ಬೆಂಗಳೂರಿನಲ್ಲಿ ಮನೆ ಕಳ್ಳತನ ಮಾಡ್ತಿದ್ದ ಆರೋಪಿ ಬಂಧನ; 8 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ

| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 22, 2023 | 11:56 AM

ಬೆಂಗಳೂರಿನಲ್ಲಿ ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮೊಹಮ್ಮದ್ ಆಸೀಫ್​ ಬಂಧಿತ ಆರೋಪಿ. ಇತನ ಬಳಿ ಇದ್ದ 8.22 ಲಕ್ಷ ರೂ ಮೌಲ್ಯದ 137 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದ್ದು, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬೆಂಗಳೂರಿನಲ್ಲಿ ಮನೆ ಕಳ್ಳತನ ಮಾಡ್ತಿದ್ದ ಆರೋಪಿ ಬಂಧನ; 8 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ
ಬಂಧಿತ ಆರೋಪಿ
Follow us on

ಬೆಂಗಳೂರು, ಅ.22: ಮಹಾನಗರದಲ್ಲಿ ದರೋಡೆ(Robbery) ಪ್ರಕರಣಗಳು ಹೆಚ್ಚಾಗುತ್ತಿದೆ. ಪೊಲೀಸರು ಎಷ್ಟೇ ಕಡಿವಾಣ ಹಾಕುತ್ತಿದ್ದರೂ ತಡೆಯಲಾಗುತ್ತಿಲ್ಲ. ಅದರಂತೆ ಇದೀಗ ಬೆಂಗಳೂರಿ(Bengaluru)ನಲ್ಲಿ ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮೊಹಮ್ಮದ್ ಆಸೀಫ್​ ಬಂಧಿತ ಆರೋಪಿ. ಇತನ ಬಳಿ ಇದ್ದ 8.22 ಲಕ್ಷ ರೂ ಮೌಲ್ಯದ 137 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದ್ದು, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮನೆ ಬೀಗ ಮುರಿದು 5 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

ಬೆಂಗಳೂರು: ಮಾಚೋಹಳ್ಳಿಯ ಕುವೆಂಪು ಬಡಾವಣೆಯಲ್ಲಿ ಮನೆ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಹೌದು, ಮನೆಯಲ್ಲಿ ಯಾರು ಇಲ್ಲದ ವೇಳೆ ನಾಗಲಾಂಬಿಕೆ ಎಂಬುವರಿಗೆ ಸೇರಿದ ಬರೊಬ್ಬರಿ 5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 6 ಸಾವಿರ ನಗದನ್ನು ಕದ್ದು ಕಳ್ಳ ಎಸ್ಕೇಪ್​ ಆಗಿದ್ದಾನೆ. ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೆಂಗಳೂರು ಏರ್ಪೋರ್ಟ್ ರಸ್ತೆಯಲ್ಲಿ ಮೂರು ಕಡೆ ಕಳ್ಳತನ, ಆನೇಕಲ್​ನಲ್ಲಿ ಕಾರಿನ ಗಾಜು ಒಡೆದು ಹಣ ಕದ್ದ ಖದೀಮರು

ಪೆಟ್ರೋಲ್ ಬಂಕ್‌ ಯುವಕನ ಮೇಲೆ ಮಚ್ಚಿನಿಂದ ಹಲ್ಲೆ

ಹಾಸನ: ಕ್ಷುಲ್ಲಕ ಕಾರಣಕ್ಕೆ ಪೆಟ್ರೋಲ್ ಬಂಕ್‌ಗೆ ನುಗ್ಗಿ ಯುವಕನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಆರೋಪ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ನೆಹರು ನಗರದಲ್ಲಿ ನಡೆದಿದೆ. ಪ್ರಜ್ವಲ್ ಹಲ್ಲೆಗೊಳಗಾದ ಯುವಕ. ಕುಡಿದ ಅಮಲಿನಲ್ಲಿ ಬಂಕ್‌ಗೆ ಬಂದಿದ್ದ ಇಬ್ಬರು, ಪೆಟ್ರೋಲ್ ಹಾಕುವ ವಿಚಾರಕ್ಕೆ ಪ್ರಜ್ವಲ್ ಜೊತೆ ಜಗಳ ಶುರುವಾಗಿದೆ. ನಂತರ ಏಕಾಏಕಿ ಪೆಟ್ರೋಲ್ ಬಂಕ್‌ಗೆ ನುಗ್ಗಿ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ಇದರಿಂದ ಎಚ್ಚೆತ್ತ ಸಾರ್ವಜನಿಕರು ಇಬ್ಬರನ್ನು ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಪ್ರಜ್ವಲ್‌ಗೆ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಬೇಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿದ್ದಾರೆ. ಇನ್ನು ದುಷ್ಕರ್ಮಿಗಳು ಹಲ್ಲೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ