ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆ ನಿಂದಿಸಿದ ಆರೋಪ: ಶಾಸಕ ಅರವಿಂದ ಲಿಂಬಾವಳಿ ನಡೆ ಖಂಡಿಸಿ ಕೆಪಿಸಿಸಿ ಟ್ವೀಟ್​

ದುರಹಂಕಾರದ ಪರಮಾವಧಿಗೆ ತಲುಪಿರುವುದಕ್ಕೆ ಸಾಕ್ಷಿ ಎಂದು ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಕೆಪಿಸಿಸಿ ಟ್ವೀಟ್ ಮೂಲಕ ಕಿಡಿಕಾರಿದೆ.

ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆ ನಿಂದಿಸಿದ ಆರೋಪ: ಶಾಸಕ ಅರವಿಂದ ಲಿಂಬಾವಳಿ ನಡೆ ಖಂಡಿಸಿ ಕೆಪಿಸಿಸಿ ಟ್ವೀಟ್​
ಶಾಸಕ ಅರವಿಂದ ಲಿಂಬಾವಳಿ, ಮಹಿಳೆ
Updated By: ಗಂಗಾಧರ​ ಬ. ಸಾಬೋಜಿ

Updated on: Sep 03, 2022 | 2:28 PM

ಬೆಂಗಳೂರು: ಅಹವಾಲು ಹೇಳಿಕೊಳ್ಳಲು ಬಂದ ಮಹಿಳೆಯ (woman) ಮೇಲೆ ದರ್ಪ ತೋರಿದ ಶಾಸಕ ಲಿಂಬಾವಳಿ (Arvind Limbavali) ಯ ವರ್ತನೆ ಬಿಜೆಪಿಯ ಜನವಿರೋಧಿ ಧೋರಣೆಯಾಗಿದೆ. ದುರಹಂಕಾರದ ಪರಮಾವಧಿಗೆ ತಲುಪಿರುವುದಕ್ಕೆ ಸಾಕ್ಷಿ ಎಂದು ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಕೆಪಿಸಿಸಿ ಟ್ವೀಟ್ ಮೂಲಕ ಕಿಡಿಕಾರಿದೆ. ಜನತೆಯ ಮೇಲೆ ದರ್ಪ ತೋರಿದ ಮಾತ್ರಕ್ಕೆ ನಿಮ್ಮ ಅಯೋಗ್ಯತನ ಮರೆಯಾಗುವುದಿಲ್ಲ. ಸಿಎಂ ಅವರೇ, ನಿಮ್ಮ ಶಾಸಕರ ಈ ವರ್ತನೆ ನಿಮಗೆ ಸಹ್ಯವೇ ಎಂದು ಕೆಪಿಸಿಸಿ ಪ್ರಶ್ನಿಸಿದೆ. ಅದೇ ರೀತಿಯಾಗಿದೆ ಕರ್ನಾಟಕ ಕಾಂಗ್ರೆಸ್​ ಉಸ್ತುವಾರಿ ರಂದೀಪ್ ಸುರ್ಜೇವಾಲ ಕೂಡ ಟ್ವೀಟ್ ಮಾಡಿದ್ದು, ಸ್ತ್ರೀ ಉದ್ಧಾರಕರಂತೆ ಬೂಟಾಟಿಕೆಯ ಮಾತಾಡುವ ಬಿಜೆಪಿಗರೇ, ಮಹಿಳೆಯೊಂದಿಗೆ ಅನುಚಿತವಾಗಿ ನಡೆದುಕೊಂಡ ರೀತಿ ಅಕ್ಷಮ್ಯ.

ಶಾಸಕ ಅರವಿಂದ ಲಿಂಬಾವಳಿ ನಡೆದುಕೊಂಡ ರೀತಿ ಅಕ್ಷಮ್ಯ. ಮಹಿಳಾ ವಿರೋಧಿ ನಡೆ ವಿರುದ್ಧ ಮಾತಾಡುವ ಧೈರ್ಯ ತೋರುತ್ತೀರಾ? ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಮಹಿಳೆಗೆ ಕ್ಷಮೆ ಕೇಳ್ತಾರಾ ಎಂದು ಪ್ರಶ್ನಿಸಿದ್ದಾರೆ. ಮಹಿಳಾ ವಿರೋಧಿ ಬಿಜೆಪಿ ಎಂದು ಕನ್ನಡದಲ್ಲಿ ಸುರ್ಜೇವಾಲ ಟ್ವೀಟ್ ಮೂಲಕ ವಾದ್ಗಾಳಿ ಮಾಡಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದು, ಲಿಂಬಾವಳಿಗಷ್ಟೇ ಅಲ್ಲ ಈ ಸರ್ಕಾರಕ್ಕೂ ಮುಂದುವರಿಯೋ ಅರ್ಹತೆ ಎಂದು ಕಿಡಿಕಾರಿದ್ದಾರೆ.

ಘಟನೆ ಹಿನ್ನೆಲೆ:

ಸಮಸ್ಯೆ ಹೇಳಲು ಬಂದ ಮಹಿಳೆಗೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಬೈದಿದ್ದಾರೆ ಎಂದು ಆರೋಪ ಮಾಡಲಾಗಿದೆ. ಬೆಂಗಳೂರಿನ ವರ್ತೂರು ಕೆರೆ ಕೋಡಿ ವೀಕ್ಷಣೆ ವೇಳೆ ಘಟನೆ ನಡೆದಿದೆ. ಮಹಿಳೆಗೆ ಬೈದಿರುವ ಎನ್ನಲಾಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಳೆ ಹಾನಿ ವೀಕ್ಷಣೆ ವೇಳೆ ಮನವಿ ಸಲ್ಲಿಸಲು ಮಹಿಳೆ ಬಂದಿದ್ದರು. ಮನವಿ ಪತ್ರ ಕಸಿದುಕೊಂಡು ಮಹಿಳೆಗೆ ಆವಾಜ್ ಹಾಕಿದ ಆರೋಪ ಮಾಡಲಾಗಿದೆ. ನಿನಗೆ ಮಾನ ಮರ್ಯಾದೆ ಏನಾದ್ರೂ ಇದ್ಯಾ? ನಾಚಿಕೆ ಆಗಲ್ವಾ? ಮಹಿಳೆಯನ್ನು ಠಾಣೆಗೆ ಕರೆದೊಯ್ದು ಕೂರಿಸಿ ಎಂದು ಶಾಸಕರು ಆವಾಜ್​ ಹಾಕಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಸಮಸ್ಯೆ ಹೇಳಲು ಬಂದ ಮಹಿಳೆ ಮೇಲೆ ಶಾಸಕ ಅರವಿಂದ್ ಲಿಂಬಾವಳಿ ದರ್ಪ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ಸಮಸ್ಯೆ ಹೇಳಲು ಬಂದ ಮಹಿಳೆ ಮೇರಿ ಸಗಾಯಿಯನ್ನು ಪೊಲೀಸರು ಬಂಧಿಸಿದ್ದು, ಈ ಹಿನ್ನೆಲೆ ವೈಟ್‌ಫೀಲ್ಡ್ ಪೊಲೀಸ್ ಸ್ಟೇಷನ್ ಬಳಿ ಮಹಿಳೆಯರು ಪ್ರತಿಭಟನೆ ನಡೆಸಿದರು. ಮೇರಿ ಸಗಾಯಿಯನ್ನು ಯಾಕೆ ಸ್ಟೇಷನ್‌ಗೆ ಕರೆದೋಯ್ದಿದ್ದೀರಾ? ಯಾಕೆ ಪೊಲೀಸರು ಈ ರೀತಿ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:38 pm, Sat, 3 September 22