ಬೆಂಗಳೂರು: ಜಾಮೀನಿಗಾಗಿ ನ್ಯಾಯಾಲಯಕ್ಕೆ ನಕಲಿ ದಾಖಲೆ ಸಲ್ಲಿಕೆ!

ಜಾಮೀನಿಗಾಗಿ ನಿವೃತ್ತ ಎಎಸ್​​​ಐ ಅಧಿಕಾರಿ ಮತ್ತು ರೈತನ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರಿನ ನ್ಯಾಯಾಲಯಕ್ಕೆ ಶ್ಯೂರಿಟಿ ಸಲ್ಲಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ನ್ಯಾಯಾಲಯ ಆರೋಪಿಗಳ ಜಾಮೀನನ್ನು ವಜಾಗೊಳಿಸಿದೆ.

ಬೆಂಗಳೂರು: ಜಾಮೀನಿಗಾಗಿ ನ್ಯಾಯಾಲಯಕ್ಕೆ ನಕಲಿ ದಾಖಲೆ ಸಲ್ಲಿಕೆ!
ಸಾಂದರ್ಭಿಕ ಚಿತ್ರ
Follow us
|

Updated on: Jul 05, 2024 | 8:43 AM

ಬೆಂಗಳೂರು, ಜುಲೈ 05: ಜಾಮೀನು ಪಡೆಯುವ ವೇಳೆ ನಕಲಿ ಶ್ಯೂರಿಟಿ (Fake Documents) ಸಲ್ಲಿಸಿ ನ್ಯಾಯಾಲಯಕ್ಕೆ (Court) ಮೋಸ ಮಾಡಿರುವುದು ದಾಖಲೆ ಪರಿಶೀಲನೆ ವೇಳೆ ತಿಳಿದ್ದಿದ್ದು, ಆರೋಪಿಗಳ ವಿರುದ್ಧ ಸಿಸಿಬಿಯಲ್ಲಿ (CCB) ಎಫ್​ಐಆರ್​ ದಾಖಲಾಗಿದೆ. 2021ರಲ್ಲಿ ಕಾಡುಗೋಡಿ ಪೊಲೀಸರು ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆಯಡಿ ಆದಿತ್ಯಮ್ ಎಂಬುವುನನ್ನು ಬಂಧಿಸಿದ್ದರು. ಆರೋಪಿಗೆ ನ್ಯಾಯಾಲಯ ಜಾಮೀನು ನೀಡಿತ್ತು. ಆರೋಪಿ ಆದಿತ್ಯಮ್​ ಕಡೆಯವರು ಜಾಮೀನಿಗಾಗಿ ನ್ಯಾಯಾಲಯಕ್ಕೆ ನಕಲಿ ಶ್ಯೂರಿಟಿ ಸಲ್ಲಿಸಿದ್ದರು.

ಚಿಕ್ಕಬಳ್ಳಾಪುರ ಮೂಲದ ಓರ್ವ ರೈತರ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್, ನಕಲಿ ಜಮೀನು ದಾಖಲೆಗಳನ್ನು ಸೃಷ್ಟಿಸಿದ್ದರು. ನಕಲಿ ದಾಖಲೆಗಳಲ್ಲದೆ ಈತನೇ ಜಮೀನು ಮಾಲಿಕ ಅಂತ ನಕಲಿ ವ್ಯಕ್ತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವಿಚಾರ ತಿಳಿದ ಚಿಕ್ಕಬಳ್ಳಾಪುರ‌ ಮೂಲದ ರೈತ ಸಿಸಿಬಿಗೆ ದೂರು ನೀಡಿದ್ದರು. ಪೊಲೀಸರ ತಪಾಸಣೆ ವೇಳೆ ದಾಖಲೆ ಪತ್ರಗಳು ನಕಲಿ ಎಂದು ತಿಳಿದು ಬಂತು. ಸದ್ಯ ಸಿಸಿಬಿ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ವಿಶೇಷ ವಿವಾಹ ಕಾಯ್ದೆಯಡಿ ಹಿಂದೂ-ಮುಸ್ಲಿಂ ವಿವಾಹ ಮುಸ್ಲಿಂ ಕಾನೂನಿನ ಅಡಿಯಲ್ಲಿ ಮಾನ್ಯವಲ್ಲ: ನ್ಯಾಯಾಲಯ

ಇದೇ ರೀತಿ ನಿವೃತ ಎಎಸ್​ಐ ಅಧಿಕಾರಿಯ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನ್ಯಾಯಾಲಯಕ್ಕೆ ಶ್ಯೂರಿಟಿ ಸಲ್ಲಿಸಲಾಗಿತ್ತು. ಸಿದ್ದಾಪುರ ಪೊಲೀಸರು ಫೋಕ್ಸೋ ಪ್ರಕರಣದಲ್ಲಿ ನವೀದ್ ಪಾಷ ಎಂಬಾತನನ್ನು ಬಂಧಿಸಿದ್ದರು. ಆರೋಪಿ ಕಡೆಯವರು ಜಾಮೀನು ವೇಳೆ ನಕಲಿ ಶ್ಯೂರಿಟಿ ಸಲ್ಲಿಸಿದ್ದರು. ನಿವೃತ್ತ ಎಎಸ್​ಐ ಅಧಿಕಾರಿ ಹೆಸರಿನ ನಕಲಿ ಆಧಾರ್ ಕಾರ್ಡ್, ಜಮೀನು ದಾಖಲೆಗಳನ್ನು ಸೃಷ್ಟಿಸಿ ನ್ಯಾಯಾಲಯಕ್ಕೆ ಶ್ಯೂರಿಟಿ ಸಲ್ಲಿಸಿದ್ದರು. ಪೊಲೀಸ ತಪಾಸಣೆ ನಡೆಸಿದಾಗ ನಕಲಿ ದಾಖಲೆಗಳನ್ನು ಸಲ್ಲಿಸಿರುವುದು ಬಯಲಾಗದೆ.

ನಕಲಿ ದಾಖಲೆ ಸಲ್ಲಿಸಿದ್ದವರ ವಿರುದ್ಧ ಕ್ರಮಕ್ಕೆ ನಿವೃತ್ತ ಎಎಸ್​ಐ ನ್ಯಾಯಾಲಯದ ಮೊರೆಹೋಗಿದ್ದಾರೆ. ಸದ್ಯ ಆರೋಪಿ ನವೀನ್ ಪಾಷಾ ಜಾಮೀನನ್ನು ನ್ಯಾಯಾಲಯ ವಜಾಗೊಳಿಸಿದೆ. ನಕಲಿ ದಾಖಲೆ ಸೃಷ್ಟಿ ಹಿಂದೆ ದೊಡ್ಡ ಜಾಲವೇ ಇರುವುದು ಪತ್ತೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್