ಗ್ಯಾಂಗ್‌ಸ್ಟರ್ ಬಿಷ್ಣೋಯ್ ಹೆಸರಿನಲ್ಲಿ ಬೆದರಿಕೆ ಹಾಕಿದ್ದ ಆರೋಪಿಗಳ ಅರೆಸ್ಟ್
ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಉದ್ಯಮಿಗೆ ಬೆದರಿಕೆ ಹಾಕಿದ ನಾಲ್ವರನ್ನು ಬಂಧಿಸಿದ್ದಾರೆ. ಮೊಹಮ್ಮದ್ ರಫೀಕ್, ಶಿಶುಪಾಲ್ ಸಿಂಗ್, ವನ್ಷ್ ಸಚ್‌ದೇವ್ ಮತ್ತು ಅಮಿತ್ ಚೌಧರಿ ಬಂಧಿತ ಆರೋಪಿಗಳು. ಆರೋಪಿ ಮೊಹಮ್ಮದ್ ರಫೀಕ್ ತಿಹಾರ್ ಜೈಲಿನಲ್ ನಿಂದ ಇತ್ತೀಚಿಗೆ ಬಿಡುಗಡೆಯಾಗಿ ಬಂದಿದ್ದನು. ಬಿಷ್ಣೋಯ್ ಗ್ಯಾಂಗ್‌ಗೆ ಮತ್ತು ಆರೋಪಿಗಳಿಗೆ ಯಾವುದೇ ಸಂಬಂಧವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು, ಜುಲೈ 15: ಗ್ಯಾಂಗ್‌ಸ್ಟರ್ ಬಿಷ್ಣೋಯ್ (Gangster Lawrence Bishnoi) ಹೆಸರಿನಲ್ಲಿ ಉದ್ಯಮಿಗೆ ಬೆದರಿಕೆ ಹಾಕಿದ್ದ ಆರೋಪಿಗಳನ್ನು ಬೆಂಗಳೂರಿನ (Bengaluru) ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಮೊಹಮ್ಮದ್ ರಫೀಕ್, ಶಿಶುಪಾಲ್ ಸಿಂಗ್, ವನ್ಷ್ ಸಚ್‌ದೇವ್, ಅಮಿತ್ ಚೌಧರಿ ಬಂಧಿತರು. ಬಂಧಿತ ಮೊಹಮ್ಮದ್ ರಫೀಕ್ ಬೆಂಗಳೂರಿನ ಮಾವಳ್ಳಿ ನಿವಾಸಿಯಾಗಿದ್ದಾನೆ. ಈ ಹಿಂದೆಯೂ ಈತನ ವಿರುದ್ಧ ದೆಹಲಿಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿ ಮೊಹಮ್ಮದ್ ರಫೀಕ್ ಈ ಹಿಂದೆ ಬೇರೊಂದು ಪ್ರಕರಣದಲ್ಲಿ ತಿಹಾರ್ ಜೈಲ್ಲಿನಲ್ಲಿ ಕಂಬಿ ಎಣಿಸಿದ್ದಾನೆ. ಮೊಹಮ್ಮದ್ ರಫೀಕ್ ತಿಹಾರ್ ಜೈಲಿನಲ್ಲಿದ್ದಾಗ ಉಳಿದ ಆರೋಪಿಗಳನ್ನು ಪರಿಚಯಿಸಿಕೊಂಡಿದ್ದನು. ಜೈಲಿನಿಂದ ಹೊರಬಂದ ಬಳಿಕ ಲಾರೆನ್ಸ್ ಬಿಷ್ಣೋಯ್ ಹೆಸರಲ್ಲಿ ಸುಲಿಗೆ ಮಾಡಲು ಯತ್ನಿಸಿದ್ದನು. ಬಿಷ್ಟೋಯ್ ಗ್ಯಾಂಗ್ಗೂ ಮತ್ತು ಈ ಬಂಧಿತರಿಗೂ ಯಾವುದೇ ಸಂಬಂಧವಿಲ್ಲ. ಇದೀಗ, ಉದ್ಯಮಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ. ಪೊಲೀಸರು ಆರೋಪಿಗಳನ್ನು ಕೋರ್ಟ್ಗೆ ಹಾಜರುಪಡಿಸಿ ಕಸ್ಟಡಿಗೆ ಪಡೆದಿದ್ದಾರೆ.
ಇದನ್ನೂ ಓದಿ: ಉಗ್ರ ನಾಸಿರ್ನನ್ನು ಎಸ್ಕೆಫ್ ಮಾಡಿಸಲು ಫಾತಿಮಾ ತಡರಾತ್ರಿ ಪ್ಲಾನ್: ಫೋನ್ನಲ್ಲಿ ಗಂಟೆಗಟ್ಟಲೇ ಮಾತುಕತೆ
ಘಟನೆ ಬಳಿಕ ಬೆಂಗಳೂರು ಪೊಲೀಸರು ಅಲರ್ಟ್ ಆಗಿದ್ದಾರೆ. ಬೆಂಗಳೂರಿನಲ್ಲಿನ ಲಾಡ್ಜ್ಗಳಲ್ಲಿ ಪರಿಶೀಲನೆ ನಡೆಸುವಂತೆ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿದಿನ ಲಾಡ್ಜ್ಗಳ ದಾಖಲಾತಿ ಪುಸ್ತಕವನ್ನು ಪರಿಶೀಲನೆ ಮಾಡುತ್ತಿದ್ದಾರೆ. ಈ ಆರೋಪಿಗಳು ಈ ಹಿಂದೆ ಬೆಂಗಳೂರಿಗೆ ಬಂದು ದೀರ್ಘ ಕಾಲ ಲಾಡ್ಜ್ನಲ್ಲಿ ಉಳಿದಿದ್ದರು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.







