ಫಲಾನುಭವಿಗಳ 70ಲಕ್ಷ ರೂ ದುರ್ಬಳಕೆ: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ನಾಗರಾಜಪ್ಪ ಬಂಧನ

ವಿವಿಧ ಫಲಾನುಭವಿಗಳ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ 70ಲಕ್ಷ ರೂಪಾಯಿ ದುರ್ಬಳಕೆ ಆರೋಪದಡಿ ನಾಗರಾಜಪ್ಪರ ಬಂಧನವಾಗಿದೆ.

ಫಲಾನುಭವಿಗಳ 70ಲಕ್ಷ ರೂ ದುರ್ಬಳಕೆ: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ನಾಗರಾಜಪ್ಪ ಬಂಧನ
ಸಾಂಕೇತಿಕ ಚಿತ್ರ
TV9kannada Web Team

| Edited By: Ayesha Banu

Jul 01, 2022 | 11:05 PM

ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿ ಎಸಿಬಿಯಿಂದ(ACB) ನಿಗಮದ ಪ್ರಧಾನ ವ್ಯವಸ್ಥಾಪಕ ನಾಗರಾಜಪ್ಪ ಬಂಧನವಾಗಿದೆ(Bhovi Development Corporation General Manager). ಎಸಿಬಿ ತನಿಖೆಯಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಲಾಗಿರುವುದು ಸಾಬೀತಾಗಿದೆ. ಹೀಗಾಗಿ ಫಲಾನುಭವಿಗಳ 70ಲಕ್ಷ ರೂಪಾಯಿ ದುರ್ಬಳಕೆ ಆರೋಪದಡಿ, ಸಾಕ್ಷ್ಯನಾಶ ಸಾಧ್ಯತೆ ಹಿನ್ನೆಲೆಯಲ್ಲಿ ನಾಗರಾಜಪ್ಪರನ್ನ ಬಂಧಿಸಲಾಗಿದೆ.

ವಿವಿಧ ಫಲಾನುಭವಿಗಳ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ 70ಲಕ್ಷ ರೂಪಾಯಿ ದುರ್ಬಳಕೆ ಆರೋಪದಡಿ ನಾಗರಾಜಪ್ಪರ ಬಂಧನವಾಗಿದೆ. ನಿಗಮದ ಅನುದಾನ ದುರ್ಬಳಕ್ಕೆ, ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವುದು ಸೇರಿದಂತೆ ವಿವಿಧ ಆರೋಪಗಳಡಿ ನಾಗರಾಜಪ್ಪ ವಿರುದ್ಧ ಎಸಿಬಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಲಾಗಿದ್ದು ಆರೋಪಗಳು ಸಾಬೀತಾದ ಹಿನ್ನೆಲೆ ಬಂಧಿಸಲಾಗಿದೆ. ಇದನ್ನೂ ಓದಿ: ಪವಿತ್ರಾ ಲೋಕೇಶ್ ವಿಚಾರದಲ್ಲಿ ಸ್ವಚ್ಛ ಕನ್ನಡದಲ್ಲಿ ಪ್ರತಿಕ್ರಿಯೆ ನೀಡಿದ ಸುಚೇಂದ್ರ ಪ್ರಸಾದ್​

ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ ಬಂಧನ ಬೆಂಗಳೂರು: ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿನ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಎಸಿಬಿ(ACB) ಪೊಲೀಸರು ಜೂನ್ 15ರಂದು ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿಯವರನ್ನು(Bhovi Development Corporation Managing Director) ಬಂಧಿಸಿದ್ದಾರೆ. ಅಭಿವೃದ್ಧಿ ಯೋಜನೆ ಹೆಸರಿನಲ್ಲಿ ವಂಚಿಸಿದ್ದಾರೆ ಎಂಬ ಆರೋಪ ನಿಗಮದ ವಿರುದ್ಧ ಕೇಳಿ ಬಂದಿತ್ತು. ನಕಲಿ ಫಲಾನುಭವಿಗಳನ್ನ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ 150 ಕೋಟಿ ವಂಚಿಸಿದ್ದ ಆರೋಪವಿತ್ತು. ನಿಗಮದ ಎಂ.ಡಿ ಲೀಲಾವತಿ, ಜನರಲ್ ಮ್ಯಾನೇಜರ್ ನಾಗರಾಜಪ್ಪ ಮನೆಗಳ ಮೇಲೆ ದಾಳಿ ನಡೆಸಿದ್ದ ಎಸಿಬಿ ತನಿಖೆಗೆ ಅಗತ್ಯ ದಾಖಲೆಗಳನ್ನ ಸಲ್ಲಿಸದೇ ಇರುವ ಹಿನ್ನೆಲೆ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿಯನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada