Kamakshipalya: ಬೆಂಗಳೂರಿನಲ್ಲಿ ಯುವಕನ ಮೇಲೆ ಆ್ಯಸಿಡ್​​ ದಾಳಿ

ಸೆ.21ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಯುವಕನ ಮೇಲೆ ಆ್ಯಸಿಡ್​ ದಾಳಿ ನಡೆದಿದೆ. ಸದ್ಯ ಗಾಯಾಳು ಯುವಕನಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಾಳು ಹೇಳಿಕೆ ದಾಖಲಿಸಿ ದೂರು ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Kamakshipalya: ಬೆಂಗಳೂರಿನಲ್ಲಿ ಯುವಕನ ಮೇಲೆ ಆ್ಯಸಿಡ್​​ ದಾಳಿ
ಸಾಂದರ್ಭಿಕ ಚಿತ್ರ
Follow us
ರಾಚಪ್ಪಾಜಿ ನಾಯ್ಕ್
| Updated By: ಆಯೇಷಾ ಬಾನು

Updated on:Sep 23, 2024 | 8:21 AM

ಬೆಂಗಳೂರು, ಸೆ.23: ಮಟ ಮಟ ಮಧ್ಯಾಹ್ನ ಬೆಂಗಳೂರಿನಲ್ಲಿ ಆ್ಯಸಿಡ್​​​ ದಾಳಿ (Acid Attack) ನಡೆದಿದೆ. ಸೆ.21ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕಾಮಾಕ್ಷಿಪಾಳ್ಯ (Kamakshipalya) ಠಾಣಾ ವ್ಯಾಪ್ತಿಯಲ್ಲಿ ನಾಗೇಶ್ ಕೊಂಡ ಎಂಬ ಯುವಕನ ಮೇಲೆ​ ದುಷ್ಕರ್ಮಿಗಳು ಆ್ಯಸಿಡ್ ಎರಚಿ ಪರಾರಿಯಾಗಿದ್ದಾರೆ. ಸೆ.21ರಂದು ನಡೆದಿರುವ ಘಟನೆ ತಡವಾಗಿ ಬೆಳೆಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗಾಯಾಳು ಯುವಕನಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಗಾಯಾಳು ಹೇಳಿಕೆ ದಾಖಲಿಸಿ ದೂರು ಪಡೆದಿರುವ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಆ್ಯಸಿಡ್​ ದಾಳಿಯಲ್ಲಿ ಇದು 2 ದಾಳಿಯಾಗಿದೆ. ಈ ಹಿಂದೆ ನಡೆದಿದ್ದ ಆ್ಯಸಿಡ್​ ದಾಳಿ ಇಡೀ ಬೆಂಗಳೂರನ್ನು ಬೆಚ್ಚಿಬೀಳಿಸಿತ್ತು. 2022ರಲ್ಲಿ ಹಾಡಹಗಲೇ ಯುವತಿ ಮೇಲೆ ಆ್ಯಸಿಡ್​ ದಾಳಿ ನಡೆದಿತ್ತು. ಆರೋಪಿ ನಾಗ ಯುವತಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದ. ಯುವತಿ ಮೇಲಿನ ಆ್ಯಸಿಡ್ ದಾಳಿ ಪ್ರಕರಣ ರಾಜ್ಯಾದ್ಯಂತ ಭಾರಿ ಚರ್ಚೆ ಆಗಿತ್ತು. ಆರೋಪಿಯನ್ನು ಬಂಧಿಸುವಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ಯಶಸ್ವಿಯಾಗಿದ್ದರು. ಈಗ ಇದೇ ಠಾಣಾ ವ್ಯಾಪ್ತಿಯಲ್ಲಿ ಮತ್ತೊಂದು ಆ್ಯಸಿಡ್​ ದಾಳಿ ನಡೆದಿದೆ.

ಇದನ್ನೂ ಓದಿ: ಆಕಸ್ಮಿಕ ಬೆಂಕಿ ತಗುಲಿ ಸ್ಕಾರ್ಪಿಯೋ ಕಾರು ಸುಟ್ಟು ಭಸ್ಮ

ಇನ್ನು ಆ್ಯಸಿಡ್​ ದಾಳಿಯಿಂದಾಗಿ ನಾಗೇಶ್ ಮುಖ ಸಂಪೂರ್ಣ ಸುಟ್ಟಿದೆ. ಮುಖ‌ ಊದಿಕೊಂಡಿದೆ. ಗುಲ್ಬರ್ಗ ಮೂಲದವನಾದ ನಾಗೇಶ್ ಘಟನೆ ಆಗ್ತಿದ್ದಂತೆ ರೂಮ್ ಮೇಟ್ ಗೆ ವಿಚಾರ ಹೇಳಿದ್ದ. ಫೋನಲ್ಲಿ ಮಾತಾಡಿಕೊಂಡು ಬರ್ತಾ ಇದ್ದೆ, ಈ‌ ವೇಳೆ‌ ಯಾರೊ‌ ಆ್ಯಸಿಡ್ ಹಾಕಿ ಹೋಗಿದ್ದಾರೆ ಎಂದಿದ್ದ. ತಕ್ಷಣ ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಬಳಿಕ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಾಗುತ್ತಿದೆ.

ಬಿಬಿಎಂಪಿ ಗ್ರೌಂಡ್​ ಗೇಟ್ ಬಿದ್ದು ಬಾಲಕ ಸಾವು

ಬೆಂಗಳೂರಿನ ಮಲ್ಲೇಶ್ವರಂ ಬಿಬಿಎಂಪಿ ಗ್ರೌಂಡ್ ನಲ್ಲಿ ಗೇಟ್ ಬಿದ್ದು 10 ವರ್ಷದ ನಿರಂಜನ್ ಎಂಬ ಬಾಲಕ ಮೃತಪಟ್ಟಿದ್ದಾನೆ. ಆಟ ಆಡಲು ತೆರಳಿದ್ದ ಮಗು ಒಬ್ಬನೇ ಗೇಟ್ ಓಪನ್ ಮಾಡುವಾಗ ಮೇಲೆ ಬಿದ್ದು ಅವಘಡ ಸಂಭವಿಸಿದೆ. ತಕ್ಷಣವೇ ಓಡೋಡಿ ಬಂದ ಸ್ಥಳೀಯರು ಮಗುವನ್ನ ಕೆಸಿ ಜನೆರಲ್ ಆಸ್ಪತ್ರೆಗೆ ದಾಖಲಿಸಿದ್ರು. ಆದ್ರೆ ಚಿಕಿತ್ಸೆ ಫಲಿಸದೆ ಮಗು ಸಾವನ್ನಪ್ಪಿದೆ.

ಕಟ್ಟಡದ ಅವಶೇಷ ಬಿದ್ದು ಕಾರ್ಮಿಕ ಸಾವು

ಕಟ್ಟಡದ ಅವಶೇಷಗಳು ಕುಸಿದು ಬಿದ್ದ ಓರ್ವ ಸ್ಥಳದಲ್ಲಿ ಸಾವನ್ನಪ್ಪಿ, ಮತ್ತೊರ್ವನ ಸ್ಥಿತಿ ಚಿಂತಾಜನಕವಾಗಿದೆ. ಚಿಕ್ಕಬಳ್ಳಾಪುರ ನಗರದ ಎಂ.ಜಿ.ರಸ್ತೆಯಲ್ಲಿ ಘಟನೆ ನಡೆದಿದ್ದು, ಸಮೀವುಲ್ಲಾ ಎಂಬ ಕಾರ್ಮಿಕ ಮೃತಪಟ್ಟಿದ್ದಾನೆ. ಗಾಯಾಳು ಶಪೀವುಲ್ಲಾಗೆ ಚಿಕ್ಕಬಳ್ಳಾಫುರ ಜಿಲ್ಲಾಸ್ಪತ್ರೆಯಲ್ಲಿ ಚಿಕೀತ್ಸೆ ನೀಡಲಾಗ್ತಿದೆ. ಹೋಟೆಲ್ ಕೆಂಪಣ್ಣ ಕಟ್ಟಡದಲ್ಲಿ ದುರ್ಘಟನೆ ನಡೆದಿದೆ. ರಸ್ತೆ ಅಗಲಿಕರಣ ಹಿನ್ನಲೆ ಕಟ್ಟಡ ತೆರವು ಮಾಡಿಕೊಳ್ತಿದ್ದಾಗ ದುರಂತ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:48 am, Mon, 23 September 24

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್