AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಎರಡು ಬೈಕ್​ ಮಧ್ಯೆ ಡಿಕ್ಕಿ, ಬಿಎಸ್​ಎಫ್​ ಸಿಬ್ಬಂದಿ ಸೇರಿ ಇಬ್ಬರು ದುರ್ಮರಣ

ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಅಪಘಾತ ನಡೆದಿದೆ.

ಬೆಂಗಳೂರಿನಲ್ಲಿ ಎರಡು ಬೈಕ್​ ಮಧ್ಯೆ ಡಿಕ್ಕಿ, ಬಿಎಸ್​ಎಫ್​ ಸಿಬ್ಬಂದಿ ಸೇರಿ ಇಬ್ಬರು ದುರ್ಮರಣ
ಅಪಘಾತ
Follow us
Prajwal Kumar NY
| Updated By: ವಿವೇಕ ಬಿರಾದಾರ

Updated on:Oct 29, 2023 | 10:31 AM

ಬೆಂಗಳೂರು ಅ.29: ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ (Accident) ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರ ಪೊಲೀಸ್ (Police) ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ (ಅ.28)  ರಾತ್ರಿ 11 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ಬಿಎಸ್​ಎಫ್ (BSF) ಉದ್ಯೋಗಿ ಸುಧಾಕರ್ ಮತ್ತು ಯೂಟ್ಯೂಬರ್ ಗಣಿ ಮೃತ ದುರ್ದೈವಿಗಳು. ಸುಧಾಕರ್ ರಾಯಲ್ ಎನ್ಫೀಲ್ಡ್ ಬೈಕ್​ನಲ್ಲಿ ​ವೇಗವಾಗಿ ಬಿಎಸ್​​ಎಫ್ ಕಾಂಪೌಂಡ್​​ನಿಂದ ಹೊರಗೆ ಬರುತ್ತಿದ್ದರು. ಈ ವೇಳೆ ಎದುರಿಗೆ ಬರುತ್ತಿದ್ದ ಗಣಿ ಎಂಬುವರು ಬೈಕ್​​ನಿಂದ ಸುಧಾಕರ್​ ಅವರ ಬೈಕ್​​​ಗೆ ಗುದ್ದಿದ್ದಾರೆ.

ಅಪಘಾತದಲ್ಲಿ ಸುಧಾಕರ್​​ ಸ್ಥಳದಲ್ಲೇ ಮೃಪಟ್ಟಿದ್ದಾರೆ. ಅವಘಡದಲ್ಲಿ ಗಾಯಗೊಂಡಿದ್ದ ಗಣಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮೃತ ಸುಧಾಕರ್​​​ ನಿವೃತ್ತ ಯೋಧ ನಾಗಪ್ಪನ್ ಅವರ ಪುತ್ರರಾಗಿದ್ದು, ಬಿಎಸ್​ಎಫ್ ಕಚೇರಿಯಲ್ಲಿ ಹೆಡ್​ಕುಕ್ ಆಗಿ ಕರ್ತವ್ಯ ನಿರ್ವಹಿಸುತಿದ್ದರು. ಬಿಎಸ್​ಎಫ್​ನಲ್ಲಿ ಕಳೆದ 22 ವರ್ಷಗಳಿಂದ ಕರ್ತವ್ಯ ನಿರ್ವಹಿಸುತಿದ್ದರು. ಸುಧಾಕರ್ ಮೂಲತಃ ತಮಿಳುನಾಡಿನ ವೆಲ್ಲೂರಿನವರಾಗಿದ್ದಾರೆ. ಸುಧಾಕರ್​ ಪತ್ನಿ, ಮಕ್ಕಳು ಹಾಗೂ ತಂದೆ ವೆಲ್ಲೂರಿನಲ್ಲಿ ವಾಸವಾಗಿದ್ದಾರೆ. ಸುಧಾಕರ್ ರೂಂ ಮಾಡಿಕೊಂಡು ವಿನಾಯಕ ನಗರದಲ್ಲಿ ವಾಸವಾಗಿದ್ದರು.

ಪ್ರಕರಣ ಸಂಬಂಧ ಗಣಿ ಅಲಿಯಾಸ್ ಗಿರೀಶ್ ವಿರುದ್ಧ ಯಲಹಂಕ ಸಂಚಾರಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ದೂರು ದಾಖಲಾಗಿದೆ. ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:10 am, Sun, 29 October 23

VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್