AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ದರ್ಶನ್​ ಹೆಸರಲ್ಲಿ ದೋಖಾ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

Nikhil Kumaraswamy: ದರ್ಶನ್ ಹಿರಿಯ ನಟ, ಅವರು ನಮ್ಮ ಕನ್ನಡ ಚಲನಚಿತ್ರೋದ್ಯಮಕ್ಕೆ ಬಹಳ ಕೊಡುಗೆ ಕೊಟ್ಟಿದ್ದಾರೆ. ಕಳೆದ ಎರಡು ಮೂರು ದಿನಗಳಿಂದ ವಿವಾದ ನಡೆಯುತ್ತಿದೆ. ಅವರು ಆ ವಿವಾದವನ್ನು ಬಗೆಹರಿಸಿಕೊಳ್ಳುತ್ತಾರೆ ಎಂದು ನಟ, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಟ ದರ್ಶನ್​ ಹೆಸರಲ್ಲಿ ದೋಖಾ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?
ದರ್ಶನ್ ಮತ್ತು ನಿಖಿಲ್ ಕುಮಾರಸ್ವಾಮಿ
TV9 Web
| Edited By: |

Updated on:Jul 13, 2021 | 8:36 PM

Share

ದೇವನಹಳ್ಳಿ: ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್- ನಿರ್ಮಾಪಕ ಉಮಾಪತಿ ಮತ್ತು ಅರುಣಾ ಕುಮಾರಿ ನಡುವಿನ ವಿವಾದದ ಕುರಿತು  ನಟ, ಜೆಡಿಎಸ್ ಯುವ ನಾಯಕ ಪ್ರತಿಕ್ರಿಯಿಸಿದ್ದಾರೆ. ದರ್ಶನ್ ಅವರು ಬಹಳ ಶಕ್ತಿಯುತವಾಗಿ ಇದ್ದಾರೆ. ಆ ವಿವಾದವನ್ನು ದರ್ಶನ್ ಅವರು ಬಗೆಹರಿಸಿಕೊಳ್ಳುತ್ತಾರೆ. ದರ್ಶನ್ ಹಿರಿಯ ನಟ, ಅವರು ನಮ್ಮ ಕನ್ನಡ ಚಲನಚಿತ್ರೋದ್ಯಮಕ್ಕೆ ಬಹಳ ಕೊಡುಗೆ ಕೊಟ್ಟಿದ್ದಾರೆ. ಕಳೆದ ಎರಡು ಮೂರು ದಿನಗಳಿಂದ ವಿವಾದ ನಡೆಯುತ್ತಿದೆ. ಅವರು ಆ ವಿವಾದವನ್ನು ಬಗೆಹರಿಸಿಕೊಳ್ಳುತ್ತಾರೆ ಎಂದು ನಟ, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದರ್ಶನ್ ಅವರ ಕುರಿತು ಶ್ಲಾಘನೆ ವ್ಯಕ್ತಪಡಿಸಿರುವ ನಟ, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸದ್ಯ  ನಡೆಯುತ್ತಿರುವ ವಿವಾದದ ಕುರಿತು ದೇವನಹಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮನಬಿಚ್ಚಿ ಮಾತನಾಡಿದ್ದಾರೆ. ದರ್ಶನ್ ಹಿರಿಯ ನಟ, ಅವರು ನಮ್ಮ ಕನ್ನಡ ಚಲನಚಿತ್ರೋದ್ಯಮಕ್ಕೆ ಬಹಳ ಕೊಡುಗೆ ಕೊಟ್ಟಿದ್ದಾರೆ. ಕಳೆದ ಎರಡು ಮೂರು ದಿನಗಳಿಂದ ವಿವಾದ ನಡೆಯುತ್ತಿದೆ. ಅವರು ಆ ವಿವಾದವನ್ನು ಬಗೆಹರಿಸಿಕೊಳ್ಳುತ್ತಾರೆ ಎಂದು ನಟ, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ: ಆರೋಪಿ ಅರುಣಾ ಕುಮಾರಿ ಪುರಾಣ ಬಿಚ್ಚಿಟ್ಟ ನಾಗವರ್ಧನ್, ನಾಗೇಂದ್ರ ಪ್ರಸಾದ್ ಅರುಣಾ ಕುಮಾರಿಯಿಂದ ಉದ್ಯಮಿ ನಾಗವರ್ಧನ್​ಗೆ ಮೋಸ ಆಗಿದೆ. ನಾಗವರ್ಧನ್​ಗೆ 5 ವರ್ಷಗಳ ಹಿಂದೆ ಸಮಸ್ಯೆ ಆಗಿತ್ತು. ನಾಗವರ್ಧನ್ ಸಮಸ್ಯೆಗೆ ಅರುಣಾ ಕುಮಾರಿ ಕಾರಣ. 2015ರಲ್ಲಿ ಅರುಣಾ ಕುಮಾರಿ ಜತೆ ನಾನೂ ಮಾತನಾಡಿದ್ದೆ ಎಂದು ಚಿತ್ರ ಸಾಹಿತಿ ನಾಗೇಂದ್ರ ಪ್ರಸಾದ್ ಇಂದು (ಜುಲೈ 13) ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ನಾಗವರ್ಧನ್ ನನಗೆ ವಿಚಾರ ತಿಳಿಸಿದ ಹಿನ್ನೆಲೆ ಸುದ್ದಿಗೋಷ್ಠಿ ನಡೆಸುತ್ತಿದ್ದೇವೆ. ಈ ಬಗ್ಗೆ ಇಂದು ಬೆಳಗ್ಗೆ ನನಗೆ ನಾಗವರ್ಧನ್ ತಿಳಿಸಿದ್ದಾರೆ. ಉಮಾಪತಿ ಗೌಡ ಹಾಗೂ ದರ್ಶನ್​ಗೆ ಕೂಡ ಮಾಹಿತಿ ಕೊಟ್ಟಿದ್ದೇವೆ ಎಂದು ಅವರು ಹೇಳಿದ್ದಾರೆ.

ಅರುಣಾ ಕುಮಾರಿ ತುಂಬಾ ಫ್ರಾಡ್ ಮಾಡಿದ್ದಾಳೆ. ನನಗೆ 2015ರ ಸೆಪ್ಟೆಂಬರ್​ ಕೊನೆಯಲ್ಲಿ ವಂಚನೆ ಮಾಡಿದ್ದಾರೆ. ಫೇಸ್​ಬುಕ್ ಮೂಲಕ ಪರಿಚಯವಾಗಿ ಸಿನಿಮಾಗೆ ಆಫರ್ ಕೊಟ್ಟಿದ್ದರು. ಅರುಣಾ ಕುಮಾರಿ ಸಿನಿಮಾಗೆ ಆಫರ್ ನೀಡಿದ್ದಳು ಎಂದು ಉದ್ಯಮಿ ನಾಗವರ್ಧನ್, ನಾಗೇಂದ್ರ ಪ್ರಸಾದ್ ಜೊತೆಗಿನ ಸುದ್ದಿಗೋಷ್ಠಿಯಲ್ಲಿ ಮಾಹಿತಿ ತೆರೆದಿಟ್ಟಿದ್ದಾರೆ.

ಇದನ್ನೂ ಓದಿ: 

Nikhil Kumarswamy: ತಂದೆ ಆಗುತ್ತಿರುವ ಸುದ್ದಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ನಿಖಿಲ್ ಕುಮಾರಸ್ವಾಮಿ

ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ: ಆರೋಪಿ ಅರುಣಾ ಕುಮಾರಿ ಪುರಾಣ ಬಿಚ್ಚಿಟ್ಟ ನಾಗವರ್ಧನ್, ನಾಗೇಂದ್ರ ಪ್ರಸಾದ್

(Actor JDS Youth leader Nikhil Kumaraswamy talked about Actor Darshan and Producer Umapathy Gowda issue)

Published On - 7:11 pm, Tue, 13 July 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?