ಅಪಾರ್ಟ್ಮೆಂಟ್ಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಲಂಚ ಪಡೆಯುತ್ತಿದ್ದ ಬೆಸ್ಕಾಂ ಎಇ ಹನುಮಂತಪ್ಪ ಎಸಿಬಿ ಬಲೆಗೆ
ಅಪಾರ್ಟ್ಮೆಂಟ್ಗೆ ವಿದ್ಯುತ್ ಸಂಪರ್ಕ ಕಲ್ಪಿಸಲು 2021ರ ಅಕ್ಟೋಬರ್ನಲ್ಲಿ ದೂರುದಾರ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲು ದೂರುದಾರರ ಬಳಿ ಎಇ ಹನುಮಂತಪ್ಪ 3 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.
ಬೆಂಗಳೂರು: ಬೆಂಗಳೂರಿನಲ್ಲಿ ಬೆಸ್ಕಾಂ(BESCOM) ಎಇ ಹನುಮಂತಪ್ಪ ಎಸಿಬಿ(ACB) ಬಲೆಗೆ ಬಿದ್ದಿದ್ದಾರೆ. ಬೆನ್ಸನ್ಟೌನ್ನ ಬೆಸ್ಕಾಂ ಕಚೇರಿಯಲ್ಲಿ 1,30,000 ರೂಪಾಯಿ ಲಂಚ(Bribe) ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳು ಎಇ ಹನುಮಂತಪ್ಪ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಅಪಾರ್ಟ್ಮೆಂಟ್ಗೆ ವಿದ್ಯುತ್ ಸಂಪರ್ಕ ಕಲ್ಪಿಸಲು 2021ರ ಅಕ್ಟೋಬರ್ನಲ್ಲಿ ದೂರುದಾರ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲು ದೂರುದಾರರ ಬಳಿ ಎಇ ಹನುಮಂತಪ್ಪ 3 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ನಂತರ 1.60 ಲಕ್ಷಕ್ಕೆ ಡೀಲ್ ಕುದುರಿಸಿದ್ದರು. 1.60 ಲಕ್ಷದ ಪೈಕಿ 1.30 ಲಕ್ಷ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ದೂರುದಾರರ ಮಾಹಿತಿ ಆಧರಿಸಿ ದಾಳಿ ನಡೆಸಿದ ಎಸಿಬಿ ಪೊಲೀಸರು ಬೆಸ್ಕಾಂ ಎಇ ಹನುಮಂತಪ್ಪನನ್ನು ವಶಕ್ಕೆ ಪಡೆದಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕೇಸ್ ದಾಖಲಿಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವಿವಾದಾತ್ಮಕ ಪೋಸ್ಟ್ ಹಾಕುವ ಮುನ್ನ ಎಚ್ಚರ: ಪೊಲೀಸ್ ಇಲಾಖೆಯಿಂದ ಸೂಕ್ತ ಕ್ರಮ
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮ ಪೋಸ್ಟ್ ಹಾಕಿದರೇ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ. “ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಪ್ರಚೋದನಕಾರಿ ಪೋಸ್ಟ್ ಮಾಡುತ್ತಿರುವುದನ್ನು ಗಮನಿಸಲಾಗಿದೆ. ನಾವು ಅಂತಹ ಪೋಸ್ಟ್‌ಗಳನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಸೂಕ್ತ ಕಾನೂನು ಕ್ರಮವನ್ನು ಪ್ರಾರಂಭಿಸುತ್ತೇವೆ. ಪ್ರಚೋದನಕಾರಿ ಭಾಷಣ ಮಾಡಿದ ಕಾಳಿ ಸ್ವಾಮೀಜಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ” ಎಂದು ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.
Published On - 6:03 pm, Sun, 31 July 22