ ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ಹೇಳಿಕೆ

ಇಂದು ಬೆಳಗ್ಗೆ ವಿಶ್ವವಿದ್ಯಾಲಯ ಆಡಳಿತ ಮಂಡಳಿಯ ವಿರುದ್ಧ ಒಂದು ಗುಂಪು ಪ್ರತಿಭಟನೆ ನಡೆಸುತ್ತಿತ್ತು. ನಂತರ ಅದೇ ಸ್ಥಳಕ್ಕೆ ಮತ್ತೊಂದು ತಂಡ ಎಬಿವಿಪಿ ಅವ್ರು ಪ್ರತಿಭಟನೆ ನಡೆಸಲು ಬಂದರು. ಈ ವೇಳೆ ಏಕ ಕಾಲದಲ್ಲಿ ಪ್ರತಿಭಟನೆ ಬೇಡ ನಾವು ಅಧಿಕಾರಿಗಳನ್ನು ಭೇಟಿ ಮಾಡುತ್ತೀವೆ ಎಂದರು ಸಹ ಕೇಳಲಿಲ್ಲ. ಒತ್ತಾಯ ಪೂರ್ವಕವಾಗಿ ಒಳಗೆ ಹೋಗಿ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಈ ಘಟನೆಯಲ್ಲಿ ಎಸಿಪಿ ಹಾಗೂ ಒಂದಷ್ಟು ಅಧಿಕಾರಿಗಳ ಮೇಲು ಹಲ್ಲೆ ಅಗಿದೆ.  ಎರಡು ಗುಂಪು ಗಲಾಟೆ ವೇಳೆ ತಳ್ಳಾಟ ನೂಕಾಟ ನಡೆದಿದೆ ಈ ವೇಳೆ ಹಲವರಿಗೆ ಗಾಯ ಅಗಿದೆ. ಈ ಸಂಬಂಧ ಕೇಸ್ ದಾಖಲು ಮಾಡಲಿದ್ದೆವೆ. ಸಂಪೂರ್ಣ ತನಿಖೆ ನಡೆಸುತ್ತೇವೆ ಎಂದು ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ:

ಮದುವೆ ಮನೆಯಲ್ಲಿ ಲಾಠಿಚಾರ್ಜ್: ಕೊರಗರ ಮೇಲೆ ದೌರ್ಜನ್ಯ ಎಸಗಿದ ಪೊಲೀಸ್ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮದ ಭರವಸೆ

Manipur Assembly Election: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆಯೇ ಶುರವಾಯ್ತು ಪ್ರತಿಭಟನೆ, ಕಚೇರಿಗಳು ಧ್ವಂಸ

Published On - 12:22 pm, Mon, 31 January 22

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ