ಮಗಳ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪ ಸಾಬೀತು; ಅಪರಾಧಿ ತಂದೆಗೆ 20 ವರ್ಷ ಜೈಲು ಶಿಕ್ಷೆ, ₹10 ಸಾವಿರ ದಂಡ
ತಂದೆಯೇ ಅತ್ಯಾಚಾರ ನಡೆಸಿ ಆಕೆಯನ್ನ ಗರ್ಭವತಿಯನ್ನಾಗಿ ಮಾಡಿದ್ದ ಆರೋಪದ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸರು ಪೋಕ್ಸೋ ಕಾಯ್ದೆ(Pocso Act)ಯಡಿ ಪ್ರಕರಣ ದಾಖಲಿಸಿದ್ದರು. ಅಂದಿನ ಪೊಲೀಸ್ ಇನ್ಸ್ಪೆಕ್ಟರ್ ಬಿ.ಎನ್ ಲೋಹಿತ್ ತನಿಖೆ ನಡೆಸಿ ಐದನೆ ಅಧಿಕ ಮತ್ತು ಸತ್ರ ನ್ಯಾಯಾಲಯ (ಪೋಕ್ಸೋ) ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು.
ಬೆಂಗಳೂರು, ಅ.20: 2022 ರಲ್ಲಿ ಮಗಳ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪ ಸಾಭೀತಾದ ಹಿನ್ನಲೆ ಆರೋಪಿ ತಂದೆಗೆ 20 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡವನ್ನು ವಿಧಿಸಿ ನ್ಯಾಯಾಧೀಶರಾದ ಶ್ರೀಮತಿ ಎನ್ ನರಸಮ್ಮ ಅವರು ಆದೇಶಿಸಿದ್ದಾರೆ. ಅತ್ಯಾಚಾರ ನಡೆಸಿ ಆಕೆಯನ್ನ ಗರ್ಭವತಿಯನ್ನಾಗಿ ಮಾಡಿದ್ದ ಆರೋಪದ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸರು ಪೋಕ್ಸೋ ಕಾಯ್ದೆ(Pocso Act)ಯಡಿ ಪ್ರಕರಣ ದಾಖಲಿಸಿದ್ದರು. ಅಂದಿನ ಪೊಲೀಸ್ ಇನ್ಸ್ಪೆಕ್ಟರ್ ಬಿ.ಎನ್ ಲೋಹಿತ್ ತನಿಖೆ ನಡೆಸಿ ಐದನೆ ಅಧಿಕ ಮತ್ತು ಸತ್ರ ನ್ಯಾಯಾಲಯ (ಪೋಕ್ಸೋ) ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು. ಇದೀಗ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 10 ಸಾವಿರ ದಂಡ ವಿಧಿಸಿದ್ದು, ನೊಂದ ಬಾಲಕಿಗೆ ಜಿಲ್ಲಾ ಮತ್ತು ಕಾನೂನು ಪ್ರಾಧಿಕಾರದಿಂದ ಏಳು ಲಕ್ಷ ಪರಿಹಾರ ನೀಡುವಂತೆ ಶಿಫಾರಸ್ಸು ಮಾಡಲಾಗಿದೆ.
ಇನ್ನು ನಿನ್ನೆಯಷ್ಟೇ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಳು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿತ್ತು. ಕೂಡಲೇ ಎಚ್ಚೆತ್ತ ಸಾರ್ವಜನಿಕರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ತುಮಕೂರಿನ ಶಾಂತಿನಗರದ ಗೂಡ್ ಶೆಡ್ ಕಾಲೋನಿ ನಿವಾಸಿಯಾಗಿರುವ ಹಾಗೂ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ಷಫಿ ಎಂಬಾತ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಇನ್ನು ಇತನ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದರು.
ಇದನ್ನೂ ಓದಿ:ಕೊಪ್ಪಳದಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ: ಓರ್ವ ಆರೋಪಿಯ ಬಂಧನ; ಮೂವರಿಗಾಗಿ ಶೋಧ
ಬೆಂಗಳೂರಿನಲ್ಲಿ ಮಹಿಳೆಯ ಕೈ ಕತ್ತರಿಸಿದ್ದ ರೌಡಿಶೀಟರ್ ಬಂಧನ
ಬೆಂಗಳೂರು: ನಗರದಲ್ಲಿ ಅ.15ರಂದು ಮಹಿಳೆಯ ಕೈ ಕತ್ತರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರೌಡಿಶೀಟರ್ ಅಭಿ ಅಲಿಯಾಸ್ ಅಮೂಲ್ ಅವರನ್ನು ಬಂಧನ ಮಾಡಲಾಗಿದೆ. ಹೌದು, ರಾಕೇಶ್ ಎಂಬಾತನ ಜೊತೆ ದ್ವೇಷ ಸಾಧಿಸುತ್ತಿದ್ದ ರೌಡಿಶೀಟರ್ ಅಭಿ, ಯುವತಿಯ ವಿಚಾರಕ್ಕೆ ರಾಕೇಶ್ ಜೊತೆ ಗಲಾಟೆ ಮಾಡಿಕೊಂಡಿದ್ದ. ಇದೇ ವಿಚಾರವಾಗಿ ಹಲ್ಲೆ ಮಾಡಲು ರಾಕೇಶ್ ಮನೆಗೆ ಹೋಗಿದ್ದ ಅಭಿ, ತಪ್ಪಾಗಿ ಪಕ್ಕದ ಮನೆಗೆ ನುಗ್ಗಿದ್ದು, ಈ ವೇಳೆ ಪಕ್ಕದ ಮನೆಯ ಮಹಿಳೆಯ ಕೈ ಕತ್ತರಿಸಿ ಪರಾರಿಯಾಗಿದ್ದ. ಇದೀಗ ಸುಬ್ರಮಣ್ಯನಗರ ಪೊಲೀಸರು ರೌಡಿಶೀಟರ್ ಅಭಿಯನ್ನ ಬಂಧಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ