ಪಾಕಿಸ್ತಾನ್ ಜಿಂದಾಬಾದ್ ಎಂದ ವಿದ್ಯಾರ್ಥಿಗಳ ಪರ ಪೋಸ್ಟ್ ಹಾಕಿದ ನಟ ಚೇತನ್: ಸಾರ್ವಜನಿಕರಿಂದ ಟೀಕೆ

ಪಾಕಿಸ್ತಾನ್ ಜಿಂದಾಬಾದ್ ವಿದ್ಯಾರ್ಥಿಗಳನ್ನು ಬೆಂಬಲಿಸಿ ನಟ ಚೇತನ್ ಅಹಿಂಸಾ ಪೋಸ್ಟ್ ಹಾಕಿದ್ದಾರೆ.

ಪಾಕಿಸ್ತಾನ್ ಜಿಂದಾಬಾದ್ ಎಂದ ವಿದ್ಯಾರ್ಥಿಗಳ ಪರ ಪೋಸ್ಟ್ ಹಾಕಿದ ನಟ ಚೇತನ್: ಸಾರ್ವಜನಿಕರಿಂದ ಟೀಕೆ
ನಟ ಚೇತನ ಕುಮಾರ್​
Follow us
| Updated By: ವಿವೇಕ ಬಿರಾದಾರ

Updated on:Nov 19, 2022 | 5:02 PM

ಬೆಂಗಳೂರು: ಮೈನಾ ಚಿತ್ರದ ಮೂಲಕ ಖ್ಯಾತಿಯಾದ ನಟ ಚೇತನ್ ಅಹಿಂಸಾ (Actor Chetan) ಒಂದಲ್ಲಾ ಒಂದು ಹೇಳಿಕೆ ನೀಡುವ ಮೂಲಕ ಸಾಕಷ್ಟು ವಿವಾದಗಳನ್ನು ತಮ್ಮ ಮೇಲೆ ಎಳೆದುಕೊಳ್ಳುತ್ತಿರುತ್ತಾರೆ. ಈ ಹಿಂದೆ ಕಾಂತಾರ ಚಿತ್ರದ ಬಗ್ಗೆ ಮಾತನಾಡಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಇದೀಗ ಮೊತ್ತೊಂದು ಹೇಳಿಕೆ ನೀಡುವ ಮೂಲಕ ಟೀಕೆಗೆ ಗುರಿಯಾಗುತ್ತಿದ್ದಾರೆ. ಅದು ನಿನ್ನೆ (ನ.17) ಬೆಂಗಳೂರಿನ ನ್ಯೂ ಹೊರೈಜನ್ ಕಾಲೇಜಿನ ಇಂಜಿನಿಯರಿಂಗ್‌ (Engineering Students) ಮೊದಲ ವರ್ಷದ ಆರ್ಯನ್, ದಿನಕರ್‌, ರಿಯಾ ರವಿಚಂದ್ರ ಕಾಮೇಡ್ಕರ್‌ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದರು.

ಸದ್ಯ ಚೇತನ್ ಅಹಿಂಸಾ ಈ ವಿದ್ಯಾರ್ಥಿಗಳ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​​ ಹಾಕಿದ್ದಾರೆ. ಅದು “ನಿನ್ನೆ ನಡೆದ ಕಾಲೇಜು ಫೆಸ್ಟ್‌ನಲ್ಲಿ ಬೆಂಗಳೂರಿನ 3 ವಿದ್ಯಾರ್ಥಿಗಳು ‘ಪಾಕಿಸ್ತಾನ್ ಜಿಂದಾಬಾದ್’ ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಇದನ್ನು ವಿನೋದಕ್ಕಾಗಿ ಮಾಡಲಾಗಿದೆ. ಈ ಕಾರಣಕ್ಕಾಗಿ ಆರ್ಯನ್, ರಿಯಾ ಮತ್ತು ದಿನಕರ್ ಅವರನ್ನು ಥಳಿಸಿ ಬೆದರಿಸಿ ಮತ್ತು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಇದು ಅಸಂಬದ್ಧ ಮತ್ತು ಅಪಾಯಕಾರಿ. ಪಾಕಿಸ್ತಾನದ ಜನರು ನಮ್ಮ ಸಹೋದರಿಯರು ಮತ್ತು ಸಹೋದರರು – ನಮ್ಮ ಶತ್ರುಗಳಲ್ಲ. ವಾಕ್ ಸ್ವಾತಂತ್ರ್ಯವನ್ನು ನಾವು ಎತ್ತಿ ಹಿಡಿಯಬೇಕು”, ಎಂದು ಬರೆದುಕೊಳ್ಳುವ ಮೂಲಕ ಸಾರ್ವಜನಿಕರಿಂದ ತೀರ್ವ ಟೀಕೆಗೆ ಒಳಗಾಗುತ್ತಿದ್ದಾರೆ.

ಇನ್ನೂ ವಿದ್ಯಾರ್ಥಿಗಳ ವಿರುದ್ಧ ಮಾರತ್‌ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಮಾಷೆ ಮಾಡಲು ಹೀಗೆ ಮಾಡಿದ್ದೇವೆ ಎಂದಿದ್ದಾರೆ. ಆದರೂ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 5:00 pm, Sat, 19 November 22