Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಲ್ಲೇ ಮಾತ್ರೆಗಳನ್ನ ಖರೀದಿಸಬೇಕೆಂದು ಡಿಸಿಪಿ ಗೆ ಧಮ್ಕಿ ಆರೋಪ; ಫೋರ್ಟಿಸ್ ಆಸ್ಪತ್ರೆ ಮೆಡಿಕಲ್ ಸ್ಟೋರ್​ ವಿರುದ್ಧ ದೂರು

ಇಲ್ಲೇ ಮಾತ್ರೆಗಳನ್ನ ಖರೀದಿಸಬೇಕೆಂದು ವಿವಿಐಪಿ ಭದ್ರತೆ ಡಿಸಿಪಿ ಮಂಜುನಾಥ್ ಎಂಬುವವರಿಗೆ ಧಮ್ಕಿ ಹಾಕಿದ ಆರೋಪದ ಮೇಲೆ ಬೆಂಗಳೂರಿನ ಕನ್ನಿಂಗ್ ಹ್ಯಾಂ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆ ಮೆಡಿಕಲ್ ಸ್ಟೋರ್ ವಿರುದ್ಧ ಹೈಗ್ರೌಂಡ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಇಲ್ಲೇ ಮಾತ್ರೆಗಳನ್ನ ಖರೀದಿಸಬೇಕೆಂದು ಡಿಸಿಪಿ ಗೆ ಧಮ್ಕಿ ಆರೋಪ; ಫೋರ್ಟಿಸ್ ಆಸ್ಪತ್ರೆ ಮೆಡಿಕಲ್ ಸ್ಟೋರ್​ ವಿರುದ್ಧ ದೂರು
ಫೋರ್ಟಿಸ್ ಆಸ್ಪತ್ರೆ ಮೆಡಿಕಲ್ ಸ್ಟೋರ್​ ವಿರುದ್ಧ ದೂರು
Follow us
ರಾಚಪ್ಪಾಜಿ ನಾಯ್ಕ್
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 11, 2024 | 2:49 PM

ಬೆಂಗಳೂರು, ಸೆ.11: ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ತೀವ್ರವಾಗಿ ತಲೆಗೆ ಪೆಟ್ಟಾಗಿದ್ದ ಯುವಕನಿಗೆ ಫೋರ್ಟಿಸ್‌ ಆಸ್ಪತ್ರೆ (fortis hospital) ಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಹೀಗೆ ಹತ್ತು ಹಲವು ಕಾರ್ಯಗಳಿಂದ ಈ ಆಸ್ಪತ್ರೆ ಮೆಚ್ಚುಗೆ ಪಡೆದಿದೆ. ಆದರೀಗ ಕನ್ನಿಂಗ್ ಹ್ಯಾಂ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆ ಮೆಡಿಕಲ್ ಸ್ಟೋರ್ ವಿರುದ್ಧ ದೂರುವೊಂದು ಕೇಳಿಬಂದಿದೆ. ಹೌದು, ಇಲ್ಲೇ ಮಾತ್ರೆಗಳನ್ನ ಖರೀದಿಸಬೇಕೆಂದು ವಿವಿಐಪಿ ಭದ್ರತೆ ಡಿಸಿಪಿ ಮಂಜುನಾಥ್ ಎಂಬುವವರಿಗೆ ಧಮ್ಕಿ ಹಾಕಿದ ಆರೋಪದ ಮೇಲೆ ಡಿಸಿಪಿ ದೂರು ಆಧರಿಸಿ ಹೈಗ್ರೌಂಡ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಘಟನೆ ವಿವರ

ಆಸ್ಪತ್ರೆ ಒಳರೋಗಿಯಾಗಿ ಸೆಪ್ಟೆಂಬರ್ 6ರಂದು ದಾಖಲಾಗಿದ್ದ ವಿವಿಐಪಿ ಭದ್ರತೆ ಡಿಸಿಪಿ ಮಂಜುನಾಥ್ ಅವರು ಚಿಕಿತ್ಸೆ ಪಡೆದು ಸೆ.10ರಂದು‌ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರು. ಈ ವೇಳೆ ವೈದ್ಯರು ಪ್ರಿಸ್ಕ್ರಿಪ್ಷನ್​ನಲ್ಲಿ ಐದು ಮಾತ್ರೆ ಬರೆದಿದ್ದರು. ಅದರಂತೆ ಅದನ್ನು ಆಸ್ಪತ್ರೆ ಮೆಡಿಕಲ್ ಸ್ಟೋರ್​ನಲ್ಲಿ ಕೇಳಿದ್ದಾಗ, 1 ಟ್ಯಾಬ್ಲೆಟ್ ಬೆಲೆ 350 ರೂ. ಒಂದು ಶೀಟ್​ನಲ್ಲಿ 25 ಟ್ಯಾಬ್ಲೆಟ್​ ಇದೆ. ಎಲ್ಲ ಮಾತ್ರೆಗಳು ಸಹ ತೆಗೆದುಕೊಳ್ಳಬೇಕೆಂದು ಸಿಬ್ಬಂದಿ ಸೂಚಿಸಿದ್ದಾನೆ.

ಇದನ್ನೂ ಓದಿ:ಫೋರ್ಟಿಸ್ ಆಸ್ಪತ್ರೆಯಲ್ಲಿ ನೈಜೀರಿಯಾದ ಬಾಲಕನಿಗೆ ಗುಪ್ತಾಂಗ ಮರುಜೋಡಣೆ ಅಪರೂಪದ ಶಸ್ತ್ರಚಿಕಿತ್ಸೆ ಯಶಸ್ವಿ

ಈ ಹಿನ್ನಲೆ ಡಿಸಿಪಿ ಮಂಜುನಾಥ್ ಅದನ್ನು ಕೊಳ್ಳಲು ನಿರಾಕರಿಸಿದ್ದಾರೆ. ಈ ವೇಳೆ ಸಿಬ್ಬಂದಿ ‘ನಮ್ಮ ವೈದ್ಯರು ಬರೆದಿರುವ ಮಾತ್ರೆ ಎಲ್ಲೂ ಸಿಗಲ್ಲ. ಇಲ್ಲೇ ಬಂದು ಮಾತ್ರೆ ಖರೀದಿಸಬೇಕು ಎಂದು ಧಮ್ಕಿ ಹಾಕಿರುವ ಆರೋಪ ಕೇಳಿಬಂದಿದೆ. ಎನ್​ಸಿಆರ್ ದಾಖಲಿಸಿಕೊಂಡಿರುವ ಹೈಗ್ರೌಂಡ್ ಠಾಣೆಯ ಪೊಲೀಸರು, ತನಿಖೆ ಆರಂಭಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು