ಬಿಬಿಎಂಪಿ ಕೇಂದ್ರ ಕಚೇರಿ, ವಲಯ ಕಚೇರಿಗಳ ಮೇಲೆ ಎಸಿಬಿ ದಾಳಿ; 200ಕ್ಕೂ ಹೆಚ್ಚು ಅಧಿಕಾರಿಗಳಿಂದ ಪರಿಶೀಲನೆ

| Updated By: ganapathi bhat

Updated on: Feb 25, 2022 | 6:54 PM

ಎಲ್ಲರ ಮೊಬೈಲ್ ಕಸಿದು ಒಂದು ಕಡೆ ಹಾಕಿರುವ ಎಸಿಬಿ ಅಧಿಕಾರಿಗಳು ಫೈಲ್​ಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಪಾಲಿಕೆ ಕಚೇರಿಯಲ್ಲಿ ಸಿಕ್ಕ ದಾಖಲೆಗಳ ಬಗ್ಗೆ ಅಧಿಕಾರಿಗಳು ಮಾಹಿತಿ ಟೈಪ್ ಮಾಡುತ್ತಿದ್ದಾರೆ.

ಬಿಬಿಎಂಪಿ ಕೇಂದ್ರ ಕಚೇರಿ, ವಲಯ ಕಚೇರಿಗಳ ಮೇಲೆ ಎಸಿಬಿ ದಾಳಿ; 200ಕ್ಕೂ ಹೆಚ್ಚು ಅಧಿಕಾರಿಗಳಿಂದ ಪರಿಶೀಲನೆ
ಎಸಿಬಿ ದಾಳಿ
Follow us on

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿ, ವಲಯ ಕಚೇರಿಗಳ ಮೇಲೆ ಎಸಿಬಿ ಶುಕ್ರವಾರ ದಾಳಿ ನಡೆಸಿದೆ. ಭ್ರಷ್ಟಾಚಾರ ನಿಗ್ರಹ ದಳದ 200ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ಕೇಂದ್ರ ಕಚೇರಿ ಸೇರಿ 27 ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ದಾಳಿ ಮಾಡಲಾಗಿದೆ. ಸ್ವತಃ ಎಲ್ಲಾ ವಿಭಾಗಗಳಿಗೆ ಭೇಟಿ ನೀಡಿ ಎಸಿಬಿ ಎಸ್​​ಪಿ ಮಾಹಿತಿ ನೀಡಿದ್ದಾರೆ. ಭೇಟಿ ನೀಡಿ ಎಸಿಬಿ ಎಸ್​ಪಿ ಯತೀಶ್ ಚಂದ್ರ ಮಾಹಿತಿ ಪಡೆದಿದ್ದಾರೆ. ದಾಖಲೆಗಳ ಪರಿಶೀಲನೆಗಳ ಜತೆಗೆ ಬಿಬಿಎಂಪಿ ಸಿಬ್ಬಂದಿ ವಿಚಾರಣೆ ನಡೆಸಲಾಗಿದೆ. ಬಿಬಿಎಂಪಿ ಆರೋಗ್ಯ ವಿಭಾಗಕ್ಕೆ ಸಂಬಂಧಿಸಿದ ದಾಖಲೆ ಪರಿಶೀಲನೆ ಮಾಡಲಾಗಿದೆ.

ಮಹಾಲಕ್ಷ್ಮಿ ಲೇಔಟ್​ನ ಬಿಬಿಎಂಪಿ ಕಚೇರಿ ಮೇಲೂ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. 5 ಜನ ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ಎರಡು ಗಂಟೆಗಳಿಂದ ಫೈಲ್ ಗಳನ್ನ ಚೆಕ್ ಮಾಡುತ್ತಿರುವ ಅಧಿಕಾರಿಗಳು, ಟೌನ್ ಪ್ಲಾನಿಂಗ್ ಅಧಿಕಾರಿಗಳೊಂದಿಗೆ ಮಾಹಿತಿ ಪಡೆಯುತ್ತಿದ್ದಾರೆ.

ಬೊಮ್ಮನಹಳ್ಳಿಯಲ್ಲಿ ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ದಾಳಿ ನಡೆಸಿದೆ. ಬೊಮ್ಮನಹಳ್ಳಿ ಬಿಬಿಎಂಪಿ ಕಚೇರಿಯಲ್ಲಿ ಶೋಧ ಕಾರ್ಯ ಮುಂದುವರಿದಿದೆ. ಕಳೆದ‌ ನಾಲ್ಕು ತಾಸಿನಿಂದ ದಾಖಲೆ ಪರಿಶೀಲನೆ ಮಾಡಲಾಗುತ್ತಿದೆ. ಎಡಿಜಿ ಸೀಮಂತ ಕುಮಾರ್ ತಂಡದಿಂದ ಪರಿಶೀಲನೆ ಮಾಡಲಾಗುತ್ತಿದೆ. ಇಬ್ಬರು ಡಿವೈಎಸ್ ಪಿ ಮೂರು ಇನ್ಸೆಕ್ಟರ್ ಗಳಿರುವ ತಂಡ, ಬಿಬಿಎಂಪಿ ಕಚೇರಿ ಗೇಟಿಗೆ ಬೀಗ ಹಾಕಿ ಪರಿಶೀಲನೆ ನಡೆಸುತ್ತಿದೆ.

ಬಿಬಿಎಂಪಿ ಯಲಹಂಕ ವಯಲ ಕಛೇರಿ ಮೇಲೆ ಕೂಡ ಎಸಿಬಿ ದಾಳಿ ಮಾಡಿದೆ. ಹತ್ತು ಜನರ ಎಸಿಬಿ ತಂಡದ ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ಬ್ಯಾಟರಾಯನಪುರದಲ್ಲಿರುವ ಯಲಹಂಕ ವಯಲ ಕಛೇರಿ ಮೇಲೆ ದಾಳಿ ಮಾಡಿದ್ದು ಎರಡು ಟಾಟಾ ಸುಮೋ ಕಾರಗಳಲ್ಲಿ ಬಂದಿರುವ ಎಸಿಬಿ ಅಧಿಕಾರಿಗಳು ಯಲಹಂಕ ಕಛೇರಿಯಲ್ಲಿ ದಾಖಲೆಗಳ ಪರಿಶೀಲನೆಗೆ ಮುಂದಾಗಿದ್ದಾರೆ.

ಎಲ್ಲರ ಮೊಬೈಲ್ ಕಸಿದು ಒಂದು ಕಡೆ ಹಾಕಿರುವ ಎಸಿಬಿ ಅಧಿಕಾರಿಗಳು ಫೈಲ್​ಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಪಾಲಿಕೆ ಕಚೇರಿಯಲ್ಲಿ ಸಿಕ್ಕ ದಾಖಲೆಗಳ ಬಗ್ಗೆ ಅಧಿಕಾರಿಗಳು ಮಾಹಿತಿ ಟೈಪ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ACB raid BBMP: ಬಿಬಿಎಂಪಿ ಕೇಂದ್ರ ಕಚೇರಿ ಮತ್ತು ವಲಯ ಕಚೇರಿಗಳ ಮೇಲೆ ಎಸಿಬಿ ಬೃಹತ್​ ದಾಳಿ

ಇದನ್ನೂ ಓದಿ: Crime Updates: ತಲಾ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಬಿಬಿಎಂಪಿ ಸಿಬ್ಬಂದಿ, ಬೆಸ್ಕಾಂ ಅಧಿಕಾರಿ ಎಸಿಬಿ ಬಲೆಗೆ