ಕನ್ನಡಿಗರ ಮೇಲೆ ಹಲ್ಲೆ ಮಾಡುವಂತೆ ತಮಿಳರಿಗೆ ಹೇಳಿದ್ರಾ ಮುನಿರತ್ನ? ಪೊಲೀಸ್​ ಆಯುಕ್ತರಿಗೆ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ದೂರು

ರಾಜ್ಯ ವಿಧಾನಸಭೆ ಚುನಾವಣೆಗೆ ಈಗಾಗಲೇ ದಿನಾಂಕ ನಿಗದಿಯಾಗಿದೆ. ಹೇಗಾದರೂ ಮಾಡಿ ಆಡಳಿತ ಚುಕ್ಕಾಣಿ ಹಿಡಿಯಲು ಉಭಯ ಪಕ್ಷಗಳು ಹರಸಾಹಸ ನಡೆಸುತ್ತಿದೆ. ಇದೀಗ ರಾಜರಾಜೇಶ್ವರಿ ನಗರದ ಸಚಿವ ಮುನಿರತ್ನ ವಿರುದ್ಧ ಪ್ರಚೋದನಕಾರಿ ಹೇಳಿಕೆ ಆರೋಪಿಸಿ, ಕಾಂಗ್ರೆಸ್​ ನಾಯಕಿ ಕುಸುಮಾ ಅವರು ಬೆಂಗಳೂರು ನಗರ ಪೊಲೀಸ್​ ಆಯುಕ್ತರಿಗೆ ದೂರು ನೀಡಿದ್ದಾರೆ.

ಕನ್ನಡಿಗರ ಮೇಲೆ ಹಲ್ಲೆ ಮಾಡುವಂತೆ ತಮಿಳರಿಗೆ ಹೇಳಿದ್ರಾ ಮುನಿರತ್ನ? ಪೊಲೀಸ್​ ಆಯುಕ್ತರಿಗೆ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ದೂರು
ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ,ಸಚಿವ ಮುನಿರತ್ನ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Mar 31, 2023 | 12:32 PM

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ(Karnataka Assembly Election) ಈಗಾಗಲೇ ದಿನಾಂಕ ನಿಗದಿಯಾಗಿದೆ. ಹೇಗಾದರೂ ಮಾಡಿ ಆಡಳಿತ ಚುಕ್ಕಾಣಿ ಹಿಡಿಯಲು ಉಭಯ ಪಕ್ಷಗಳು ಹರಸಾಹಸ ನಡೆಸುತ್ತಿದೆ. ಇದೀಗ ರಾಜರಾಜೇಶ್ವರಿ ನಗರದ ಸಚಿವ ಮುನಿರತ್ನ(Munirathna) ವಿರುದ್ಧ ಪ್ರಚೋದನಕಾರಿ ಹೇಳಿಕೆ ಆರೋಪಿಸಿ, ಕಾಂಗ್ರೆಸ್​ ನಾಯಕಿ ಕುಸುಮಾ ಅವರು ಬೆಂಗಳೂರು ನಗರ ಪೊಲೀಸ್​ ಆಯುಕ್ತರಿಗೆ ದೂರು ನೀಡಿದ್ದಾರೆ. ಹೌದು ಸಚಿವ ಮುನಿರತ್ನ ಅವರು ಸಾರ್ವಜನಿಕ ಸಭೆಯಲ್ಲಿ ತಮಿಳಿನಲ್ಲಿ ಮಾತನಾಡುತ್ತ ‘ತಮಿಳು ಭಾಷಿಕರು ಕನ್ನಡ ಭಾಷಿಕರ ಮೇಲೆ ಹಲ್ಲೆ ಮಾಡುವಂತೆ’ ಸೂಚನೆ ನೀಡಿರುವ ಹೇಳಿಕೆ ಸಮೇತ ದೂರು ನೀಡಿದ್ದಾರೆ. ಈ ಮೂಲಕ ತಮಿಳು ಮತ್ತು ಕನ್ನಡಿಗರ ನಡುವೆ ಸಂಘರ್ಷಕ್ಕೆ ಎಡೆಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನು ಅಮೆರಿಕದ ಮೆಸ್ಸಾಚುಸೆಟ್ಸ್ ವಿಶ್ವವಿದ್ಯಾಲಯದಲ್ಲಿ, ಮಾಹಿತಿ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ (2018 ರಲ್ಲಿ) ಗಳಿಸಿರುವ ಕುಸುಮಾ.ಎಚ್,  ಕಳೆದ ಬಾರಿ ಅಂದರೆ ನವೆಂಬರ್ 03, 2020ಕ್ಕೆ ನಡೆದ ಆರ್.ಆರ್.ನಗರದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಬಳಿಕ ಬಿಜೆಪಿಯ ಎನ್. ಮುನಿರತ್ನ ಅವರ ವಿರುದ್ಧ ಸೋಲು ಕಂಡಿದ್ದರು. ಈಗ ಎರಡನೇ ಬಾರಿಗೆ ಆರ್.ಆರ್.ನಗರದಲ್ಲಿ ತಮ್ಮ ರಾಜಕೀಯ ಭವಿಷ್ಯ ಬರೆಯಲು ಮುಂದಾಗಿದ್ದು, ಇದೀಗ ಮತ್ತೊಮ್ಮೆ ಮುನಿರತ್ನ ವಿರುದ್ಧ ಅಖಾಡಕ್ಕಿಳಿದಿದ್ದಾರೆ.

ಇದನ್ನೂ ಓದಿ:K. Manju: ರಾಜಕೀಯ ಪ್ರವೇಶಕ್ಕೆ ಸಜ್ಜಾದ ನಿರ್ಮಾಪಕ ಕೆ. ಮಂಜು; ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ?

ರಾಜಕೀಯದ ಜೊತೆಗೆ ಸಮಾಜ ಸೇವೆ, ಬರವಣಿಗೆಯಂತಹ ಹವ್ಯಾಸಗಳನ್ನು ಬೆಳೆಸಿಕೊಂಡಿರುವ ಕುಸುಮಾ ಅವರು  ಈಗಾಗಲೇ  ಕಾಂಗ್ರೆಸ್ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಣೆಯಾಗಿದೆ.  ಕಾಂಗ್ರೆಸ್​ ತನ್ನ ಮೊದಲ ಪಟ್ಟಿಯಲ್ಲೇ ಕುಸುಮಾ ಅವರ ಹೆಸರನ್ನು ಪ್ರಕಟಿಸಿದೆ. ಹೀಗಿದ್ದು ಹೇಗಾದರೂ ಮಾಡಿ ಈ ಬಾರಿ ಗೆಲುವು ಸಾಧಿಸಲು ಶಥಾಉ ಗತಾಯ ಪ್ರಯತ್ನ ಮಾಡುತ್ತಿದ್ದಾರೆ. ಚುನಾವಣೆ ಬಳಿಕ ಗೆಲುವು ಯಾರಿಗೆ ಒಲಿಯುತ್ತೆ ಕಾದುನೋಡಬೇಕಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:21 pm, Fri, 31 March 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್