ಬೆಂಗಳೂರು ಜಿಲ್ಲಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ ಪ್ರಕರಣ: ವಿಚಾರಣೆಗೊಳಪಟ್ಟ ಡಿಸಿ ಮಂಜುನಾಥ್
ಅರ್ಜಿ ಕ್ಲಿಯರ್ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟ ಆರೋಪ ಮಂಜುನಾಥ್ ವಿರುದ್ಧ ಕೇಳಿಬಂದಿತ್ತು. ಮೇ 21ರಂದು ಜಿಲ್ಲಾಧಿಕಾರಿ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ತಂಡವು ದಾಳಿ ನಡೆಸಿತ್ತು.
ಬೆಂಗಳೂರು: ಬೆಂಗಳೂರು ಜಿಲ್ಲಾಧಿಕಾರಿ ಕಚೇರಿ ಮೇಲೆ ಕಳೆದ ತಿಂಗಳು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿ ಮಂಜುನಾಥ್ ಅವರನ್ನು ಸಹ ವಿಚಾರಣೆಗೊಳಪಡಿಸಲಾಗಿದೆ. ಡಿ.ಸಿ. ಕಚೇರಿ ಮೇಲೆ ಎಸಿಬಿ ದಾಳಿ ಪ್ರಕರಣ ಸಂಬಂಧ ಎರಡು ದಿನಗಳ ಹಿಂದೆ ಮಂಜುನಾಥ್ ವಿಚಾರಣೆ ಎದುರಿಸಿದ್ದಾರೆ.
ಅರ್ಜಿ ಕ್ಲಿಯರ್ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟ ಆರೋಪ ಮಂಜುನಾಥ್ ವಿರುದ್ಧ ಕೇಳಿಬಂದಿತ್ತು. ಮೇ 21ರಂದು ಜಿಲ್ಲಾಧಿಕಾರಿ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ತಂಡವು ದಾಳಿ ನಡೆಸಿತ್ತು. ಉಪ ತಹಶೀಲ್ದಾರ್ ಮತ್ತು ಮ್ಯಾನೇಜರ್ ಮಹೇಶ್ ಗುತ್ತಿಗೆ ನೌಕರ ಚೇತನ್ ರನ್ನ ವಶಕ್ಕೆ ಪಡೆದಿತ್ತು. ದೂರುದಾರರಿಂದ 5 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗಲೇ ವಶಕ್ಕೆ ಪಡೆಯಲಾಗಿತ್ತು. ಇದರಲ್ಲಿ ಮಂಜುನಾಥ್ ಪಾತ್ರದ ಕುರಿತು ಆರೋಪ ಕೇಳಿ ಬಂದ ಹಿನ್ನೆಲೆ ಎಸಿಬಿ ತನಿಖಾ ತಂಡವು ಅವರನ್ನು ವಿಚಾರಣೆಗೊಳಪಡಿಸಿದೆ.
ಹಾಸನ ಎಸ್ಪಿ ಸಮ್ಮುಖದಲ್ಲೇ ಕಾನ್ಸ್‌ಟೇಬಲ್ ಮೇಲೆ ಡಿವೈಎಸ್ಪಿ ಹಲ್ಲೆ, ಆಸ್ಪತ್ರೆಗೆ ದಾಖಲು
ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಹಾಸನ ಉಪವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಹಲ್ಲೆಯಿಂದ ಗಾಯಗೊಂಡ ಕಾನ್ಸ್‌ಟೇಬಲ್ ವೇಣುಗೋಪಾಲ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿನ್ನೆ ಹಾಸನ ನಗರ ಠಾಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಭೇಟಿ ವೇಳೆ, ಎಸ್ಪಿ ಸಮ್ಮುಖದಲ್ಲೇ ಹಲ್ಲೆ ನಡೆದಿದೆ.
ಹಾಸನ ಉಪವಿಭಾಗದ ಡಿವೈಎಸ್ಪಿ ಉದಯಭಾಸ್ಕರ್ ವಿರುದ್ದ ಹಲ್ಲೆ ಆರೋಪ ಕೇಳಿಬಂದಿದೆ. ಗುರುವಾರ ಸಂಜೆ ಹಾಸನ ನಗರ ಠಾಣೆಯಲ್ಲಿ ಘಟನೆ ನಡೆದಿದೆ. ಎಸ್ಪಿ ಠಾಣೆ ಭೇಟಿ ಬೇಳೆ, ರೈಫಲ್ ಕ್ಲೀನ್ ಮಾಡಿ ತೋರಿಸಲು ಕಾನ್ಸ್‌ಟೇಬಲ್ ವೇಣುಗೆ ಡಿವೈಎಸ್ಪಿ ಉದಯಭಾಸ್ಕರ್ ಹೇಳಿದ್ದಾರೆ. ಈ ವೇಳೆ ರೈಫಲ್ ಕ್ಲೀನ್ ಹಂತಗಳಲ್ಲಿ ವೇಣುಗೋಪಾಲ್ ತಪ್ಪು ಮಾಡಿದ್ದಾರೆ ಎನ್ನಲಾಗಿದೆ. ಅದಕ್ಕೆ ಡಿವೈಎಸ್ಪಿಯಿಂದ ಹಲ್ಲೆ ನಡೆದಿದೆ. ಹಲ್ಲೆಯಿಂದ ಕುಸಿದು ಬಿದ್ದಿದ್ದ ವೇಣುಗೋಪಾಲ್ ಅವರನ್ನು ತಕ್ಷಣ ಹಾಸನದ ವೈದ್ಯಕೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಹಾಸನ ನಗರ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು ಪೊಲೀಸ್ ಕಾನ್ಸ್‌ಟೇಬಲ್ ವರ್ಗಾವಣೆ ಪ್ರಕ್ರಿಯೆಯಲ್ಲಿ ಬದಲಾವಣೆ; ಒಂದೇ ಸ್ಥಳದಲ್ಲಿ ಕನಿಷ್ಠ ಸೇವಾವಧಿ 6 ವರ್ಷದಿಂದ 5 ವರ್ಷಕ್ಕೆ ಬದಲಾಯಿಸಿ ಆದೇಶ
ಬೆಂಗಳೂರು: ನಗರದಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ವರ್ಗಾವಣೆ(Police Constable Transfer) ಪ್ರಕ್ರಿಯೆಯಲ್ಲಿ ಬದಲಾವಣೆ ತರಲಾಗಿದೆ. ಒಂದೇ ಸ್ಥಳದಲ್ಲಿ ಕನಿಷ್ಠ ಸೇವಾವಧಿ 6 ವರ್ಷದಿಂದ 5 ವರ್ಷಕ್ಕೆ ಬದಲಾಯಿಸಿ ಬೆಂಗಳೂರು ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್ ಆದೇಶ ಹೊರಡಿಸಿದ್ದಾರೆ. ನಗರದ ಕಮಿಷನರೇಟ್ ವ್ಯಾಪ್ತಿಯ ಕಾನ್ಸ್‌ಟೇಬಲ್ ಗಳಿಗೆ ಈ ನೂತನ ಆದೇಶ ಅನ್ವಯವಾಗಲಿದೆ. ಒಂದೇ ಕಡೆಗಳಲ್ಲಿ ಹಲವು ವರ್ಷಗಳಿಂದ ಕಾನ್ಸ್‌ಟೇಬಲ್ಸ್ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆ ಕನಿಷ್ಠ 6 ವರ್ಷದಿಂದ 5 ವರ್ಷಕ್ಕೆ ಕಡಿತಗೊಳಿಸಿ ಆದೇಶ ಹೊರಡಿಸಲಾಗಿದೆ.
Also Read:
ಸರ್ಕಾರಿ ಶಿಕ್ಷಕರ ಮಕ್ಕಳು ಕಡ್ಡಾಯವಾಗಿ ಕನ್ನಡ ಮಾಧ್ಯಮದಲ್ಲಿ ಕಲಿಯಬೇಕು, ಆಗಲೇ ಎಲ್ಲವೂ ಸರಿ ಹೋಗುವುದು -ಕಸಾಪ ರಾಜ್ಯಾಧ್ಯಕ್ಷ ನಾಡೋಜ ಮಹೇಶ ಜೋಶಿ
Also Read:
ಕಂಪ್ಲಿ ಕೋಟೆಯಲ್ಲಿ ಪಿರಂಗಿ ಗುಂಡುಗಳು ಪತ್ತೆ! ಅವು ಆದಿಲ್ ಶಾಹಿ ಕಾಲದ್ದು ಎಂದರು ಇತಿಹಾಸ ಸಂಶೋಧಕ ಕೋಲ್ಕಾರ್
Published On - 5:45 pm, Fri, 24 June 22