ಕಚೇರಿಯಲ್ಲೇ ಲಂಚ: ಎಸಿಬಿ ಬಲೆಗೆ ಬಿಬಿಎಂಪಿ ಎಫ್​ಡಿಎ

ಕಡತ ವಿಲೇವಾರಿ ಮಾಡಲು ಪೀಠೋಪಕರಣ ಗುತ್ತಿಗೆದಾರರೊಬ್ಬರಿಂದ ₹ 15 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಬಿಎಂಪಿ ಕೇಸ್​ ವರ್ಕರ್ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಕಚೇರಿಯಲ್ಲೇ ಲಂಚ: ಎಸಿಬಿ ಬಲೆಗೆ ಬಿಬಿಎಂಪಿ ಎಫ್​ಡಿಎ
ಭ್ರಷ್ಟಾಚಾರ ನಿಗ್ರಹ ದಳ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Oct 05, 2021 | 8:13 PM

ಬೆಂಗಳೂರು: ಕಡತ ವಿಲೇವಾರಿ ಮಾಡಲು ಪೀಠೋಪಕರಣ ಗುತ್ತಿಗೆದಾರರೊಬ್ಬರಿಂದ ₹ 15 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರಥಮ ದರ್ಜೆ ಗುಮಾಸ್ತ ರಾಜು ಎಂಬುವವರು ಭ್ರಷ್ಟಾಚಾರ ನಿಗ್ರಹ ದಳದ (Anti Corruption Bureau – ACB) ಬಲೆಗೆ ಬಿದ್ದಿದ್ದಾರೆ. ಪೀಠೋಪಕರಣ ಗುತ್ತಿಗೆದಾರ ರಾಘವೇಂದ್ರ ಎಂಬುವವರ ಫೈಲ್ ಕ್ಲಿಯರ್​ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದರು.

ಬೆಂಗಳೂರು ಮಹಾನಗರಪಾಲಿಕೆಯಲ್ಲಿ ರಾಜು ಕೇಸ್ ವರ್ಕರ್ ಆಗಿ ಕೆಲಸ ಮಾಡುತ್ತಿದ್ದರು. ಲಂಚದ ಹಣಕ್ಕೆ ರಾಜು ಬೇಡಿಕೆಯಿಟ್ಟಿದ್ದರು. ಈ ವಿಚಾರವನ್ನು ರಾಘವೇಂದ್ರ ಎಸಿಬಿ ಗಮನಕ್ಕೆ ತಂದಿದ್ದರು. ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಎಸಿಬಿ, ₹ 15 ಸಾವಿರ ಹಣ ಪಡೆಯುತ್ತಿರುವಾಗ ರಾಜು ಅವರನ್ನು ಬಂಧಿಸಿದರು.

ಅನೈತಿಕ ಸಂಬಂಧ: ಯುವಕನ ಕೊಲೆ ಹಲಸೂರು ಠಾಣಾ ವ್ಯಾಪ್ತಿಯ ಮರ್ಫಿ ಟೌನ್​ನಲ್ಲಿ‌ ಸೋಮವಾರ (ಅ.4) ನಡೆದಿದ್ದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯುವಕನ ತಾಯಿ ಮತ್ತು ಆಕೆಯ ಪ್ರಿಯಕರನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಕೊಲೆಯಾದ ಯುವಕನನ್ನು ನಂದು (17) ಎಂದು ಗುರುತಿಸಲಾಗಿದೆ. ಶಕ್ತಿ ಎಂಬಾತನೊಂದಿಗೆ ನಂದು ತಾಯಿ ಗೀತಾ ಅನೈತಿಕ ಸಂಬಂಧ ಹೊಂದಿದ್ದರು. ಈ ಸಂಬಂಧಕ್ಕೆ ನಂದು ವಿರೋಧ ವ್ಯಕ್ತಪಡಿಸಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ನಂದುವಿನ ಹೊಟ್ಟೆ, ಎದೆಗೆ ಚಾಕುವಿನಿಂದ ಇರಿದು ಶಕ್ತಿ ಕೊಲೆ ಮಾಡಿದ್ದ

(ACB Arrests BBMP Case worker when receiving bribe for clearing file)

ಇದನ್ನೂ ಓದಿ: ನೀವು ವಾಸಿಸುವ ಏರಿಯಾದಲ್ಲಿ ಯಾವುದಾದರೂ ಕಟ್ಟಡ ಶಿಥಿಲಗೊಂಡಿದೆಯೇ? ಬಿಬಿಎಂಪಿಯನ್ನು ಸಂಪರ್ಕಿಸಿ

ಇದನ್ನೂ ಓದಿ: Bengaluru: ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರದ ಪ್ರಕರಣಗಳ ಏರಿಕೆ; ಬಿಬಿಎಂಪಿಯಿಂದ ಮನೆ ಮನೆ ಸಮೀಕ್ಷೆ

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ