AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KAS ಅಧಿಕಾರಿ ರಂಗನಾಥ್ ಮನೆ ಮೇಲೆ ಎಸಿಬಿ ದಾಳಿ ಕೇಸ್; ಒಂದೊಂದೇ ಅಕ್ರಮ ವಹಿವಾಟು ಬೆಳಕಿಗೆ

ರಂಗನಾಥ್ ಸಂಬಂಧಿಕರು ಅರುಣಾ ಕೋ ಆಪರೇಟಿವ್ ಬ್ಯಾಂಕ್​ನಲ್ಲಿ ಖಾತೆ ಹೊಂದಿದ್ದಾರೆ. ಸಂಬಂಧಿಕರ ಹೆಸರಲ್ಲಿ 10 ಕೋಟಿಗೂ ಅಧಿಕ ಅವ್ಯವಹಾರ ನಡೆಸಿದ್ದಾರೆ.

KAS ಅಧಿಕಾರಿ ರಂಗನಾಥ್ ಮನೆ ಮೇಲೆ ಎಸಿಬಿ ದಾಳಿ ಕೇಸ್; ಒಂದೊಂದೇ ಅಕ್ರಮ ವಹಿವಾಟು ಬೆಳಕಿಗೆ
ಎಸಿಬಿ ದಾಳಿ
TV9 Web
| Edited By: |

Updated on:Mar 29, 2022 | 8:46 AM

Share

ಬೆಂಗಳೂರು: ಕೆಎಎಸ್ (KAS) ಅಧಿಕಾರಿ ರಂಗನಾಥ್ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ACB) ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ರಂಗನಾಥ್ ಒಂದೊಂದೇ ಅಕ್ರಮ ವಹಿವಾಟು ಬೆಳಕಿಗೆ ಬರುತ್ತಿದೆ. ಅಕ್ರಮ ಹಣದ ವಹಿವಾಟಿಗಾಗಿ ಕೋ ಆಪರೇಟಿವ್ ಬ್ಯಾಂಕ್ ಸ್ಥಾಪಿಸಿರುವ ಶಂಕೆ ಮೂಡಿದೆ. ಒಂದೇ ಕೋ ಆಪರೇಟಿವ್ ಬ್ಯಾಂಕ್​ನಲ್ಲಿ ಕೋಟಿ ಕೋಟಿ ವ್ಯವಹಾರ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ರಂಗನಾಥ್ ಸಂಬಂಧಿಕರು ಅರುಣಾ ಕೋ ಆಪರೇಟಿವ್ ಬ್ಯಾಂಕ್​ನಲ್ಲಿ ಖಾತೆ ಹೊಂದಿದ್ದಾರೆ. ಸಂಬಂಧಿಕರ ಹೆಸರಲ್ಲಿ 10 ಕೋಟಿಗೂ ಅಧಿಕ ಅವ್ಯವಹಾರ ನಡೆಸಿದ್ದಾರೆ ಎಂದು ತಿಳಿದುಬಂದಿದ್ದು, 40 ಎಕರೆ ಜಮೀನು ಮಾರಾಟದಲ್ಲಿ ಅವ್ಯವಹಾರ ಆಗಿರುವ ಅನುಮಾನ ಮೂಡಿದೆ.

ಮಾರ್ಚ್ 25ಕ್ಕೆ ಕೆಎಎಸ್ ಅಧಿಕಾರಿ ರಂಗನಾಥ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ರಂಗನಾಥ್ ಮನೆ ಸೇರಿದಂತೆ ಒಟ್ಟು 5 ಕಡೆ ದಾಳಿ ನಡೆಸಲಾಗಿತ್ತು. ಗೋಮಾಳ ಭೂಮಿಯನ್ನು ಖಾಸಗಿಯವರಿಗೆ ನೀಡಿದ ಆರೋಪದ ಹಿನ್ನೆಲೆ ರಂಗನಾಥ್ ಅವರ ಸ್ವತ್ತಿನ ಮೇಲೆ ದಾಳಿಗೆ ಆದೇಶ ನೀಡಲಾಗಿತ್ತು. ಆದೇಶದ ಮೇರೆಗೆ ಶುಕ್ರವಾರ ಬೆಳಿಗ್ಗೆ ಸುಮಾರು 42 ಎಸಿಬಿ ಅಧಿಕಾರಿಗಳು ಐದು ತಂಡಗಳಾಗಿ ದಾಳಿ ನಡೆಸಿದ್ದರು.

9 ಕಡೆ ದಾಳಿ: ಮಾರ್ಚ್​ 22ಕ್ಕೆ ನಗರದಲ್ಲಿ ಬೆಳ್ಳಂಬೆಳಗ್ಗೆ ಬಿಡಿಎ ಮಧ್ಯವರ್ತಿಗಳು, ಏಜೆಂಟ್‌ಗಳ ಮನೆ ಮೇಲೆ ಎಸಿಬಿ ದಾಳಿ ಮಾಡಿತ್ತು. ಬಿಡಿಎ ಅಧಿಕಾರಿಗಳ ಜತೆ ಸೇರಿಕೊಂಡು ಭ್ರಷ್ಟಾಚಾರ, ಅವ್ಯವಹಾರದಲ್ಲಿ ತೊಡಗಿದ ಆರೋಪ ಕೇಳಿಬಂದ ಹಿನ್ನೆಲೆ ಬೆಂಗಳೂರಿನಲ್ಲಿ ಏಕಕಾಲದಲ್ಲಿ ಬೆಂಗಳೂರಿನಲ್ಲಿ ಎಸಿಬಿ SP ಉಮಾ ಪ್ರಶಾಂತ್ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ, 9 ಕಡೆ ದಾಳಿ ಮಾಡಲಾಗಿತ್ತು. ಚಾಮರಾಜಪೇಟೆಯ ಬಿ.ಎನ್.ರಘು, R.T.ನಗರ ಬಳಿಯ ಮನೋರಾಯನಪಾಳ್ಯದ ಮೋಹನ್, ದೊಮ್ಮಲೂರಿನ ಮನೋಜ್, ಆರ್.ಆರ್.ನಗರದ ತೇಜು, ಮಲ್ಲತ್ತಹಳ್ಳಿಯ ಮುನಿರತ್ನ ಅಲಿಯಾಸ್ ರತ್ನವೇಲು, ಮುದ್ದಿನಪಾಳ್ಯದ ಅಶ್ವತ್ಥ್ ಹಾಗೂ ಚಿಕ್ಕಹನುಮಯ್ಯ, ಚಾಮುಂಡೇಶ್ವರಿನಗರದ ರಾಮು ಮತ್ತು ಚಾಮುಂಡೇಶ್ವರಿ ನಗರ, ಬಿಡಿಎ ಲೇಔಟ್​ನ ಲಕ್ಷ್ಮಣ ಮೇಲೆ ಎಸಿಬಿ ಅಧಿಕಾರಿಗಳಿಂದ ದಾಳಿ ನಡೆಸಿದ್ದರು.

ಇದನ್ನೂ ಓದಿ

ಆರ್ಯನ್​ ಖಾನ್​ ಡ್ರಗ್​ ಕೇಸ್​ ಬಗ್ಗೆ ಕೇಳಿ ಬಂತು ಹೊಸ ಅಪ್​ಡೇಟ್

Horoscope Today- ದಿನ ಭವಿಷ್ಯ; ಕಟಕರಾಶಿಯವರಿಗೆ ಕೆಲಸದ ಸ್ಥಳದಲ್ಲಿ ಹೊಸ ಜವಾಬ್ದಾರಿ ಸಿಗಲಿದೆ

Published On - 8:44 am, Tue, 29 March 22

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ