ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿ ಮತ್ತು ವಲಯ ಕಚೇರಿಗಳ ಮೇಲೆ ಎಸಿಬಿ ದಾಳಿ ನಡೆಸಿದೆ. ಬಿಡಿಎ ಮೇಲಿನ ಇತ್ತೀಚಿನ ದಾಳಿ ಬೆನ್ನಲ್ಲೇ ಇದೀಗ ಬಿಬಿಎಂಪಿ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ 200ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿದ್ದಾರೆ (ACB raid BBMP). BBMPಯಲ್ಲಿ ಭ್ರಷ್ಟಾಚಾರದ ಹಲವಾರು ದೂರುಗಳು ಬಂದಿದ್ದರ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಕಛೇರಿ ಹಾಗೂ ನಗರದ ಎಲ್ಲಾ ಬಿಬಿಎಂಪಿ ವಲಯ ಕಚೇರಿಗಳ ಮೇಲೆ ಎಸಿಬಿ ದಾಳಿ ನಡೆಸಿದೆ. ನಾನಾ ಬಿಬಿಎಂಪಿ ಮುಖ್ಯ ಕಛೇರಿಗಳಲ್ಲಿ ಎಸಿಬಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮುಖ್ಯ ಕಚೇರಿ ಸೇರಿ 27 ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ದಾಳಿ ನಡೆದಿದೆ.
ಸಾರ್ವಜನಿಕರ ಸೋಗಿನಲ್ಲಿ ಭರ್ಜರಿ ಬೇಟೆಯಲ್ಲಿ ತೊಡಗಿದ ಎಸಿಬಿ ಅಧಿಕಾರಿಗಳು:
ಸಾರ್ವಜನಿಕರ ಸೋಗಿನಲ್ಲಿ ಬಿಬಿಎಂಪಿ ಕಚೇರಿಗೆ ನುಗ್ಗಿ ಎಸಿಬಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ರಾಜಕಾಲುವೆ, ಜಾಹೀರಾತು, ಆರೋಗ್ಯ ವಿಭಾಗ ಸೇರಿದಂತೆ ಇತರೆ ವಿಭಾಗಗಳ ಮೇಲೆ ದಾಳಿ ನಡೆಸಲಾಗಿದೆ. ಬಿಬಿಎಂಪಿಯ ಮುಖ್ಯ ಆರೋಗ್ಯಾಧಿಕಾರಿ ಕಚೇರಿ ಮೇಲೂ ದಾಳಿ ನಡೆದಿದೆ.
ಎಸಿಬಿ ಮುಖ್ಯಸ್ಥ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ನಾಲ್ವರು ಎಸ್ಪಿಗಳು, ಡಿವೈಎಸ್ಪಿಗಳು, ಇನ್ಸ್ಪೆಕ್ಟರ್ಗಳು ಸೇರಿದಂತೆ 200ಕ್ಕೂ ಹೆಚ್ಚು ಸಿಬ್ಬಂದಿ ಸಾರ್ವಜನಿಕರ ಸೋಗಿನಲ್ಲಿ ಬಿಬಿಎಂಪಿ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.
ಬಿಬಿಎಂಪಿ ಅಧಿಕಾರಿಗಳಿಗೆ ಎಸಿಬಿ ಶಾಕ್!
ಬಿಬಿಎಂಪಿ ನಗರ ಯೋಜನೆಯ ಉತ್ತರ ಮತ್ತು ದಕ್ಷಿಣ ವಿಭಾಗದ ಕಚೇರಿಗಳು ಸೇರಿದಂತೆ 25ಕ್ಕೂ ಅಧಿಕ ಕಡೆಗಳಲ್ಲಿ ACB ಅಧಿಕಾರಿಗಳಿಂದ ಏಕಕಾಲದಲ್ಲಿ ದಾಳಿ ನಡೆದಿದೆ. ಟೌನ್ ಪ್ಲಾನಿಂಗ್ ವಿಭಾಗದ ಮೇ ಸಾಕಷ್ಟು ಆರೋಪಗಳು ಕೇಳಿ ಬಂದಿದ್ದವು. ಮಹಾಲಕ್ಷ್ಮಿ ಲೇಔಟ್ ನ ಬಿಬಿಎಂಪಿ ಕಚೇರಿ ಮೇಲೆ ಎಸಿಬಿ ಪೊಲೀಸರಿಂದ ದಾಳಿ ನಡೆದಿದೆ.
BBMP ಅಧಿಕಾರಿಗಳ ವಿರುದ್ಧ ಬೃಹತ್ ಭ್ರಷ್ಟಾಚಾರ ಆರೋಪ- ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲು ಎಂದ ಎಸಿಬಿ:
ಬ್ರೋಕರ್‌ಗಳ ಜತೆ ಶಾಮೀಲಾಗಿ ಸರ್ಕಾರಿ ಆಸ್ತಿ ಗೋಲ್‌ಮಾಲ್ ನಡೆದಿದೆ. BBMP ಅಧಿಕಾರಿಗಳ ವಿರುದ್ಧ ಬೃಹತ್ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಹಾಗಾಗಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಎಸಿಬಿ ದಾಳಿ ನಡೆಸಲಾಗಿದೆ. ಬಿಬಿಎಂಪಿ ಕಚೇರಿಗಳಲ್ಲಿನ ಫೈಲ್ಸ್ ಮತ್ತು ದಾಖಲೆಗಳ ತೀವ್ರ ಶೋಧ ನಡೆದಿದೆ ಎಂದು BBMP ಮೇಲಿನ ಬಿಗ್ ರೇಡ್ ಬಗ್ಗೆ ಎಸಿಬಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ:
ಸಮಾಧಾನಕರ ಸಂಗತಿ: ಬಂಕರ್ನಲ್ಲಿದ್ದ ಕನ್ನಡಿಗರು ಸೇಫ್-ಸೇಫ್, ಅಲ್ಲಿಯೇ ವಿದ್ಯಾಭ್ಯಾಸ ಮುಂದುವರಿಸುವ ಆಶಯ, ಆತ್ಮವಿಶ್ವಾಸ!
ಇದನ್ನೂ ಓದಿ:
ದೇವಾತನಯಂ ಸಮ್ಮೇಳನಕ್ಕೆ ಚಾಲನೆ: ವಿಜಯನಗರ ಸಾಮ್ರಾಜ್ಯ ದಲ್ಲಿ ಹುಟ್ಟಿದ ನಾವೆಲ್ಲರೂ ಹೆಮ್ಮೆಪಡಬೇಕು -ಸಚಿವ ಆನಂದ್ ಸಿಂಗ್
Published On - 12:52 pm, Fri, 25 February 22