ವರುಣನ ಅಬ್ಬರದ ನಡುವೆಯೇ ಬಿಡಿಎ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ, ಡಿಎಸ್ ನವೀನ್ ಜೋಸೆಫ್ ಕಚೇರಿಯಲ್ಲಿ ಹಣ ಜಪ್ತಿ

ಎಸಿಬಿ ಎಸ್ಪಿಗಳಾದ ಅಬ್ದುಲ್ ಅಹದ್, ಉಮಾ ಪ್ರಶಾಂತ್, ಯತೀಶ್ ಚಂದ್ರ ನೇತೃತ್ವದಲ್ಲಿ ಬಿಡಿಎ ಕಚೇರಿ ಮೇಲೆ ದಾಳಿ‌ ನಡೆದಿದ್ದು ಯಾವೊಬ್ಬ ಅಧಿಕಾರಿಯೂ ಕಚೇರಿಯಿಂದ ಹೊರ ಹೋಗದಂತೆ ಗೇಟ್ ಬಳಿ ಸಿಬ್ಬಂದಿಯನ್ನ ಕಾವಲಿಗಿಟ್ಟು ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಡಿಎ ಕಚೇರಿಯ ಮುಖ್ಯದ್ವಾರ ಬಂದ್ ಮಾಡಲಾಗಿದೆ.

ವರುಣನ ಅಬ್ಬರದ ನಡುವೆಯೇ ಬಿಡಿಎ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ, ಡಿಎಸ್ ನವೀನ್ ಜೋಸೆಫ್ ಕಚೇರಿಯಲ್ಲಿ ಹಣ ಜಪ್ತಿ
ಬಿಡಿಎ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು.
Follow us
TV9 Web
| Updated By: ಆಯೇಷಾ ಬಾನು

Updated on:Nov 19, 2021 | 8:42 PM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣನ ಅಬ್ಬರದ ನಡುವೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿ(BDA) ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ACB) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಡಿಎ ಕಚೇರಿ ಮುಖ್ಯದ್ವಾರ ಬಂದ್ ಮಾಡಿ ಎಸಿಬಿ ಪರಿಶೀಲನೆ ನಡೆಸುತ್ತಿದೆ. 13 ವಾಹನಗಳಲ್ಲಿ ಬಂದಿರುವ 60ಕ್ಕೂ ಹೆಚ್ಚು ಅಧಿಕಾರಿಗಳು ನಾಲ್ಕು ತಂಡಗಳಾಗಿ ದಾಳಿ ಮಾಡಿದ್ದಾರೆ.

ಎಸಿಬಿ ಎಸ್ಪಿಗಳಾದ ಅಬ್ದುಲ್ ಅಹದ್, ಉಮಾ ಪ್ರಶಾಂತ್, ಯತೀಶ್ ಚಂದ್ರ ನೇತೃತ್ವದಲ್ಲಿ ಬಿಡಿಎ ಕಚೇರಿ ಮೇಲೆ ದಾಳಿ‌ ನಡೆದಿದ್ದು ಯಾವೊಬ್ಬ ಅಧಿಕಾರಿಯೂ ಕಚೇರಿಯಿಂದ ಹೊರ ಹೋಗದಂತೆ ಗೇಟ್ ಬಳಿ ಸಿಬ್ಬಂದಿಯನ್ನ ಕಾವಲಿಗಿಟ್ಟು ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಡಿಎ ಕಚೇರಿಯ ಮುಖ್ಯದ್ವಾರ ಬಂದ್ ಮಾಡಲಾಗಿದೆ. ಕಚೇರಿಯಿಂದ ಹೊರಗೆ ಹೋಗುವ ಪ್ರತಿಯೊಬ್ಬರ ಪರಿಶೀಲನೆ ನಡೆಸಲಾಗುತ್ತಿದೆ.

ಏಕಾಏಕಿ ದಾಳಿ ನಡೆದ ಹಿನ್ನೆಲೆ ಎಫ್ಡಿಎ, ಎಸ್ಡಿಎ, ಡಿಎಸ್ ಗಳು ಹಾಗೂ ಇತರ ಅಧಿಕಾರಿಗಳು ಸೇರಿದಂತೆ ನೌಕರರು ಗಾಬರಿಗೊಂಡಿದ್ದಾರೆ. ದಾಳಿ ನಡೆಸಿದ ಬೆನ್ನಲ್ಲೇ ಮೊಬೈಲ್ ಮತ್ತು ವ್ಯಾಲೆಟ್ ವಶಪಡಿಸಿಕೊಳ್ಳಲಾಗಿದೆ. ನೌಕರರ ಮೊಬೈಲ್ ಸ್ವಿಚ್ ಅಫ್ ಮಾಡಿಸಲಾಗಿದೆ. ಬಳಿಕ ಕಚೇರಿಯ ಒಳಗಿದ್ದ ಎಲ್ಲಾ ಕಡತಗಳನ್ನ ಒಂದು ಕಡೆ ಇಟ್ಟು ಪರಿಶೀಲನೆ ನಡೆಸಲಾಗುತ್ತಿದೆ.

ಬಿಡಿಎ ವಿರುದ್ಧ ವ್ಯಾಪಕ ದೂರು ಫಲಾನುಭವಿಗಳಿಗೆ ಸೈಟ್ ಹಂಚಿಕೆ, ಕಾರ್ನರ್ ಸೈಟ್ ಹಂಚಿಕೆ, ಅಲಾಟ್ ಆದ ಸೈಟ್ ದಾಖಲೆ ನೀಡದೆ ಲಂಚಕ್ಕಾಗಿ ಬೇಡಿಕೆ, ನಿವೇಶನ, ಫ್ಲ್ಯಾಟ್ ಹಂಚಿಕೆಯಲ್ಲೂ ಅವ್ಯವಹಾರ ಆರೋಪ, ಬ್ರೋಕರ್​ಗಳ ಮೂಲಕ ಅಧಿಕಾರಿಗಳಿಂದ ಲಂಚಕ್ಕೆ ಬೇಡಿಕೆ ಸೇರಿ ಒಸಿ, ಅನುಮತಿ ಪತ್ರ, ಇ-ಸಿಡಿ, ಸರ್ಟಿಫಿಕೆಟ್​ಗಾಗಿ ಲಂಚ ನೀಡದಿದ್ದರೆ ಕೆಲಸ ಮಾಡಿಕೊಡದೆ ಅಲೆಸುತ್ತಿದ್ದರು ಎಂದು ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರದ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ವ್ಯಾಪಕ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ. ಭೂಸ್ವಾಧೀನ ವಿಭಾಗದ ಡಿಎಸ್, ಎಸಿಗಳ ಕಚೇರಿ, ಡಿಎಸ್ 1, 2, 3, 4 ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದೆ.

ಎಸಿಬಿಯ ಐವರು ಡಿವೈಎಸ್ಪಿ, 12 ಇನ್ಸ್ಪೆಕ್ಟರ್ ಸೇರಿ 50ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಕಡತ ಪರಿಶೀಲನೆಯಲ್ಲಿ ತೊಡಗಿಕೊಂಡಿದೆ. ಬಿಡಿಎ ಡಿಎಸ್ ನವೀನ್ ಜೋಸೆಫ್ ಕಚೇರಿಯಲ್ಲಿ ಹಣ ಜಪ್ತಿ ಮಾಡಲಾಗಿದೆ. ಬಿಡಿಎ ಕಚೇರಿಯ 50ಕ್ಕೂ ಹೆಚ್ಚು ಕೊಠಡಿಗಳಲ್ಲಿ ಪರಿಶೀಲನೆ ಮುಂದುವರೆದಿದೆ. ಬಿಡಿಎ ಏಜೆಂಟ್ಸ್ ಬ್ಯಾಗ್, ಬ್ರೀಫ್ಕೇಸ್ ಸೇರಿದಂತೆ ಬಿಡಿಎ ಕಚೇರಿಯ ಇಂಚಿಂಚೂ ಕೂಡ ಅಧಿಕಾರಿಗಳು ಶೋಧಿಸ್ತಿದ್ದಾರೆ.

ಸದ್ಯ ಪರಿಶೀಲನೆ ವೇಳೆ ಕೆಲ ಪ್ರಾಜೆಕ್ಟ್​ಗಳ ಮಹತ್ವದ ಕಡತ ನಾಪತ್ತೆಯಾಗಿದೆ. ಬಿಡಿಎ ಕಚೇರಿಯಲ್ಲಿ ನಾಳೆಯೂ ತನಿಖೆ ಮುಂದುವರೆಯುವ ಸಾಧ್ಯತೆ ಇದೆ. ಎಸಿಬಿ ಅಧಿಕಾರಿಗಳು ದಾಖಲೆ ವಶಕ್ಕೆ ಪಡೆದು ಕಚೇರಿ ಲಾಕ್ ಮಾಡಲಿದ್ದಾರೆ.

ಇದನ್ನೂ ಓದಿ: ಅಪರೂಪ: ಸರ್ಕಾರಿ ಕೆಲಸಕ್ಕಾಗಿ ಲಂಚ ನೀಡಿದ್ದ ಮೂವರ ವಿರುದ್ಧ ಎಸಿಬಿಯಲ್ಲಿ ಎಫ್ಐಆರ್ ದಾಖಲಾಯ್ತು!

Published On - 7:01 pm, Fri, 19 November 21

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ