AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಣ್ಯ ಭೂಮಿ ಒತ್ತುವರಿ, ಆರ್​ಎಫ್​ಓಗೆ ಕರ್ತವ್ಯಕ್ಕೆ ಅಡ್ಡಿ; ಶಾಸಕರ ವಿರುದ್ದ ಈಶ್ವರ್ ಖಂಡ್ರೆಗೆ ದೂರು

ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಹಿನ್ನಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ(Harish Poonja) ವಿರುದ್ಧ ಅಧಿಕಾರಿಗಳು ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwar Khandre) ಗೆ ದೂರು ನೀಡಿದ್ದಾರೆ. ಹೌದು, ತಮಗೆ ಕರ್ತವ್ಯದ ಸಂದರ್ಭದಲ್ಲಿ ರಕ್ಷಣೆ ನೀಡುವಂತೆ ಕೋರಿ ಕರ್ನಾಟಕ ರಾಜ್ಯ ವಲಯ ಅರಣ್ಯಾಧಿಕಾರಿಗಳ ಸಂಘದಿಂದ ದೂರು ಸಲ್ಲಿಸಿದ್ದಾರೆ.

ಅರಣ್ಯ ಭೂಮಿ ಒತ್ತುವರಿ, ಆರ್​ಎಫ್​ಓಗೆ ಕರ್ತವ್ಯಕ್ಕೆ ಅಡ್ಡಿ; ಶಾಸಕರ ವಿರುದ್ದ ಈಶ್ವರ್ ಖಂಡ್ರೆಗೆ ದೂರು
ಶಾಸಕರ ವಿರುದ್ಧ ಅರಣ್ಯ ಸಚಿವರಿಗೆ ದೂರು ಕೊಟ್ಟ ರಾಜ್ಯ ವಲಯ ಅರಣ್ಯಾಧಿಕಾರಿಗಳ ಸಂಘ
ಪ್ರಸನ್ನ ಗಾಂವ್ಕರ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 19, 2023 | 8:42 PM

Share

ದಕ್ಷಿಣ ಕನ್ನಡ, ಅ.19: ಜಿಲ್ಲೆಯ ಉಪ್ಪಿನಂಗಡಿ ಅರಣ್ಯ ವಲಯದ ವ್ಯಾಪ್ತಿಯಲ್ಲಿನ ಬೆಳ್ತಂಗಡಿ ತಾಲೂಕಿನ ಕಳಂಜ ಗ್ರಾಮದಲ್ಲಿ ಅರಣ್ಯ ಭೂಮಿ ಒತ್ತುವರಿ ಮಾಡಿ ಮನೆ ನಿರ್ಮಿಸುತ್ತಿದ್ದ ಸಂದರ್ಭದಲ್ಲಿ ಅದನ್ನು ತಡೆಯಲು ಹೋದ ಆರ್.ಎಫ್.ಓ(RFO) ಜಯಪ್ರಕಾಶ್ ಕೆ.ಕೆ ಅವರಿಗೆ ಅವಾಜ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಒಡ್ಡಿದ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಹಿನ್ನಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ(Harish Poonja) ವಿರುದ್ಧ ಅಧಿಕಾರಿಗಳು ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwar Khandre) ಗೆ ದೂರು ನೀಡಿದ್ದಾರೆ. ಹೌದು, ತಮಗೆ ಕರ್ತವ್ಯದ ಸಂದರ್ಭದಲ್ಲಿ ರಕ್ಷಣೆ ನೀಡುವಂತೆ ಕೋರಿ ಕರ್ನಾಟಕ ರಾಜ್ಯ ವಲಯ ಅರಣ್ಯಾಧಿಕಾರಿಗಳ ಸಂಘದಿಂದ ದೂರು ಸಲ್ಲಿಸಿದ್ದಾರೆ.

ಏನಿದು ಪ್ರಕರಣ?

ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಸರ್ವೆ ನಂಬರ್ 309 ರ ನಿಡ್ಲೆ ವಿಸ್ತೃತ ಬ್ಲಾಕ್ 2ರಲ್ಲಿ ಅಮ್ಮಿನಡ್ಕ-ಕೆದ್ದ ನಿವಾಸಿ ಲೋಲಾಕ್ಷ ಯಾನೆ ಅನಂತು ಅವರು ಅರಣ್ಯ ಇಲಾಖೆಯ ಜಾಗವನ್ನು ಒತ್ತುವರಿ ಮಾಡಿ ನೂತನ ಮನೆ ನಿರ್ಮಾಣಕ್ಕೆ ಮುಂದಾಗಿದ್ದರು. ಈ ಬಗ್ಗೆ ಮಂಗಳೂರು ಅರಣ್ಯ ಇಲಾಖೆಗೆ ದೂರು ಬಂದಿತ್ತು. ಈ ಹಿನ್ನೆಲೆ ಎಚ್ಚೆತ್ತ ಅರಣ್ಯ ಇಲಾಖೆ ಸಿಬ್ಬಂದಿ ಅ.6 ರಂದು ನೂತನ ಮನೆಯ ಫೌಂಡೇಶನ್ ತೆರವುಗೊಳಿಸಿದ್ದರು. ಇನ್ನು ವಿಚಾರ ತಿಳಿದು ಶಾಸಕ ಹರೀಶ್ ಪೂಂಜ ಅಕ್ಟೋಬರ್ 7 ರಂದು ಸ್ಥಳಕ್ಕೆ ಭೇಟಿ ನೀಡಿ ಅರಣ್ಯಧಿಕಾರಿಗಳಿಗೆ ಬೈದಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಕರ್ತವ್ಯಕ ಅಡ್ಡಿಪಡಿಸಿ, ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪದ ಮೇಲೆ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಕೆ.ಕೆ.ಜಯಪ್ರಕಾಶ್ ನೀಡಿದ ದೂರು ಆಧರಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಐಪಿಸಿ 1860(U/S-143, 353, 504, 149) ಅಡಿಯಲ್ಲಿ   ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:ಮಂಗಳೂರು: ಅರಣ್ಯಾಧಿಕಾರಿಗಳ ವಿರುದ್ಧ ನಾಲಿಗೆ ಹರಿಬಿಟ್ಟ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಇನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್​ಐಆರ್ ದಾಖಲಿಸಿದ್ದ ಹಿನ್ನಲೆ ಬಿಜೆಪಿ ಎಂಎಲ್​​ಸಿ ಕೋಟ ಶ್ರೀನಿವಾಸ್ ಪೂಜಾರಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ‘ ಬಡವನ ಮನೆ ತೆರವುಗೊಳಿಸಬೇಡಿ ಎಂದು ಹರೀಶ್ ಪೂಂಜಾ ಹೇಳಿದ್ದರು. ಸರ್ವೆ ಮಾಡಿ ಅರಣ್ಯ ಪ್ರದೇಶ ಎಂದು ಕಂಡು ಬಂದರೆ ತೆರವುಗೊಳಿಸಿ. ನಾನು ಕೂಡ ಸಹಕಾರ ನೀಡುವೆ ಎಂದು ಹರೀಶ್ ಪೂಂಜಾ ಹೇಳಿದ್ದರು. ಬಡಕುಟುಂಬವನ್ನು ಹೊರಹಾಕಬೇಡಿ ಎಂದು ಹೇಳಿದ್ದರು. ಇದೇ ಕಾರಣಕ್ಕೆ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್​ಐಆರ್ ದಾಖಲು ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರ ಸ್ವೇಚ್ಛಾಚಾರಿಯಾಗಿ ನಡೆದುಕೊಳ್ಳುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು